ಭಾರತ-ಪಾಕ್ ಕದನ ವಿರಾಮಕ್ಕೆ ‘ಎಕ್ಸ್‌ಪೈರಿ ಡೇಟ್‌’ ಇಲ್ಲ: ಭಾರತೀಯ ಸೇನೆ

Date:

ಭಾರತ ಮತ್ತು ಪಾಕಿಸ್ತಾನ ನಡುವೆ ಮೇ 12ರಿಂದ ಕದನ ವಿರಾಮ ಜಾರಿಯಲ್ಲಿದೆ. ಕದನ ವಿರಾಮವು ಮುಂದುವರೆಯಲಿದೆ. ಕದನ ವಿರಾಮಕ್ಕೆ ಯಾವುದೇ ‘ಎಕ್ಸ್‌ಪೈರಿ ಡೇಟ್’ ಇಲ್ಲ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಹೇಳಿದ್ದಾರೆ.

ಕದನ ವಿರಾಮವು ತಾತ್ಕಾಲಿಕವಾಗಿತ್ತು. ಮೇ 18ರಂದು ಅದು ಕೊನೆಗೊಳ್ಳುತ್ತದೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸೇನೆಯ ಅಧಿಕಾರಿಗಳು, “ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಸಂಬಂಧಿತ ಡಿಜಿಎಂಒಗಳ (ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು) ಚರ್ಚೆಯಲ್ಲಿ ನಿರ್ಧರಿಸಿದಂತೆ ಕದನ ವಿರಾಮವು ಶಾಶ್ವತವಾಗಿ ಮುಂದುವರೆಯಲಿದೆ. ದರಕ್ಕೆ, ಯಾವುದೇ ಮುಕ್ತಾಯ ದಿನಾಂಕ (ಎಕ್ಸ್‌ಪೈರಿ ಡೇಟ್‌) ಇಲ್ಲ” ಎಂದು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಮತ್ತೆ ಯಾವುದೇ ಮಾತುಕತೆ ನಿಗದಿಯಾಗಿಲ್ಲ. ಕದನ ವಿರಾಮವು ತಾತ್ಕಾಲಿಕವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...