ಹೆಚ್ಚುತ್ತಿರುವ ವಲಸೆ ಕಾರ್ಮಿಕರ ಹತ್ಯೆ: ಬಂಗಾಳದಲ್ಲಿ ತೀವ್ರ ಪ್ರತಿಭಟನೆ

Date:

ಇತ್ತೀಚೆಗೆ, ಜಾರ್ಖಂಡ್‌ನಲ್ಲಿ ಪಶ್ಚಿಮ ಬಂಗಾಳ ಮೂಲದ ವಲಸೆ ಕಾರ್ಮಿಕನನ್ನು ಹತ್ಯೆಯಾಗಿದೆ. ಅಲ್ಲದೆ, ಜಾರ್ಖಂಡ್‌ ಸೇರಿದಂತೆ ಹಲವೆಡೆ ಬಂಗಾಳದ ವಲಸೆ ಕಾರ್ಮಿಕರನ್ನು ಬಾಂಗ್ಲಾದೇಶಿ ಪ್ರಜೆಗಳೆಂದು ಶಂಕಿಸಿ ದೌರ್ಜನ್ಯ/ಹತ್ಯೆಗಳು ನಡೆಯುತ್ತಿವೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಂಗಾಳದ ಕಾರ್ಮಿಕರ ಮೇಲೆ ದಾಳಿ, ಹಲ್ಲೆ, ಹತ್ಯೆಗಳು ಹೆಚ್ಚಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ವಲಸೆ ಕಾರ್ಮಿಕರ ಹತ್ಯೆಗಳನ್ನು ಖಂಡಿಸಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ.

ಶನಿವಾರವೂ, ಮುರ್ಷಿದಾಬಾದ್ ಜಿಲ್ಲೆಯ ಜನರು ಬೃಹತ್ ಪ್ರತಿಭಟನೆ ನಡೆಸಿದ್ದು, ರೈಲು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ತೀವ್ರತೆಯನ್ನು ಅರಿತ ಪೊಲೀಸರು, ಮುರ್ಷಿದಾಬಾದ್‌ನಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದಾರೆ.

ಜಾರ್ಖಂಡ್‌ನ ಬಿಶ್ರಾಮಪುರ ಪ್ರದೇಶದಲ್ಲಿ ಬಂಗಾಳ ಮೂಲದ ವ್ಯಾಪಾರಿ ಅಲ್ಲಾವುದ್ದೀನ್ ಶೇಖ್‌ ಅವರನ್ನು ಬಾಂಗ್ಲಾದೇಶಿಗನೆಂದು ಶಂಕಿಸಿ ಗುಂಪೊಂದು ಭೀಕರವಾಗಿ ಥಳಿಸಿ ಹತ್ಯೆಗೈದಿದೆ. ಅವರ ಹತ್ಯೆಯ ಸುದ್ದಿ ಮುರ್ಷಿದಾಬಾದ್‌ ಜನರಿಗೆ ತಿಳಿದ ಬಳಿಕ, ಬೃಹತ್ ಪ್ರತಿಭಟನೆಗಳು ಆರಂಭಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೊಣ್ಣೆಗಳನ್ನು ಹಿಡಿದ ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು, ರಸ್ತೆ ಬದಿಯ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ಕಿತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ, ಕೆಲವು ಅಂಗಡಿಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

2025ರ ಆಗಸ್ಟ್‌ನಲ್ಲಿ ಹರಿಯಾಣದಲ್ಲಿ ಮುಸ್ಲಿಂ ವಲಸೆ ಕಾರ್ಮಿರೊಬ್ಬರನ್ನು ಗುಂಪೊಂದು ಹತ್ಯೆಗೈದಿತ್ತು. ಡಿಸೆಂಬರ್‌ನಲ್ಲಿ ಒಡಿಶಾದ ಸಂಬಲ್‌ಪುರದಲ್ಲಿ ಬಂಗಾಳ ಮೂಲದ ವಲಸೆ ಕಾರ್ಮಿಕ ಜಯೆಲ್ ಶೇಖ್ ಅವರನ್ನು ಗುಂಪೊಂದು ಭೀಕರವಾಗಿ ಥಳಿಸಿ ಕೊಂದಿತ್ತು. ಕಳೆದ ವಾರ ಜಾರ್ಖಂಡ್‌ನಲ್ಲಿ ಬಂಗಾಳದ ಮೂಲದ ರಿತು ಶೇಖ್‌ ಎಂಬವರ ಹತ್ಯೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...