ಡಿ.6 ರಂದು ನಡೆಯಲಿರುವ ‘ಇಂಡಿಯಾ’ ಸಭೆ ಮುಂದೂಡಿಕೆ

Date:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಪ್ರಮುಖ ನಾಯಕರು ಗೈರು ಹಾಜರಾಗುವ ಸಾಧ್ಯತೆಯಿಂದ ಡಿಸೆಂಬರ್‌ 6 ರಂದು ನವದೆಹಲಿಯಲ್ಲಿ ನಡೆಯಬೇಕಿದ್ದ ಇಂಡಿಯಾ ಸಭೆಯನ್ನು ಮುಂದೂಡಲಾಗಿದೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಮಿಚಾಂಗ್ ಚಂಡಮಾರುತದಿಂದಾಗಿ ಚೆನ್ನೈ ವಿಮಾನ ನಿಲ್ದಾಣ ಬಂದ್‌ ಆಗಿರುವ ಕಾರಣದಿಂದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತಾವು ಬರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ನಿತೀಶ್ ಕುಮಾರ್ ಅವರು ಅನಾರೋಗ್ಯದ ಕಾರಣ ನೀಡಿದ್ದರೆ, ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಅವರು ಬೇರೆ ಕಾರ್ಯಕ್ರಮದ ನಿಮಿತ್ತ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಮೊದಲೇ ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲ ಪಕ್ಷದ ವಕ್ತಾರರನ್ನು ಸಂಪರ್ಕಿಸಿದ ನಂತರ ಎರಡು ವಾರಗಳ ನಂತರ ಸಭೆಯನ್ನು ಆಯೋಜಿಸಲು ಕಾಂಗ್ರೆಸ್ ಪ್ರಯತ್ನಿಸುತ್ತದೆ.

ಈ ಸುದ್ದಿ ಓದಿದ್ದೀರಾ? ಮಿಜೋರಾಂ | ಡಿಸೆಂಬರ್ 8 ರಂದು ಲಾಲ್ದುಹೋಮಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

ಶಿವಸೇನೆ (ಯುಬಿಟಿ ಬಣ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸಭೆಯಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದಾರೆ. ಆದರೆ ನಂತರ ಕಾರಣಾಂತರಗಳಿಂದ ವಿಮಾನದ ಟಿಕೆಟ್‌ಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಆಮ್ ಆದ್ಮಿ ಪಕ್ಷವು ಕಾರ್ಯಕ್ರಮಕ್ಕೆ ಹಾಜರಾಗಲು ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಸಂದೇಶ ಕಳುಹಿಸಿಲ್ಲ.

‘ಇಂಡಿಯಾ’ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೇತೃತ್ವದ ದೇಶದ ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟವಾಗಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಎದುರಿಸಲು ಈ ಒಕ್ಕೂಟವನ್ನು ರಚಿಸಲಾಗಿದೆ. ಜುಲೈ 2023 ರಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಒಕ್ಕೂಟವನ್ನು ರಚಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...