ಆದಾಯ ತೆರಿಗೆಯಿಂದ ರದ್ದಾಗಿದ್ದ ಕಾಂಗ್ರೆಸ್ ಬ್ಯಾಂಕ್ ಖಾತೆಗಳು ಚಾಲ್ತಿಗೆ

Date:

ಆದಾಯ ತೆರಿಗೆ ಇಲಾಖೆಯಿಂದ ರದ್ದಾಗಿದ್ದ ಕಾಂಗ್ರೆಸ್ ಪಕ್ಷದ ಹಲವು ಖಾತೆಗಳು ಒಂದು ಗಂಟೆಯ ನಂತರ ಮರಳಿ ಚಾಲ್ತಿಗೊಂಡಿವೆ. ಪಕ್ಷವು ದೆಹಲಿಯ ಆದಾಯ ತೆರಿಗೆ ಇಲಾಖೆಯ ಮೇಲ್ಮನವಿ ಮಂಡಳಿಗೆ ಮನವಿ ಸಲ್ಲಿಸಿದ ನಂತರ ಕಾರ್ಯಗತಗೊಂಡಿವೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಖಜಾಂಜಿ ಅಜಯ್‌ ಮಕೇನ್ “ ಇದು ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಅಡ್ಡಿಪಡಿಸುವ ಪೆಟ್ಟಾಗಿದೆ. ಇದು ಒಂದು ಪಕ್ಷದ ಆಡಳಿತವಾಗಿದೆ. ಪ್ರಮುಖ ವಿರೋಧ ಪಕ್ಷವನ್ನು ಅಪೋಷಣ ತೆಗೆದುಕೊಳ್ಳಲು ಹೊರಟಿದ್ದಾರೆ. ನ್ಯಾಯಾಂಗ, ಮಾಧ್ಯಮ ಹಾಗೂ ಜನರಿಂದ ನಾವು ನ್ಯಾಯವನ್ನು ಕೇಳುತ್ತಿದ್ದೇವೆ”ಎಂದು ಹೇಳಿದರು.

“ಮನ್‌ಮೋಹನ್ ಸಿಂಗ್ ಸಮಿತಿ ವರದಿಯ ಆಧಾರದ ಮೇಲೆ ನಾವು ನಮಗೆ ಕೊಡುಗೆ ನೀಡಿರುವ ಎಲ್ಲ ಶಾಸಕ, ಸಂಸದರ ಹೆಸರನ್ನು ನೀಡಿದ್ದೇವೆ. ಪ್ರಸ್ತುತ ನಮ್ಮ ಬಳಿ ಖರ್ಚು ಮಾಡಲು ಹಣವಿಲ್ಲ. ಇದರಿಂದ ವಿದ್ಯುತ್ ಶುಲ್ಕ, ಸಿಬ್ಬಂದಿ ವೇತನ, ನಮ್ಮ ನ್ಯಾಯ ಯಾತ್ರೆ ಪ್ರತಿಯೊಂದರ ಮೇಲೆ ಪರಿಣಾಮ ಬೀರಲಿದೆ. ಈ ಸಮಯದಲ್ಲಿ ಇದು ಷ್ಪಷ್ಟವಾಗಿದೆ. ನಾವುಒಂದು ಪಾನ್‌ ಹಾಗೂ ನಾಲ್ಕು ಖಾತೆಯೊಂದಿಗೆ ಎಲ್ಲವನ್ನು ಸಂಪರ್ಕಗೊಳಿಸಿದ್ದೇವೆ” ಎಂದು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಖಾತೆ ರದ್ದುಗೊಳಿಸಿದ್ದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, “ಅಸಂವಿದಾನಿಕ ಹಣವನ್ನು ಸಂಗ್ರಹಿಸಿ ಬಿಜೆಪಿ ಅದನ್ನು ಚುನಾವಣೆಗೆ ಬಳಸಿಕೊಂಡಿದೆ. ಆದರೆ ನಾವು ಕ್ರೌಡ್‌ಫಂಡಿಂಗ್‌ ಮೂಲಕ ಹಣವನ್ನು ಸಂಗ್ರಹಿಸಿದ್ದೇವೆ. ಭವಿಷ್ಯದಲ್ಲಿ ಚುನಾವಣೆ ಇಲ್ಲದ ರೀತಿಯಲ್ಲಿ ಮಾಡುತ್ತಿವೆ ಎಂಬುದನ್ನು ನಾವು ಈ ಮೊದಲೇ ಹೇಳಿದ್ದೇವೆ. ಬಹು ಪಕ್ಷ ಪದ್ಧತಿಯನ್ನು ಕಾಪಾಡಿ ಎಂದು ನಾವು ನ್ಯಾಯಾಂಗಕ್ಕೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ನಾವು ಅನ್ಯಾಯ ಹಾಗೂ ಸರ್ವಾಧಿಕಾರದ ವಿರುದ್ಧ ಬೀದಿಗಳಲ್ಲಿ ಹೋರಾಟ ನಡೆಸುತ್ತೇವೆ” ಎಂದು ಹೇಳಿದ್ದಾರೆ.

“ಅಧಿಕಾರದ ಅಮಲಿನಲ್ಲಿ ಮೋದಿ ಸರ್ಕಾರ ಲೋಕಸಭೆ ಚುನಾವಣೆಗೆ ಕೆಲವೇ ವಾರಗಳಿರುವ ಮುನ್ನ ದೇಶದ ಅತ್ಯಂತ ದೊಡ್ಡ ವಿಪಕ್ಷ ಕಾಂಗ್ರೆಸ್‌ನ ಖಾತೆಗಳನ್ನು ರದ್ದುಗೊಳಿಸಿದೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಪೆಟ್ಟು” ಎಂದು ಖರ್ಗೆ ಹೇಳಿದ್ದಾರೆ.

45 ದಿನಗಳ ತಡವಾಗಿ ಆದಾಯ ಇಲಾಖೆ ರಿಟರ್ನ್‌ಅನ್ನು ಸಲ್ಲಿಸಿರುವುದಕ್ಕೆ ರದ್ದುಗೊಳಿಸಲಾಗಿದೆ ಎಂದು ಹೇಳಲಾಗಿದ್ದು, ಇದು ತೆರಿಗೆ ಇಲಾಖೆಯಿಂದ ಉಂಟಾಗಿರುವ ನಿಯಯದ ಉಲ್ಲಂಘನೆ ಹಾಗೂ ಕೇಂದ್ರದ ಹಸ್ತಕ್ಷೇಪ ಎಂದು ಕಾಂಗ್ರೆಸ್ ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...