IND vs NZ | 3ನೇ ಗೆಲುವಿಗಾಗಿ ಭಾರತ ಸೆಣೆಸಾಟ; ಬುಮ್ರಾಗೆ ದಾರಿ ಬಿಡುತ್ತಾರೆ ಅರ್ಶದೀಪ್

Date:

ಭಾರತೀಯ ಕ್ರಿಕೆಟ್‌ ತಂಡವು ತವರು ನೆಲದಲ್ಲೇ ನ್ಯೂಜಿಲೆಂಡ್‌ ಜೊತೆಗಿನ 5 ಪಂದ್ಯಗಳ ಟಿ20 ಟೂರ್ನಿ ಆಡುತ್ತಿದೆ. ಟೂರ್ನಿಯಲ್ಲಿ ಈವರೆಗೆ ಆಡಿರುವ 2 ಪಂದ್ಯಗಳನ್ನೂ ‘ಟೀಮ್‌ ಇಂಡಿಯಾ’ ಗೆದ್ದಿದೆ. ಇಂದು (ಭಾನುವಾರ) 3ನೇ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನೂ ಗೆದ್ದರೆ, ಟೂರ್ನಿಯನ್ನು ಟೀಮ್‌ ಇಂಡಿಯಾ ಗೆಲುವು ಸಾಧಿಸಲಿದೆ.

3ನೇ ಗೆಲುವಿಗಾಗಿ ಭಾರತ ತಂಡ ಭಾರೀ ಕಸರತ್ತು ನಡೆಯುತ್ತಿದೆ. ತಂಡದಲ್ಲಿ ಕೊಂಚ ಬದಲಾವಣೆಗೂ ಮುಂದಾಗಿದೆ ಎಂದು ಹೇಳಲಾಗಿದೆ. ಗುವಾಹಟಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ವೇಗೀ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಆಡಲಿದ್ದಾರೆ ಎಂದು ತಿಳಿದುಬಂದಿದೆ.

ರಾಯ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಬುಮ್ರಾ ಕ್ರೀಡಾಂಗಣಕ್ಕೆ ಇಳಿದಿರಲಿಲ್ಲ. ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ ಕೆಲಸದ ಒತ್ತಡವನ್ನು ನಿಭಾಯಿಸಲು ಅವರು ವಿಶ್ರಾಂತಿ ಪಡೆದಿದ್ದರು. ಆದಾಗ್ಯೂ, ಈ ಟೂರ್ನಿಯನ್ನು ಟೀಮ್ ಇಂಡಿಯಾ ಗೆಲ್ಲುವ ಉದ್ದೇಶದಿಂದ ಬುಮ್ರಾ ಮತ್ತೆ ತಂಡಕ್ಕೆ ಮರಳಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಸೇರ್ಪಡೆಯು ಟೀಮ್‌ ಇಂಡಿಯಾದ ನ್ಯೂ-ಬಾಲ್ ವೇಗವನ್ನು ಹೆಚ್ಚಿಸಲಿದೆ. ಇದು ನ್ಯೂಜಿಲೆಂಡ್‌ ತಂಡಕ್ಕೆ ಬೆದರಿಕೆಯನ್ನು ತೀಕ್ಷ್ಣಗೊಳಿಸುತ್ತದೆ. ಬುಮ್ರಾ ಮರಳಿದರೆ, ತಂಡದ ವೇಗಿ ಬೌಲರ್‌ಗಳ ವಿಭಾಗದಲ್ಲಿ ಬದಲಾವಣೆ ಮಾಡಬೇಕಾಗುತ್ತದೆ. ಅದಕ್ಕಾಗಿ, ಅರ್ಶದೀಪ್ ಸಿಂಗ್‌ ಅವರು ತಂಡದಿಂದ ಹೊರಗುಳಿಯುವ ಸಾಧ್ಯತೆ ಇರಲಿದೆ.

ಇನ್ನು, ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಅಕ್ಷರ್ ಪಟೇಲ್ ಬದಲಿಗೆ ರಿಂಕು ಸಿಂಗ್ ಆಡುವ ಸಾಧ್ಯತೆಗಳಿವೆ. ಆದಾಗ್ಯೂ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ತಂಡಕ್ಕೆ ಮರಳುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ. ಅಂತೆಯೇ, ಬ್ಯಾಟಿಂಗ್ ವಿಭಾಗದಲ್ಲಿ ತಿಲಕ್ ವರ್ಮಾ ಅನುಮಸ್ಥಿತಿ ಇದೆ. ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ತಂಡದಲ್ಲಿ ಮುನ್ನಡೆಯಲಿದ್ದಾರೆ.

ಭಾನುವಾರದ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ; ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ಸಿ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ಇರಲಿದ್ದಾರೆ!

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...