ಪೊಲೀಸ್ ಭದ್ರತೆಯಲ್ಲಿ ನಡೆದ ದಲಿತ ವರನ ವಿವಾಹ ಮೆರವಣಿಗೆ

Date:

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಮಧ್ಯಪ್ರವೇಶದ ಬಳಿಕ ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯ ತಾರ್ವಾಡಾ ಗ್ರಾಮದ ದಲಿತ ಕುಟುಂಬವೊಂದು ಪೊಲೀಸ್‌ ಭದ್ರತೆಯಲ್ಲಿ ವಿವಾಹ ಮೆರವಣಿಗೆ ನಡೆಸಿತು.

ವರನ ಸಹೋದರ ಸುರೇಶ್ ಬಮಾನಿಯಾ ಅವರು ತಮ್ಮ ಸಹೋದರನ ವಿವಾಹ ಮೆರವಣಿಗೆಗೆ ಪೊಲೀಸ್ ರಕ್ಷಣೆ ಕೋರಿ ಜಿಲ್ಲಾ ಪೊಲೀಸರಿಗೆ ಪತ್ರ ಬರೆದಿದ್ದರು.

ಇದರ ಬೆನ್ನಲ್ಲೇ ಪರಿಶಿಷ್ಟ ಜಾತಿ ಸಮಿತಿಯು ಈ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. 2022ರಲ್ಲಿ ದಲಿತ ವ್ಯಕ್ತಿಯ ವಿವಾಹ ಮೆರವಣಿಗೆಗೆ ಅಡ್ಡಿಪಡಿಸಿದ ಘಟನೆಯನ್ನು ಬಮಾನಿಯಾ ಪತ್ರದಲ್ಲಿ ಉಲ್ಲೇಖಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ರಾಜ್ಸಮಂದ್‌ ಪೊಲೀಸ್ ವರಿಷ್ಠಾಧಿಕಾರಿಗೆ ಶುಕ್ರವಾರ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಪತ್ರ ಬರೆದಿದೆ. ಪತ್ರದಲ್ಲಿ ವಿವಾಹ ಮೆರವಣಿಗೆಗೆ ದಲಿತ ಕುಟುಂಬಕ್ಕೆ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಸೂಚಿಸಿತ್ತು. ಇದಲ್ಲದೆ ಈ ಕುರಿತು 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿತ್ತು.

ರಾಜ್ಸಮಂದ್ ಎಸ್ಪಿ ಮನೀಶ್ ತ್ರಿಪಾಠಿ ಈ ಬಗ್ಗೆ ಪ್ರತಿಕ್ರಿಯಿಸಿ, ಶನಿವಾರ ಪೊಲೀಸ್‌ ಭದ್ರತೆಯಲ್ಲಿ ವಿವಾಹ ಮೆರವಣಿಗೆ ನಡೆದಿದೆ. ಗ್ರಾಮದಲ್ಲಿ 170 ಪೊಲೀಸ್ ಅಧಿಕಾರಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಡ್ರೋನ್‌ಗಳನ್ನು ಬಳಸಲಾಗಿದೆ.

ಎಸ್ಸಿ ಸಮಿತಿಯ ನಿರ್ದೇಶನದಂತೆ ಪೊಲೀಸರು 15 ದಿನಗಳಲ್ಲಿ ಈ ಕುರಿತು ವರದಿಯನ್ನು ಸಲ್ಲಿಸಬೇಕಾಗುತ್ತದೆ ಎಂದು ಹೇಳಿದರು. ಮಧ್ಯಪ್ರದೇಶದಲ್ಲಿ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ ನಡೆಸಲಾಗಿತ್ತು. ಇದಾದ ಒಂದು ವಾರದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...