ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯ ನ್ಯಾಯಕ್ಕೆ ಆಗ್ರಹಿಸಿ ಆ.17ಕ್ಕೆ ಬಂದ್‌ಗೆ ಕರೆ ನೀಡಿದ ಭಾರತೀಯ ವೈದ್ಯಕೀಯ ಸಂಘ

Date:

ಅತ್ಯಾಚಾರ ಹಾಗೂ ಕೊಲೆಯಾದ ಕೋಲ್ಕತ್ತಾದ ಟ್ರೈನಿ ವೈದ್ಯೆಗೆ ನ್ಯಾಯ ದೊರಕಿಸಬೇಕೆಂಬ ಪ್ರತಿಭಟನೆಯನ್ನು ಬೆಂಬಲಿಸಿ ಭಾರತೀಯ ವೈದ್ಯಕೀಯ ಸಂಘ ಆಗಸ್ಟ್‌ 17 ರಂದು ತುರ್ತು ಸೇವೆಗಳನ್ನು ಹೊರತುಪಡಿಸಿ ದೇಶಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವ 24 ಗಂಟೆಗಳ ಬಂದ್‌ಗೆ ಕರೆ ನೀಡಿದೆ.

ಬಂದ್‌ನ ಸಮಯದಲ್ಲಿ ಒಪಿಡಿ ಹಾಗೂ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ದೇಶಾದ್ಯಂತ ಆಧುನಿಕ ಔಷಧ ವೈದ್ಯರ ಸೇವೆಯನ್ನು ಹಿಂತೆಗೆದುಕೊಳ್ಳಲಾಗುತ್ತದೆ. ಐಎಂಎ ತನ್ನ ವೈದ್ಯರ ನ್ಯಾಯಯುತ ಬೇಡಿಕೆಗಾಗಿ ರಾಷ್ಟ್ರದ ಸಹಾನುಭೂತಿಯನ್ನು ಬಯಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಐಎಂಎ ಪ್ರಕಟಣೆಯ ನಂತರ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(ಎಫ್‌ಒಆರ್‌ಡಿಎ) ಕೂಡ ತಾನು ಹಿಂಪಡೆದಿದ್ದ ಪ್ರತಿಭಟನೆಯ ನಿರ್ಧಾರವನ್ನು ವಾಪಸ್‌ ಪಡೆದಿದ್ದು ಪುನಃ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಗ್ಯ ಸಚಿವಾಲಯದ ಭರವಸೆಯ ಆಧಾರದ ಮೇಲೆ ಉತ್ತಮ ನಂಬಿಕೆಯಿಂದ ಮುಷ್ಕರವನ್ನು ಹಿಂತೆಗೆದುಕೊಳ್ಳುವ ನಮ್ಮ ಹಿಂದಿನ ನಿರ್ಧಾರವು ನಮ್ಮ ಸಮುದಾಯದಲ್ಲಿ ದುಃಖ ಮತ್ತು ನಿರಾಶೆಯನ್ನುಉಂಟುಮಾಡಿದೆ ಎಂದು ನಾವು ಒಪ್ಪಿಕೊಳ್ಳುತ್ತೇವೆ. ನಾವು ಪ್ರತಿಭಟನೆಗೆ ಮತ್ತೆ ಬೆಂಬಲ ನೀಡುತ್ತೇವೆ” ಎಂದು ಎಫ್‌ಒಆರ್‌ಡಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ದಿನ.ಕಾಮ್ ಇಟ್ಟ ಎರಡು ಪುಟ್ಟ ಹೆಜ್ಜೆಗಳು; ನಮ್ಮ ಪ್ರಯತ್ನ ನಿಮ್ಮ ಭಾಗೀದಾರಿಕೆ

ಎಫ್‌ಒಆರ್‌ಡಿಎಯ ಪ್ರತಿನಿಧಿಗಳು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮುಷ್ಕರವನ್ನು ಹಿಂತೆಗೆದುಕೊಳ್ಳುವುದಾಗಿ ಎರಡು ದಿನಗಳ ಹಿಂದೆ ಘೋಷಿಸಿದ್ದರು.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಘಟನೆ ಕೂಡ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದೆ.

ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ಅಮಾನುಷವಾಗಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಮಹಿಳಾ ವೈದ್ಯರಿಗೆ ನ್ಯಾಯವನ್ನು ಕೋರುವುದರ ಜೊತೆಗೆ ಹಿಂಸಾಚಾರಕ್ಕೊಳಗಾಗುತ್ತಿರುವ ಆರೋಗ್ಯ ಕಾರ್ಯಕರ್ತರನ್ನು ರಕ್ಷಿಸುವ ಕಾನೂನಿಗೆ ಒತ್ತಾಯಿಸಿ ವಿವಿಧ ವೈದ್ಯಕೀಯ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...