ಭಾರತ-ಪಾಕ್ ಕ್ರಿಕೆಟ್ ಪಂದ್ಯ: ಆಪರೇಷನ್ ಸಿಂಧೂರ vs ಆರ್ಥಿಕ ಲಾಭ; ಕೇಂದ್ರಕ್ಕೆ ಯಾವುದು ಮುಖ್ಯ?

Date:

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಆ ಭಯೋತ್ಪಾದಕ ದಾಳಿಯ ವಿರುದ್ಧ ಭಾರತವು ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿತ್ತು. ಆ ಘಟನೆಯು ಭಾರತ-ಪಾಕ್ ಸಂಬಂಧವು ಮತ್ತಷ್ಟು ಕುಸಿಯುವಂತೆ ಮಾಡಿದೆ. ಇದೆಲ್ಲದರ ನಡುವೆ, ‘ಏಪ್ಯಾ ಕಪ್‌’ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳು ಎದುರಾಳಿಗಳಾಗಿ ಆಡಲು ಸಿದ್ದವಾಗಿವೆ. ಪಾಕ್ ತಂಡದೊಂದಿಗೆ ಆಡುವ ಬಿಸಿಸಿಐನ ನಿರ್ಧಾರದ ವಿರುದ್ಧ ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಮತ್ತು ಪಾಕ್ ತಂಡಗಳು ಕ್ರಿಕೆಟ್‌ ಪಂದ್ಯದಲ್ಲಿ ಆಡುವುದಾದರೆ, ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಆರ್ಥವೇ ಇಲ್ಲ. ಇದು, ಪಹಲ್ಗಾಮ್‌ ದಾಳಿಯಲ್ಲಿ ಬಲಿಯಾದ 26 ಮಂದಿ ಭಾರತೀಯರಿಗೆ ಮಾಡುವ ಅವಮಾನ ಎಂದು ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರು ಹಾಗೂ ಭಾರತದ ಹಲವು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ದಾಳಿಯಲ್ಲಿ ತನ್ನ ಸಹೋದರ ಕಳೆದುಕೊಂಡ ಸಾವನ್ ಪರ್ಮರ್ ಎಂಬವರು, “ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವೆ ಪಂದ್ಯ ಆಯೋಜಿಸಲಾಗುತ್ತಿರುವುದು ನಮಗೆ ತೀವ್ರ ದುಃಖತಂದಿದೆ. ಭಾರತವು ಪಾಕಿಸ್ತಾನದೊಂದಿಗೆ ಯಾವುದೇ ರೀತಿಯ ಸಂಪರ್ಕ ಉಳಿಸಿಕೊಳ್ಳಬಾರದು. ನೀವು ಪಂದ್ಯವನ್ನು ಆಡಿದರೆ, ನನ್ನ ಸಹೋದರ ಮರಳಿ ಬರುತ್ತಾನೆಯೇ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಪರೇಷನ್ ಸಿಂದೂರ ಇನ್ನೂ ಮುಗಿದಿಲ್ಲವೆಂದು ಸರ್ಕಾರ ಹೇಳುತ್ತಿದೆ. ಹಾಗಿದ್ದರೆ, ಈ ಪಂದ್ಯವನ್ನು ಯಾಕೆ ನಡೆಸಲಾಗುತ್ತಿದೆ” ಎಂದಿದ್ದಾರೆ.

ಭಾರತ-ಪಾಕ್ ಪಂದ್ಯದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್ ಓವೈಸಿ, “ಪಾಕಿಸ್ತಾನದ ಜೊತೆ ಭಾರತ ತಂಡ ಆಟವಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ. 26 ಜನರ ಜೀವಗಳಿಗಿಂತ ಆರ್ಥಿಕ ಲಾಭವೇ ಮುಖ್ಯವಾಯಿತೇ? ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

“ಭಾರತೀಯರ ಜೀವಕ್ಕಿಂತ ಹಣಗಳಿಸುವುದೇ ಮುಖ್ಯವೇ? ಬಿಸಿಸಿಐ ಒಂದು ಕ್ರಿಕೆಟ್ ಪಂದ್ಯದಿಂದ ಎಷ್ಟು ಹಣ ಪಡೆಯುತ್ತದೆ? 2000–3000 ಕೋಟಿ ರೂ.ಗಳೇ? “26 ಮಂದಿ ಭಾರತೀಯರನ್ನು ಕೊಂದ ಭಯೋತ್ಪಾದಕರಿಗೆ ನೆಲೆ ಒದಗಿಸಿದ್ದ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಪಂದ್ಯ ಆಡಲು ನಿರಾಕರಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವೇ? ನಾವು ದಾಳಿಗೆ ಬಲಿಯಾದ ನಾಗರಿಕರ ಪರವಾಗಿ ಅಂದು ನಿಂತಿದ್ದೆವು, ಇಂದೂ ನಿಲ್ಲುತ್ತೇವೆ. ಮುಂದೆಯೂ ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

“ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಸಿಂಧೂ ನದಿ ನೀರು ಹರಿಸುವ ವಿಚಾರದಲ್ಲಿ ಮಾತುಕತೆಯ ನಡೆಸುವುದೇ ಇಲ್ಲ ಎಂದಿದ್ದ ಮೋದಿ ಅವರು, ಈಗ ಪಂದ್ಯ ಆಡಿಸಿ, ದೇಶಕ್ಕೆ ಯಾವ ಸಂದೇಶ ನೀಡಲು ಮುಂದಾಗಿದ್ದಾರೆ” ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...