ತೆಲಂಗಾಣದ ಬಿಆರ್‌ಎಸ್ ಪಕ್ಷಕ್ಕೆ ಹೀನಾಯ ಸೋಲು: 14 ಕ್ಷೇತ್ರಗಳಲ್ಲಿ 3ನೇ ಸ್ಥಾನ

Date:

ತೆಲಂಗಾಣದ ಬಿಆರ್‌ಎಸ್ ಪಕ್ಷ 2024ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದೆ. ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ನಡೆದ ಎರಡನೇ ಚುನಾವಣೆಯಲ್ಲಿ ಪಕ್ಷವು ಭಾರಿ ಆಘಾತ ಅನುಭವಿಸಿದೆ.

2023ರ ನವೆಂಬರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರತ್‌ ರಾಷ್ಟ್ರೀಯ ಪಕ್ಷ(ಬಿಆರ್‌ಎಸ್) ಕಾಂಗ್ರೆಸ್‌ ಎದುರು ಸೋಲು ಕಂಡಿತ್ತು. 2014ರಲ್ಲಿ ಆಂಧ್ರ ಪ್ರದೇಶದಿಂದ ಪ್ರತ್ಯೇಕ ರಾಜ್ಯವನ್ನಾಗಿ ಮಾರ್ಪಡಿಸಲಾಗಿತ್ತು. ಪ್ರತ್ಯೇಕ ರಾಜ್ಯ ನಿರ್ಮಾಣದಲ್ಲಿ ಬಿಆರ್‌ಎಸ್‌ ಅಧ್ಯಕ್ಷ ಕೆ ಚಂದ್ರಶೇಖರ್‌ ರಾವ್‌ ಪ್ರಮುಖ ಪಾತ್ರ ವಹಿಸಿದ್ದರು.

ಕಳೆದ 10 ವರ್ಷಗಳಲ್ಲಿ ಬಿಆರ್‌ಎಸ್‌ ಪಕ್ಷದ ವಿರುದ್ಧ ಹತ್ತಾರು ಭ್ರಷ್ಟಾಚಾರ ಆರೋಪ, ಅದಕ್ಷ ಆಡಳಿತದಿಂದ ಜನರು ಬೇಸತ್ತು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ಚುನಾವಣೆಯ 17ನೇ ಲೋಕಸಭಾ ಕ್ಷೇತ್ರಗಳಲ್ಲಿ ಬಿಆರ್‌ಎಸ್‌ ಒಂದೂ ಕ್ಷೇತ್ರದಲ್ಲೂ ಜಯಗಳಿಸಿಲ್ಲ. 14 ಕ್ಷೇತ್ರಗಳಲ್ಲಿ ಪಕ್ಷ ಮೂರನೇ ಸ್ಥಾನಕ್ಕೆ ಇಳಿದಿದೆ. ಎರಡು ಕ್ಷೇತ್ರಗಳಲ್ಲಿ ಎರಡನೇ ಸ್ಥಾನ ಹಾಗೂ ಒಂದು ಕ್ಷೇತ್ರದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

ಒಟ್ಟಾರೆ ಪ್ರಕಟಗೊಂಡಿರುವ ಫಲಿತಾಂಶದಲ್ಲಿ ಬಿಜೆಪಿ 8, ಕಾಂಗ್ರೆಸ್‌ 8 ಹಾಗೂ ಅಸಾಸುದ್ದೀನ್‌ ಓವೈಸಿ ಅವರ ಎಐಎಂಐಎಂ ಪಕ್ಷ ಒಂದು ಕ್ಷೇತ್ರದಲ್ಲಿ ಜಯಗಳಿಸಿದೆ.

ಮತ್ತೊಂದು ತೆಲುಗು ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಟಿಡಿಪಿ 16, ಬಿಜೆಪಿ 3, ವೈಎಸ್ಆರ್‌ಸಿಪಿ 4 ಹಾಗೂ ಜನಸೇನಾ ಪಕ್ಷ 2 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ 134, ಜನಸೇನಾ ಪಕ್ಷ 21, ವೈಎಸ್‌ಆರ್‌ಸಿಪಿ 12 ಹಾಗೂ ಬಿಜೆಪಿ 8 ಸ್ಥಾನಗಳಲ್ಲಿ ಜಯಗಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...