ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು ನಿರ್ಧಾರ ತೆಗೆದುಕೊಳ್ಳಲು ಗಡುವು ವಿಧಿಸಿದ ಸುಪ್ರೀಂ ಕೋರ್ಟ್

Date:

ರಾಜ್ಯಪಾಲರು ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಸೂದೆಗಳ ವಿಲೇವಾರಿ ಬಗ್ಗೆ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳಿಗೆ ಸುಪ್ರೀಂ ಕೋರ್ಟ್ ಗಡುವು ನಿಗದಿಪಡಿಸಿದೆ.

ಬಾಕಿ ಉಳಿದಿರುವ ಮಸೂದೆಗಳಿಗೆ ಒಪ್ಪಿಗೆಯನ್ನು ತಡೆಹಿಡಿದ ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿತ್ತು.

ರಾಜ್ಯ ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆಗೆ ಅಂಕಿತ ಹಾಕದ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿ ಕುರಿತು ತೀರ್ಪನ್ನು ನೀಡುವಾಗ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರ ಪೀಠವು, 201ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳ ಕಾರ್ಯನಿರ್ವಹಣೆಯು ನ್ಯಾಯಾಂಗ ಪರಿಶೀಲನೆಯ ವ್ಯಾಪ್ತಿಗೆ ಒಳಪಡುತ್ತದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ಯಾಚಾರ ಯತ್ನ ಮಾಮೂಲು ಸಂಗತಿಯೇ ಗೃಹಸಚಿವರೇ?

ವಿಧಿ 201ರ ಪ್ರಕಾರ, ರಾಜ್ಯಪಾಲರು ಮಸೂದೆಯನ್ನು ಕಾಯ್ದಿರಿಸಿದಾಗ, ರಾಷ್ಟ್ರಪತಿಗಳು ಮಸೂದೆಗೆ ಒಪ್ಪಿಗೆ ನೀಡಬೇಕು ಅಥವಾ ಒಪ್ಪಿಗೆ ನೀಡದೆ ತಡೆಹಿಡಿಯುವುದಾಗಿ ಘೋಷಿಸಬೇಕು. ಆದರೆ, ಸಂವಿಧಾನದಲ್ಲಿ ಯಾವುದೇ ಕಾಲಮಿತಿ ಒದಗಿಸಿಲ್ಲ.

ರಾಷ್ಟ್ರಪತಿಗಳು ಈ ವಿಚಾರದಲ್ಲಿ ʼಪಾಕೆಟ್ ವೀಟೋʼ ಅಧಿಕಾರವನ್ನು ಹೊಂದಿಲ್ಲ. ಅವರು ಮಸೂದೆಗೆ ಒಪ್ಪಿಗೆ ನೀಡಬೇಕು ಅಥವಾ ತಡೆಹಿಡಿಯಬೇಕು. ಕಾನೂನಿನ ಅಡಿಯಲ್ಲಿ ಯಾವುದೇ ಅಧಿಕಾರವನ್ನು ಚಲಾಯಿಸಲು ಯಾವುದೇ ಸಮಯದ ಮಿತಿಯನ್ನು ಸೂಚಿಸದಿದ್ದರೂ ಅದನ್ನು ಸಮಂಜಸವಾದ ಸಮಯದೊಳಗೆ ಚಲಾಯಿಸಬೇಕು ಎಂದು ಕಾನೂನಿನ ನಿಲುವಾಗಿದೆ. ಮೂರು ತಿಂಗಳ ಅವಧಿ ಮೀರಿ ವಿಳಂಬವಾದಲ್ಲಿ ಸೂಕ್ತ ಕಾರಣಗಳನ್ನು ದಾಖಲಿಸಿ ಸಂಬಂಧಪಟ್ಟ ರಾಜ್ಯಕ್ಕೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...