ಸುಪ್ರೀಂ ಕೋರ್ಟ್‌ಗೆ ಹಾಜರಾದ ಅಂಧ ವಕೀಲೆ: ನ್ಯಾಯಾಲಯದ ಇತಿಹಾಸದಲ್ಲಿ ಇದೇ ಮೊದಲು

Date:

ಇದೇ ಮೊದಲ ಬಾರಿಗೆ ಅಂಧ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಹುಟ್ಟುವಾಗಲೇ ದೃಷ್ಟಿ ದೋಷವನ್ನು ಹೊಂದಿದ್ದ ಅಂಚಲ್ ಭತೇಜಾ ನಂತರ ರೆಟಿನೋಪತಿಯಿಂದಾಗಿ ಸಂಪೂರ್ಣವಾಗಿ ದೃಷ್ಟಿಯನ್ನು ಕಳೆದುಕೊಂಡಿದ್ದರು. ಜೂನ್.6ರಂದು ಅಂಚಲ್ ಭತೇಜಾ ಸುಪ್ರೀಂ ಕೋರ್ಟ್ ಮುಂದೆ ಅರ್ಜಿದಾರರ ಪರವಾಗಿ ಹಾಜರಾಗಿದ್ದರು.

ಶಾಲಾ ಶಿಕ್ಷಣವನ್ನು ಆಡಿಯೋಬುಕ್‌ಗಳ ಸಹಾಯದಿಂದ ಪೂರ್ಣಗೊಳಿಸಿದ ಅಂಚಲ್ ಭತೇಜಾ 2023ರಲ್ಲಿ ಕಾನೂನು ಪದವಿಯನ್ನು ಪೂರ್ಣಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರಾಖಂಡ ಸಿವಿಲ್ ನ್ಯಾಯಾಧೀಶರ ನೇಮಕಾತಿಗಾಗಿ ಹೊರಡಿಸಲಾದ ಜಾಹೀರಾತಿನ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿದಾರರ ಪರವಾಗಿ ಭತೇಜಾ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮುಂದೆ ಹಾಜರಾದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೋದಿ ಶರಣಾಗಿದ್ದಾರೆ’ ಎಂಬ ರಾಹುಲ್ ಹೇಳಿಕೆಯು ಹಲವು ಪ್ರಶ್ನೆಗಳನ್ನು ಎತ್ತುತ್ತದೆ

ಜೂನ್ 6ರಂದು ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ನ್ಯಾಯಮೂರ್ತಿ ಎಸ್.ಸಿ. ಶರ್ಮಾ ಅವರ ಪೀಠದ ಮುಂದೆ ಅವರು ತುರ್ತು ವಿಚಾರಣೆಗೆ ವಿಷವನ್ನು ಪ್ರಸ್ತಾಪಿಸಿದರು. ಜೂನ್ 9ಕ್ಕೆ ಈ ಬಗ್ಗೆ ವಿಚಾರಣೆಗೆ ಪಟ್ಟಿ ಮಾಡುವಂತೆ ನ್ಯಾಯಾಲಯವು ಒಪ್ಪಿಕೊಂಡಿತು.

ಸುಪ್ರೀಂ ಕೋರ್ಟ್‌ಗೆ ಹಾಜರಾದ ಅನುಭವವನ್ನು ಭತೇಜಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ . ʼಇದು ಸಂತೋಷ ಮತ್ತು ದುಃಖ ಎರಡನ್ನೂ ತರುವ ಕ್ಷಣವಾಗಿದೆ. ನಾನು ಇಲ್ಲಿದ್ದೇನೆ ಎಂದು ಹೆಮ್ಮೆಪಡುತ್ತೇನೆ. ಆದರೆ, ನಾನು ಮೊದಲಿಗಳಾಗದಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದು ನನಗೆ ಅನಿಸುತ್ತಿದೆʼ ಎಂದು ಹೇಳಿದ್ದಾರೆ.

2023ರ ಸೆಪ್ಟೆಂಬರ್‌ನಲ್ಲಿ ಕಿವಿ ಕೇಳಿಸದ ಹಾಗೂ ಮಾತು ಬಾರದ ವಕೀಲೆ ಸಾರಾ ಸನ್ನಿ ಅವರು ಸಂಜ್ಞೆ ಭಾಷೆಗಳ ಮೂಲಕ ವ್ಯಾಖ್ಯಾನಕಾರ ಸೌರವ್‌ ರಾಯ್‌ಚೌಧರಿ ಅವರ ಸಹಾಯದಿಂದ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...