ಟ್ರಂಪ್‌ ಸುಂಕ ಪರಿಣಾಮ: ಸೌರಾಷ್ಟ್ರದಲ್ಲಿ ಉದ್ಯೋಗ ಕಳೆದುಕೊಂಡ ಲಕ್ಷಕ್ಕೂ ಹೆಚ್ಚು ವಜ್ರ ಕಾರ್ಮಿಕರು

Date:

ಗುಜರಾತ್‌ನ ಸೌರಾಷ್ಟ್ರ ಪ್ರದೇಶದಲ್ಲಿ ವಜ್ರ ಕತ್ತರಿಸುವ ಮತ್ತು ಹೊಳಪು ನೀಡುವ ಕೆಲಸದಲ್ಲಿ ತೊಡಗಿದ್ದ ಸುಮಾರು 1 ಲಕ್ಷ ಕಾರ್ಮಮಿಕರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಈ ಉದ್ಯೋಗ ನಷ್ಟಕ್ಕೆ ಭಾರತದ ಮೇಲೆ ಟ್ರಂಪ್ ಹೇರಿರುವ ಭಾರೀ ಸುಂಕವೇ ಪ್ರಧಾನ ಕಾರಣವಾಗಿದೆ ಎಂದು ವರದಿಯಾಗಿದೆ.

ಅಮೆರಿಕದಲ್ಲಿ ಟ್ರಂಪ್‌ 2ನೇ ಬಾರಿಗೆ ಅಧಿಕಾರಕ್ಕೆ ಬರುವ ಮುನ್ನ ಭಾರತದ ಸರಕುಗಳ ಮೇಲೆ ಅಮೆರಿಕವು ಗರಿಷ್ಠ 10%ವರೆಗೆ ಸುಂಕವನ್ನು ವಿಧಿಸುತ್ತಿತ್ತು. ಆದರೆ, ಟ್ರಂಪ್ ಅಧ್ಯಕ್ಷರಾದ ಬಳಿಕ, ಭಾರತದ ಮೇಲೆ ಭಾರೀ ಸುಂಕ ಹೊರೆ ಹೇರಿದ್ದಾರೆ. ಏಪ್ರಿಲ್ 2ರಂದು ಮೊದಲ ಬಾರಿಗೆ ಸುಂಕ ಹೆಚ್ಚಿಸಿದ ಟ್ರಂಪ್, ಭಾರತದ ಮೇಲೆ 26% ಸುಂಕ ವಿಧಿಸಿದ್ದರು. ಬಳಿಕ, ಆಗಸ್ಟ್‌ 6ರಂದು 25% ಸುಂಕ ಮತ್ತು 25% ದಂಡವಾಗಿ ಒಟ್ಟು 50% ಸುಂಕವನ್ನು ನಿಗದಿ ಮಾಡಿದ್ದಾರೆ. ಇದು ಭಾರತದ ಹಲವಾರು ಉದ್ಯಮ ಕ್ಷೇತ್ರಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ವಜ್ರ ವ್ಯಾಪಾರದ ಮೇಲೂ ಪರಿಣಾಮ ಬೀರಿದ್ದು, ಸೌರಾಷ್ಟ್ರ ಪ್ರದೇಶದಲ್ಲಿಯೇ 1 ಲಕ್ಷ ವಜ್ರ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ.

