ಕೇಂದ್ರದಿಂದ ಸೆಪ್ಟೆಂಬರ್‌ನಿಂದ ಜನಗಣತಿ; 18 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ

Date:

ಕೇಂದ್ರ ಸರ್ಕಾರ ಇದೇ ಸೆಪ್ಟೆಂಬರ್‌ನಲ್ಲಿ ಜನಗಣತಿ ಕಾರ್ಯ ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ ಹೇಳಿವೆ.

ವ್ಯಾಪಕ ಟೀಕೆ ನಂತರ, ತಮ್ಮ ಮೂರನೇ ಅವಧಿಯಲ್ಲಿ ಜನಗಣತಿ ನಡೆಸುವ ಮೂಲಕ ಮಹತ್ವದ ದತ್ತಾಂಶ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎಂದು ಇವೇ ಮೂಲಗಳು ಹೇಳಿವೆ.ಜನಗಣತಿ ಕಾರ್ಯ ಆರಂಭಕ್ಕಾಗಿ ಪ್ರಧಾನಿ ಕಚೇರಿಯಿಂದ ಹಸಿರು ನಿಶಾನೆಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿರೀಕ್ಷೆಯಂತೆ, ಮುಂದಿನ ತಿಂಗಳು ಜನಗಣತಿ ಆರಂಭಗೊಂಡಲ್ಲಿ, ಪೂರ್ಣ ಪ್ರಕ್ರಿಯೆ ಮುಗಿಯಲು ಅಂದಾಜು 18 ತಿಂಗಳು ಬೇಕಾಗುತ್ತದೆ ಎಂದು ಈ ವಿಚಾರವಾಗಿ ಮಾಹಿತಿ ಇರುವ ಅಧಿಕೃತ ಎರಡು ಮೂಲಗಳು ಹೇಳಿವೆ.ವರ್ಷಾಂತ್ಯಕ್ಕೆ ಐದು ರಾಜ್ಯಗಳ ವಿಧಾನಸಭೆ ಗಳಿಗೆ ಚುನಾವಣೆಗಳು ನಡೆಯಲಿವೆ. ಹೀಗಾಗಿ, ದೇಶದಾದ್ಯಂತ ಜನಗಣತಿಯನ್ನು ಹೇಗೆ ನಡೆಸಲಾಗುತ್ತದೆ ಎಂಬ ಬಗ್ಗೆ ಪ್ರಶ್ನೆಗಳೂ ಎದುರಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಗಣತಿಯನ್ನು ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುತ್ತದೆ. ಕೋವಿಡ್‌–19 ಪಿಡುಗಿನ ಕಾರಣ 2021ರಲ್ಲಿ ನಡೆದಿರಲಿಲ್ಲ. ಕೋವಿಡ್‌–19 ಪಿಡುಗು ಕೊನೆಗೊಂಡು ಸಹಜಸ್ಥಿತಿ ಕಂಡುಬಂದಿದ್ದರೂ ಜನಗಣತಿ ನಡೆಸಲು ಸರ್ಕಾರ ಮುಂದಾಗಿರಲಿಲ್ಲ. ಈ ಕಾರ್ಯ ಆರಂಭಿಸುವಲ್ಲಿ ವಿಳಂಬವಾಗುತ್ತಿರುವ ಕುರಿತು ಹಲವು ಆರ್ಥಿಕ ತಜ್ಞರು ಅಸಮಾಧಾನ–ಟೀಕೆ ಹೊರಹಾಕಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಸಂವಿಧಾನ ರಕ್ಷಿಸಬೇಕೇ ಅಥವಾ ತಮ್ಮ ಒಡೆಯರ ಅಡಿಯಾಳಾಗಬೇಕೇ?

ಸದ್ಯ ಲಭ್ಯವಿರುವ ದತ್ತಾಂಶಗಳು ಹಾಗೂ ಜಾರಿಯಲ್ಲಿರುವ ಯೋಜನೆಗಳನ್ನು 2011ರ ಜನಗಣತಿ ಪ್ರಕಾರ ಇದ್ದ ಜನಸಂಖ್ಯೆಗೆ ಅನುಗುಣವಾಗಿ ರೂಪಿಸಲಾಗಿದೆ. ‘ಚೀನಾ ಹಿಂದಿಕ್ಕಿದ ಭಾರತ’: ಜನಸಂಖ್ಯೆ ವಿಚಾರದಲ್ಲಿ ಚೀನಾ ಹಿಂದಿಕ್ಕುವ ಮೂಲಕ ಭಾರತ ಜಗತ್ತಿನ ಅತಿಹೆಚ್ಚು ಜನಸಂಖ್ಯಾಬಾಹುಳ್ಯದ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ವಿಶ್ವಸಂಸ್ಥೆ ಕಳೆದ ವರ್ಷ ಬಿಡುಗಡೆ ಮಾಡಿದ್ದ ವರದಿಯಲ್ಲಿ ಹೇಳಿದೆ.

2026ರಲ್ಲಿ ವರದಿ ಬಿಡುಗಡೆ?

ಮುಂದಿನ ತಿಂಗಳು ಆರಂಭಗೊಳ್ಳಲಿದೆ ಎನ್ನಲಾದ ಜನಗಣತಿ ಕಾರ್ಯದ ಮುಂದಾಳತ್ವವನ್ನು ಗೃಹ ಸಚಿವಾಲಯ ಮತ್ತು ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ವಹಿಸಿಕೊಂಡಿವೆ.15 ವರ್ಷಗಳ ಅವಧಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿ, ಕ್ರೋಡೀಕೃತ ವರದಿಯನ್ನು 2026ರ ಮಾರ್ಚ್‌ನಲ್ಲಿ ಬಿಡುಗಡೆ ಮಾಡುವ ಗುರಿಯನ್ನು ಈ ಸಚಿವಾಲಯಗಳು ಹೊಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನಗಣತಿಯ ಹಿನ್ನೋಟ

  • 872ರಲ್ಲಿ ಮೊದಲ ಜನಗಣತಿ ನಡೆದಿತ್ತು. ಇದಾದ ನಂತರ, ಹತ್ತು ವರ್ಷಗಳಿಗೊಮ್ಮೆಯಂತೆ 15 ಜನಗಣತಿ ನಡೆಸಲಾಗಿದೆ
  • ಸ್ವತಂತ್ರ ಭಾರತದಲ್ಲಿ ಮೊದಲ ಜನಗಣತಿ 1951ರಲ್ಲಿ ನಡೆದಿತ್ತು
  • ಕೊನೆಯ ಜನಗಣತಿ 2011ರಲ್ಲಿ ನಡೆದಿದೆ
  • ಕೋವಿಡ್‌–19 ಪಿಡುಗಿನ ಕಾರಣ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಮುಂದೂಡಲಾಗಿತ್ತು
  • ಸ್ವಾತಂತ್ರ್ಯ ನಂತರ, ಎಸ್‌ಸಿ/ಎಸ್‌ಟಿಗಳನ್ನು ಹೊರತುಪಡಿಸಿ, ಇತರ ಜಾತಿಗಳ ಗಣತಿಯು ಜನಗಣತಿಯ ಭಾಗವಾಗಿಲ್ಲ
  • 1931ರಲ್ಲಿ ಜನಗಣತಿ ವೇಳೆ ನಡೆಸಲಾಗಿದ್ದ ಜಾತಿಗಣತಿಯೇ ಕೊನೆಯದ್ದು
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...