ಭಾರತ-ಪಾಕ್ ಸಂಘರ್ಷ | ರಾಜೌರಿ ಸೇನಾ ನೆಲೆ ಮೇಲೆ ಆತ್ಮಹತ್ಯಾ ದಾಳಿ ನಡೆದಿದೆ ಎಂಬುದು ಸುಳ್ಳು

Date:

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಸೇನಾ ನೆಲೆ ಮೇಲೆ ಆತ್ಮಹತ್ಯಾ ದಾಳಿ ಮತ್ತು ಪಂಜಾಬ್‌ನ ಜಲಂಧರ್‌ನಲ್ಲಿ ಡ್ರೋನ್ ದಾಳಿ ನಡೆದಿವೆ ಎಂಬ ವಿಚಾರವಾಗಿ ಹಲವಾರು ಪೋಸ್ಟ್‌ಗಳು, ವಿಡಿಯೋಗಳು, ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಆದರೆ, ಈ ಎಲ್ಲವನ್ನೂ ಭಾರತ ಸರ್ಕಾರ ಅಲ್ಲಗಳೆದಿದ್ದು, ಅವೆಲ್ಲವೂ ಸುಳ್ಳು ಸುದ್ದಿ ಮತ್ತು ವದಂತಿಗಳು ಎಂದು ಸ್ಪಷ್ಟನೆ ನೀಡಿದೆ.

ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್ ಚೆಕ್ ಯೂನಿಟ್, ಜಮ್ಮು ಮತ್ತು ಕಾಶ್ಮೀರದ ಯಾವುದೇ ಸೇನಾ ನೆಲೆಗಳಲ್ಲಿ ಯಾವುದೇ ‘ಫಿದಾಯೀನ್’ ಅಥವಾ ಆತ್ಮಹತ್ಯಾ ದಾಳಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಅಲ್ಲದೆ, ಜಲಂಧರ್‌ನಲ್ಲಿ ಡ್ರೋನ್ ದಾಳಿ ನಡೆದಿದೆ ಎಂಬ ಹೇಳಿಕೆಯ ಜೊತೆಗೆ ಬೆಂಕಿ ಉರಿಯುತ್ತಿರುವ ಕೆಲವು ವಿಡಿಯೋಗಳು ವೈರಲ್ ಆಗುತ್ತಿವೆ. ಆದರೆ, ಅದು ದಾಳಿಯ ವಿಡಿಯೋ ಅಲ್ಲ. ಬದಲಾಗಿ, ಕೃಷಿ ಭೂಮಿಯಲ್ಲಿ ಕೃಷಿ ತ್ಯಾಜ್ಯವನ್ನು ಸುಡಲಾಗಿರುವ ಹಳೆಯ ವಿಡಿಯೋ ಎಂದು ಜಲಂಧರ್ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ವೈರಲ್ ಆಗುತ್ತಿರುವ ಪೋಸ್ಟ್‌ ನಕಲಿ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎರಡು ಪೋಸ್ಟ್‌ಗಳು ಮಾತ್ರವಲ್ಲದೆ, ಕಳೆದ ಎರಡು ದಿನಗಳಲ್ಲಿ ವೈರಲ್ ಆದ ಸುಮಾರು 7 ವಿಡಿಯೋಗಳ ಸತ್ಯಾಸತ್ಯತೆಯನ್ನು ಪಿಐಬಿ ಪರಿಶೀಲನೆ ಮಾಡಿದೆ. ಇವುಗಳಲ್ಲಿ ಭಾರತದ ಮೇಲೆ ಪಾಕಿಸ್ತಾನ ನಡೆಸಿದ ಕ್ಷಿಪಣಿ ದಾಳಿಯ ದೃಶ್ಯಾವಳಿ ಎಂದು 2020ರ ಬೈರುತ್ ಸ್ಫೋಟದ ವಿಡಿಯೋವನ್ನು ಹಂಚಿಕೊಳ್ಳಲಾಗಿರುವುದನ್ನು ಪಿಐಬಿ ಕಂಡುಹಿಡಿದೆ.

ಈ ವರದಿ ಓದಿದ್ದೀರಾ?: ಪ್ರಬುದ್ಧತೆ ತೋರುತ್ತಿರುವ ಸರ್ಕಾರ – ಯುದ್ಧ ಬಯಸುತ್ತಿರುವ ಭಕ್ತರು ಮತ್ತು ಮಾಧ್ಯಮಗಳು

ಮತ್ತೊಂದು ನಕಲಿ ವಿಡಿಯೋವನ್ನು ಪಾಕಿಸ್ತಾನ ಪಡೆಗಳು ಭಾರತೀಯ ಸೇನಾ ನೆಲೆಯನ್ನು ನಾಶಪಡಿಸಿವೆ ಎಂಬ ಹೇಳಿಕೆಯ ಜೊತೆಗೆ ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿ ಉಲ್ಲೇಖಿಸಿರುವಂತೆ ’20 ರಾಜ್ ಬೆಟಾಲಿಯನ್’ ಎಂಬ ಯಾವುದೇ ಘಟಕವು ಭಾರತೀಯ ಸೇನೆಯಲ್ಲಿ ಇಲ್ಲ ಎಂದು ಪಿಐಬಿ ಸ್ಪಷ್ಟಪಡಿಸಿದೆ.

ಗುಜರಾತ್‌ನ ಹಜೀರಾ ಬಂದರಿನ ಮೇಲಿನ ದಾಳಿ ಎಂದು ಹೇಳಿಕೊಂಡು 2021ರಲ್ಲಿ ತೈಲ ಟ್ಯಾಂಕರ್ ಸ್ಫೋಟದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಜೊತೆಗೆ, ಭಾರತೀಯ ಸೇನೆಯು ತನ್ನ ಅಂಬಾಲಾ ವಾಯುನೆಲೆಯಿಂದ ಪಾಕ್ ಮೇಲೆ ದಾಳಿಗಳನ್ನು ನಡೆಸಿದೆ ಎಂದು ನಕಲಿ ವಿಡಿಯೋವನ್ನು ಹರಿಬಿಡಲಾಗಿದೆ. ಆ ವಿಡಿಯೋ ನಕಲಿ ಎಂದು ರಕ್ಷಣಾ ಸಚಿವಾಲಯವೇ ಸ್ಪಷ್ಟಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...