ಅಮೆರಿಕವು ಸುಂಕವನ್ನು ಹೆಚ್ಚಿಸಿದ ಬಳಿಕ, ಅಮೆರಿಕದಿಂದ ವಜ್ರಕ್ಕಾಗಿನ ಬೇಡಿಕೆ ಸ್ಥಗಿತಗೊಂಡಿದೆ. ಅಮೆರಿಕದ ಕಂಪನಿಗಳು ವಜ್ರಕ್ಕೆ ಆರ್ಡರ್‌ ಕೊಡುತ್ತಿಲ್ಲ. ವಜ್ರ ಉದ್ಯಮದಲ್ಲಿ ತೊಡಗಿರುವ ಸೌರಾಷ್ಟ್ರದ ಭಾವನಗರ, ಅಮ್ರೇಲಿ ಮತ್ತು ಜುನಾಗಢದಲ್ಲಿರುವ ಸಣ್ಣ ಘಟಕಗಳು ಗಂಭೀರ ಸಮಸ್ಯೆಗೆ ಸಿಲುಕಿವೆ. ಹೀಗಾಗಿ, ಲಕ್ಷಾಂತರ ಮಂದಿ ಉದ್ಯೋಗಿಗಳು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಗುಜರಾತ್‌ನ ಡೈಮಂಡ್ ವರ್ಕರ್ಸ್ ಯೂನಿಯನ್ (ಡಿಡಬ್ಲ್ಯೂಯು) ಉಪಾಧ್ಯಕ್ಷ ಭವೇಶ್ ಟ್ಯಾಂಕ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿಯ (GJEPC) ದತ್ತಾಂಶದ ಪ್ರಕಾರ, 2024ರಲ್ಲಿ ಅಮೆರಿಕದ ಒಟ್ಟು ವಜ್ರ ಆಮದಿನಲ್ಲಿ 68% ಮತ್ತು ಮೌಲ್ಯದಲ್ಲಿ 42%ರಷ್ಟು ($5.79 ಶತಕೋಟಿ) ಪಾಲು ಭಾರತದ್ದಾಗಿತ್ತು. ಆದರೆ, ಈ ವರ್ಷ ಅಮೆರಿಕದ ಆಮದು ಪಾಲಿನಲ್ಲಿ ಭಾರತದ ಕೊಡುಗೆ ತೀವ್ರವಾಗಿ ಕುಸಿಯುತ್ತಿದೆ. 2025-26ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ $3671.33 ಮಿಲಿಯನ್ ಕತ್ತರಿಸಿದ ಮತ್ತು ಹೊಳಪು ಮಾಡಿದ ವಜ್ರಗಳನ್ನು ಅಮೆರಿಕಗೆ ರಫ್ತು ಮಾಡಲಾಗಿದೆ. ಇದು, ಹಿಂದಿನ ವರ್ಷದ ತ್ರೈಮಾಸಿಕಕ್ಕೆ ($2837.29 ಮಿಲಿಯನ್) ಹೋಲಿಸಿದರೆ 22.72%ನಷ್ಟು ಕುಸಿತವಾಗಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಈ ಲೇಖನ ಓದಿದ್ದೀರಾ?: ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಒಟ್ಟು ರಫ್ತಿನಲ್ಲಿ 22%ಕ್ಕಿಂತ ಹೆಚ್ಚು ಕುಸಿತವು ವಜ್ರ ಉದ್ಯಮದ ಮೇಲೆ ಪರಿಣಾಮ ಬೀರಿದೆ. ವಜ್ರವನ್ನು ಕತ್ತರಿಸುವುದು ಮತ್ತು ಹೊಳಪು ನೀಡುವ ಕೆಲಸಗಳು ಇಲ್ಲದಂತಾಗಿವೆ. ಈ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮಾಸಿಕ 15,000ದಿಂದ 20,000 ರೂ. ವೇತನ ಪಡೆಯುತ್ತಿದ್ದರು. ಆದರೆ, ಈಗ ಅವರು ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ. ಅವರ ಭವಿಷ್ಯ ಅನಿಶ್ಚಿತವಾಗಿದೆ.

“ಯುಎಸ್ ನಮ್ಮ ಏಕೈಕ ಅತಿದೊಡ್ಡ ವಜ್ರದ ಮಾರುಕಟ್ಟೆಯಾಗಿದೆ. ರಫ್ತುಗಳಲ್ಲಿ $10 ಬಿಲಿಯನ್‌ಗಿಂತಲೂ ಹೆಚ್ಚು ಪಾಲನ್ನು ಹೊಂದಿದೆ. ಇದು ನಮ್ಮ ಉದ್ಯಮದ ಒಟ್ಟು ಜಾಗತಿಕ ವ್ಯಾಪಾರದಲ್ಲಿ ಸುಮಾರು 30% ಆಗಿದೆ. ಈಗ ಅಮೆರಿಕದ ಭಾರೀ ಸುಂಕವು ವಜ್ರ ಉದ್ಯಮಕ್ಕೆ ತೀವ್ರ ವಿನಾಶಕಾರಿಯಾಗಿ ಪರಿಣಮಿಸಿದೆ” ಎಂದು GEJPC ಅಧ್ಯಕ್ಷ ಕಿರಿತ್ ಬನ್ಸಾಲಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...