ಭಾರತೀಯ ಮೂಲದ ಸಮೀರ್ ಶಾ ಬಿಬಿಸಿ ಅಧ್ಯಕ್ಷರಾಗಿ ನೇಮಕ

Date:

40 ವರ್ಷಗಳ ಕಾಲ ವಿಶ್ವ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆ ಬಿಬಿಸಿಯಲ್ಲಿ ಕೆಲಸ ಮಾಡಿದ ಭಾರತ ಮೂಲದ ಡಾ ಸಮೀರ್ ಶಾ ಅವರು ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೇಮಕರಾಗಿದ್ದಾರೆ.

ಔಪಚಾರಿಕವಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ನೇಮಕಾತಿ ಪೂರ್ವ ಪರಿಶೀಲನೆಗಾಗಿ ಹೌಸ್ ಆಫ್ ಕಾಮನ್ಸ್ ಮೀಡಿಯಾ ಕಲ್ಚರ್, ಮೀಡಿಯಾ ಮತ್ತು ಸ್ಪೋರ್ಟ್ಸ್ ಸೆಲೆಕ್ಟ್ ಕಮಿಟಿಯ ಕ್ರಾಸ್-ಪಾರ್ಟಿ ಸಂಸದರು ಸಮೀರ್ ಶಾ ಅವರನ್ನು ಸಂದರ್ಶಿಸಿ ಸಮ್ಮತಿ ಸೂಚಿಸಿದ್ದಾರೆ.

“ಟಿವಿ ನಿರ್ಮಾಣ ಮತ್ತು ಪತ್ರಿಕೋದ್ಯಮದಲ್ಲಿ 40 ವರ್ಷಗಳಿಗೂ ಹೆಚ್ಚು ವೃತ್ತಿಜೀವನವನ್ನು ಹೊಂದಿರುವ ಡಾ. ಸಮೀರ್‌ ಶಾ ಅವರು ಬಿಬಿಸಿ ಅಧ್ಯಕ್ಷ ಸ್ಥಾನಕ್ಕೆ ಏರಲು ಅಪಾರ ಅನುಭವದ ಸಂಪತ್ತು ಹೊಂದಿದ್ದಾರೆ” ಎಂದು ಇಂಗ್ಲೆಂಡಿನ ಸಂಸ್ಕೃತಿ ಕಾರ್ಯದರ್ಶಿ ಲೂಸಿ ಫ್ರೇಜರ್ ತಿಳಿಸಿದ್ದು, ನೇಮಕಾತಿ ಪ್ರಕ್ರಿಯೆಯ ಪ್ರಕಾರ ಆಯ್ಕೆಯನ್ನು ದೃಢಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ 1952ರಲ್ಲಿ ಜನಿಸಿದ ಸಮೀರ್‌ ಷಾ ಅವರು 1970 ರ ದಶಕದಲ್ಲಿ ವಿದ್ಯಾಭ್ಯಾಸದ ಕಾರಣದಿಂದಾಗಿ ಇಂಗ್ಲೆಂಡ್‌ಗೆ ಆಗಮಿಸಿ ಬಿಬಿಸಿಯಿಂದ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಮುಖ್ಯಮಂತ್ರಿಯಾಗಿ ಎ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

“ವೇಗವಾಗಿ ಬದಲಾಗುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿ ಬಿಬಿಸಿ ಯಶಸ್ವಿಯಾಗುವುದನ್ನು ನೋಡುವ ಸ್ಪಷ್ಟ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದಾರೆ. ಭವಿಷ್ಯದ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ಬಿಬಿಸಿಗೆ ಅಗತ್ಯವಿರುವ ಬೆಂಬಲ ಮತ್ತು ಪರಿಶೀಲನೆಯನ್ನು ಅವರು ಒದಗಿಸುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಲೂಸಿ ಫ್ರೇಜರ್ ಹೇಳಿದರು.

71 ವರ್ಷದ ಸಮೀರ್‌ ಶಾ ಅವರು ಬಿಬಿಸಿಯಲ್ಲಿ ಸಲ್ಲಿಸಿರುವ ಅತ್ಯಮೂಲ್ಯ ಸೇವೆಗಳಿಗಾಗಿ 2019 ರಲ್ಲಿ 2ನೇ ರಾಣಿ ಎಲಿಜಬೆತ್ ಅವರಿಂದ ಗೌರವಿಸಲ್ಪಟ್ಟಿದ್ದರು.

ಬಿಬಿಸಿ ನೂತನ ಅಧ್ಯಕ್ಷರಾಗಿರುವ ಸಮೀರ್‌ ಶಾ ಅವರು ವಾರ್ಷಿಕ 1.60 ಲಕ್ಷ ಪೌಂಡ್(1.67 ಕೋಟಿ ರೂ.) ವೇತನ ಪಡೆಯಲಿದ್ದಾರೆ. ವಾರಕ್ಕೆ ಮೂರು ದಿನ ಮಾತ್ರ ಕೆಲಸ ನಿರ್ವಹಿಸಲಿದ್ದಾರೆ. ಈ ಮೊದಲು ಶಾ ಅವರು ಬಿಬಿಸಿಯಲ್ಲಿ 2007 ಮತ್ತು 2010 ರ ನಡುವೆ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...