ಲಿಂಗತ್ವ ಅಲ್ಪಸಂಖ್ಯಾತರ ಕಳಕಳಿ ಕುರಿತಾದ ಎನ್‌ಸಿಇಆರ್‌ಟಿ ಮಾಡ್ಯೂಲ್ ಜಾರಿಗೆ ತರಲು ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

Date:

ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರೂಪಿಸಿರುವ “ಶಾಲಾ ಶಿಕ್ಷಣ ಪ್ರಕ್ರಿಯೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕಳಕಳಿ” ಕುರಿತಾದ ಕರಡು ಮಾಡ್ಯೂಲ್‌ ಜಾರಿಗೆ ತರುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಮದ್ರಾಸ್ ಹೈಕೋರ್ಟ್ ಈಚೆಗೆ ನಿರ್ದೇಶಿಸಿದೆ.

ಎನ್‌ಸಿಇಆರ್‌ಟಿಯ ಕರಡು ಮಾಡ್ಯೂಲ್ ಅನ್ನು ಎರಡು ವರ್ಷಗಳ ಹಿಂದೆಯೇ ಸಚಿವಾಲಯದ ಪರಿಗಣನೆಗೆ ಕಳುಹಿಸಲಾಗಿದ್ದರೂ ಸಚಿವಾಲಯ ಅದಕ್ಕೆ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಸೆಪ್ಟೆಂಬರ್ 18ರಂದು ಹೊರಡಿಸಿದ ಆದೇಶ ತಿಳಿಸಿದೆ.

ಸಚಿವಾಲಯದ ಬಳಿ ಸಾಕಷ್ಟು ಸಮಯದಿಂದ ಈ ವಿಚಾರ ಬಾಕಿ ಉಳಿದಿದೆ. ಮಾಡ್ಯೂಲ್‌ ಅನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲು ಯೋಜಿಸಲಾಗಿತ್ತು. ಆದರೆ ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದರೂ ಸಚಿವಾಲಯ ಇನ್ನೂ ಪ್ರತಿಕ್ರಿಯಿಸಿಲ್ಲ. ಸಚಿವಾಲಯ ಸೂಕ್ಷ್ಮತೆಯಿಂದ ಈ ವಿಚಾರವಾಗಿ ವರ್ತಿಸಿ ಎನ್‌ಸಿಇಆರ್‌ಟಿ ಸಲ್ಲಿಸಿ ಕರಡು ಮಾಡ್ಯೂಲ್‌ ಜಾರಿಗೆ ತರುತ್ತದೆ ಎಂಬ ನಿರೀಕ್ಷೆ ಇದೆ ಎಂಬುದಾಗಿ ನ್ಯಾಯಾಲಯ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪುಣೆ: ಕೆಲಸದ ಒತ್ತಡದಿಂದ ಸಿಎ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ಸಚಿವಾಲಯ ಈ ವಿಚಾರಕ್ಕೆ ಅಗತ್ಯ ಆದ್ಯತೆ ನೀಡಿ ತಾನು ಮುಂದಿನ ವಿಚಾರಣೆ ನಡೆಸಲಿರುವ ಜನವರಿ 6, 2025 ರೊಳಗೆ ಶಾಲೆಗಳಲ್ಲಿ ಇದನ್ನು ಜಾರಿಗೆ ತರಬೇಕು ಎಂದು ಅದು ಹೇಳಿದೆ.

ಸಲಿಂಗ ಪ್ರೇಮಿ ಜೋಡಿಯೊಂದು ತನ್ನ ಸಂಬಂಧಿಕರಿಂದ ತಮಗೆ ರಕ್ಷಣೆ ನೀಡಬೇಕೆಂದು ಹೈಕೋರ್ಟ್‌ಗೆ ಈ ಹಿಂದೆ ಮೇಲ್ಮನವಿ ಸಲ್ಲಿಸಿತ್ತು. ಆ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ವೆಂಕಟೇಶ್‌ ಈ ನಿರ್ದೇಶನ ನೀಡಿದ್ದಾರೆ.  ವಿಚಾರಣೆ ಅವಧಿಯಲ್ಲಿ ಎಲ್‌ಜಿಬಿಟಿಕ್ಯೂಐಎ+ ವ್ಯಕ್ತಿಗಳ ಏಳಿಗೆಗೆ ಸಂಬಂಧಿಸಿದಂತೆ ನ್ಯಾಯಾಲಯ ಹಲವು ಸೂಚನೆಗಳನ್ನು ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...