ಒಂಬತ್ತು ದಿನ ಮುನ್ನವೇ ದೇಶವನ್ನು ಆವರಿಸಿದ ಮುಂಗಾರು ಮಳೆ: ಹಠಾತ್ ಪ್ರವಾಹದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

ಸಾಮಾನ್ಯ ಸಮಯಕ್ಕಿಂತ ಒಂಬತ್ತು ದಿನ ಮುನ್ನವೇ ದೇಶವನ್ನು ಮುಂಗಾರು ಮಳೆ ಆವರಿಸಿದೆ. ಜುಲೈ 8ರ ಬದಲಾಗಿ ಜೂನ್ 29ರಂದೇ ದೇಶದ್ಯಾಂತ ಮುಂಗಾರು ಆವರಿಸಿದೆ. ಇದಾದ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ, ಈ ಮುಂಗಾರಿನಲ್ಲಿ ಭಾರಿ ಮಳೆ ಮತ್ತು ಹಠಾತ್ ಪ್ರವಾಹದ ಎಚ್ಚರಿಕೆಯನ್ನು ನೀಡಿದೆ.

ಈ ಬಾರಿ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಅವಧಿಯಲ್ಲಿ ಶೇಕಡ 108ರಷ್ಟು ಅಧಿಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿದ್ದೀರಾ? ಕೇರಳ ಕರಾವಳಿಗೆ ಮುಂಗಾರು ಪ್ರವೇಶ; ಮೂರು ದಿನ ಮುನ್ನವೇ ಮಳೆಗಾಲ ಆರಂಭ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 26 ವರ್ಷಗಳಲ್ಲಿ ನಾಲ್ಕನೇ ಬಾರಿಗೆ ಮುಂಗಾರು ಅವಧಿಗೂ ಮುನ್ನ ದೇಶವನ್ನು ಆವರಿಸಿದೆ. ಕಳೆದ ವರ್ಷ, ಜುಲೈ 2ರಂದು ಮಾನ್ಸೂನ್ ಇಡೀ ದೇಶವನ್ನು ಆವರಿಸಿತ್ತು. ಈ ವರ್ಷ ಜೂನ್ 1ರ ಬದಲಾಗಿ ಮೇ 24ರಂದೇ ಕೇರಳವನ್ನು ಮುಂಗಾರು ಪ್ರವೇಶಿಸಿದೆ. ಇಡೀ ದೇಶವನ್ನೂ ಅವಧಿಗೂ ಮುನ್ನವೇ ಆವರಿಸಿದೆ.

ಕಳೆದ 26 ವರ್ಷಗಳಲ್ಲಿ, 2013 ಮತ್ತು 2016 (ಜೂನ್ 16), 2018 (ಜೂನ್ 29), ಮತ್ತು 2005 (ಜೂನ್ 30) ವರ್ಷಗಳಲ್ಲಿ ಜೂನ್‌ನಲ್ಲಿ ಮಾನ್ಸೂನ್ ಇಡೀ ದೇಶವನ್ನು ಆವರಿಸಿದೆ ಎಂದು ಐಎಂಡಿ ಡೇಟಾ ಹೇಳುತ್ತದೆ.

ಮುಂದಿನ ಏಳು ದಿನಗಳಲ್ಲಿ ವಾಯುವ್ಯ, ಮಧ್ಯ, ಪೂರ್ವ ಮತ್ತು ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಜೂನ್ 29 ಮತ್ತು 30ರಂದು ಜಾರ್ಖಂಡ್, ಜೂನ್ 29ರಂದು ಒಡಿಶಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಮತ್ತು ಪೂರ್ವ ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ, ಉತ್ತರಾಖಂಡದಾದ್ಯಂತ ಮತ್ತು ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ ಮತ್ತು ದೆಹಲಿಯ ಕೆಲವು ಭಾಗಗಳಲ್ಲಿ, ಯಮುನಾನಗರ ಜಿಲ್ಲೆ ಸೇರಿದಂತೆ ಕೆಲವೆಡೆ ಹಠಾತ್ ಪ್ರವಾಹ ಉಂಟಾಗುವ ಅಪಾಯವಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇದಲ್ಲದೆ, ಉತ್ತರ ಒಡಿಶಾ, ದಕ್ಷಿಣ ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ ಸಮೀಪದ ಪ್ರದೇಶಗಳಲ್ಲಿಯೂ ದಿಢೀರ್ ಪ್ರವಾಹದ ಎಚ್ಚರಿಕೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...