ಜಮ್ಮು | ಒಳನುಸುಳಲು ಯತ್ನಿಸಿದ ಏಳು ಭಯೋತ್ಪಾದಕರ ಹತ್ಯೆ

Date:

ಜಮ್ಮುವಿನ ಸಾಂಬಾ ವಲಯದ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಏಳು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಪಾಕಿಸ್ತಾನ್ ರೇಂಜರ್ಸ್‌ ಪೋಸ್ಟ್‌ಅನ್ನು ನಾಶಪಡಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಘೋಷಿಸಿದೆ.

ಬಿಎಸ್‌ಎಫ್ ವಕ್ತಾರರ ಪ್ರಕಾರ, ಮೇ 8 ಮತ್ತು 9ರ ಮಧ್ಯರಾತ್ರಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಭಾರತೀಯ ಪ್ರದೇಶಕ್ಕೆ ನುಸುಳಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರ ಗುಂಪನ್ನು ಗಡಿ ಕಣ್ಗಾವಲು ಪಡೆ ಗುರುತಿಸಿದ್ದು, ಅವರ ಮೇಲೆ ಗುಂಡು ಹಾರಿಸಿದೆ. ದಾಳಿಯಲ್ಲಿ ಏಳು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ರೇಂಜರ್ಸ್‌ನ ಧಂಧರ್ ಪೋಸ್ಟ್‌ಅನ್ನು ನಾಶಗೊಳಿಸಲಾಗಿದೆ. ಪೋಸ್ಟ್ ನಾಶಗೊಂಡಿರುವ ಥರ್ಮಲ್ ಇಮೇಜಿಂಗ್ ದೃಶ್ಯಗಳನ್ನು ಬಿಎಸ್‌ಎಫ್‌ ಬಿಡುಗಡೆ ಮಾಡಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪಂಜಾಬ್, ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಭಾಗಗಳಲ್ಲಿ ಬ್ಲ್ಯಾಕೌಟ್‌ ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...