ಸಂಜಯ್‌ ಮಲ್ಹೋತ್ರಾ ನೂತನ ಆರ್‌ಬಿಐ ಗವರ್ನರ್‌

Date:

ಕೇಂದ್ರ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ 1990ನೇ ಸಾಲಿನ ರಾಜಸ್ಥಾನ ಕೇಡರ್‌ನ ಐಎಎಸ್‌ ಅಧಿಕಾರಿ ಸಂಜಯ್‌ ಮಲ್ಹೋತ್ರಾ ಅವರನ್ನು ನೂತನ ಆರ್‌ಬಿಐ ಗವರ್ನರ್‌ ಆಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.

ಸಂಜಯ್‌ ಮಲ್ಹೋತ್ರಾ ಅವರು ಹಾಲಿ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರಿಂದ ನಾಳೆ(ಡಿ.10) ಅಧಿಕಾರ ಸ್ವೀಕರಿಸಲಿದ್ದಾರೆ.

ಶಕ್ತಿಕಾಂತ್ ದಾಸ್ ಡಿಸೆಂಬರ್ 2018 ರಲ್ಲಿ ಆರ್‌ಬಿಐ ಗವರ್ನರ್ ಆಗಿ ನೇಮಕಗೊಂಡರು. ಆಗಿನ ಆರ್‌ಬಿಐ ಗವರ್ನರ್‌ ಉರ್ಜಿತ್ ಪಟೇಲ್ ಅವರು ತಮ್ಮ ಅಧಿಕಾರಾವಧಿ ಮುಗಿಯುವ ಮೊದಲು ರಾಜೀನಾಮೆ ನೀಡಿದ್ದರು. ನಂತರ 2021 ರ ಡಿಸೆಂಬರ್‌ನಲ್ಲಿ ದಾಸ್‌ ಅವರಿಗೆ ಮೂರು ವರ್ಷಗಳ ಹೆಚ್ಚುವರಿ ಅವಧಿಯನ್ನು ವಿಸ್ತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಅತಿಯಾದ ಮೊಬೈಲ್ ಬಳಕೆ ಚಟ ಮಾತ್ರವಲ್ಲ ಮಾರಕ ರೋಗ

ಮಲ್ಹೋತ್ರಾ ಅವರು ರಾಜಸ್ಥಾನ ಕೇಡರ್‌ನ 1990 ಸಾಲಿನ ಭಾರತೀಯ ಆಡಳಿತ ಸೇವಾ ಅಧಿಕಾರಿ. ಕಾನ್ಪುರದ ಐಐಟಿಯಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ಪದವಿ ಮತ್ತು ಅಮೆರಿಕದ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ತಮ್ಮ 33 ವರ್ಷಗಳ ಅನುಭವದಲ್ಲಿ ಮಲ್ಹೋತ್ರಾ ಅವರು ವಿದ್ಯುತ್, ಹಣಕಾಸು, ತೆರಿಗೆ, ಮಾಹಿತಿ ತಂತ್ರಜ್ಞಾನ ಮತ್ತು ಗಣಿಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಈ ಹಿಂದೆ ಅವರು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...