ಮಯನ್ಮಾರ್ ಗಡಿಯೊಂದಿಗೆ ಮುಕ್ತ ಸಂಚಾರ ವ್ಯವಸ್ಥೆ ಅಮಾನತುಗೊಳಿಸಿದ ಭಾರತ

Date:

ಮಯನ್ಮಾರ್ ಗಡಿಯೊಂದಿಗೆ ಮುಕ್ತ ಸಂಚಾರ ವ್ಯವಸ್ಥೆಯನ್ನು ಭಾರತ ಸರ್ಕಾರ ತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ನೂತನ ನಿಯಮದ ಹಿನ್ನೆಲೆ ಗಡಿ ಪ್ರದೇಶದಲ್ಲಿ ವಾಸಿಸುವ ಮಯನ್ಮಾರ್ ಪ್ರಜೆಗಳು ಭಾರತಕ್ಕೆ ಆಗಮಿಸಬೇಕಾದರೆ ವಿಸಾ ಪ್ರಸ್ತುತಪಡಿಸಬೇಕು.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಗೃಹ ಇಲಾಖೆ ಭಾರತ ಹಾಗೂ ಮಯನ್ಮಾರ್ ನಡುವೆ ಮುಕ್ತ ಸಂಚಾರ ವ್ಯವಸ್ಥೆಯನ್ನು ದೇಶದ ಆಂತರಿಕ ಭದ್ರತೆ ಹಾಗೂ ಈಶಾನ್ಯ ಭಾರತದ ಭೌಗೋಳಿಕ ರಚನೆಯ ನಿರ್ವಹಣೆ ಹಿನ್ನೆಲೆಯಲ್ಲಿ ರದ್ದುಗೊಳಿಸಿದೆ. ಕೇಂದ್ರ ವಿದೇಶಾಂಗ ಇಲಾಖೆ ರದ್ದುಗೊಳಿಸುವ ಪ್ರಕ್ರಿಯೆಯಲ್ಲಿರುವುದರಿಂದ, ಕೇಂದ್ರ ಗೃಹ ಇಲಾಖೆ ತತ್‌ಕ್ಷಣವೇ ಅಮಾನತುಗೊಳಿಸುವ ಶಿಫಾರಸ್ಸು ಕೈಗೊಂಡಿದೆ” ಎಂದು ತಿಳಿಸಿದ್ದಾರೆ.

ಕೆಂದ್ರ ಸರ್ಕಾರ ಗಡಿಯನ್ನು ರದ್ದುಗೊಳಿಸಲು ಕಳೆದ ತಿಂಗಳಿಂದಲೇ ಸಕ್ರಿಯ ಕಾರ್ಯಚರಣೆಯಲ್ಲಿ ತೊಡಗಿತ್ತು. ಮಣಿಪುರದ ಮುಖ್ಯಮಂತ್ರಿ ಎನ್‌ ಬಿರೇನ್ ಸಿಂಗ್ ಅವರು ಭಾರತ ಮಯನ್ಮಾರ್ ಗಡಿಯನ್ನು ಸಂಪೂರ್ಣವಾಗಿ ಮುಚ್ಚಿ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂದು ಕೇಂದ್ರ ಗೃಹ ಇಲಾಖೆಗೆ ಆಗ್ರಹಿಸಿದ್ದರು. ಉಭಯ ದೇಶಗಳ ಮುಕ್ತ ಸಂಚಾರ ವ್ಯವಸ್ಥೆಯಿಂದಾಗಿಯೆ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿತ್ತು ಎಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

1970ರ ದಶಕದಿಂದಲೂ ಭಾರತ ಹಾಗೂ ಮಯನ್ಮಾರ್ ದೇಶಗಳ ನಡುವೆ ಮುಕ್ತ ಸಂಚಾರ ವ್ಯವಸ್ಥೆಯಿದೆ. ಉಭಯ ದೇಶಗಳ 16 ಕಿ.ಮೀ ಗಡಿಯಲ್ಲಿ ವಾಸಿಸುವ ಬುಡಕಟ್ಟು ಜನರ ಸಂಚಾರಕ್ಕಾಗಿ ಈ ವ್ಯವಸ್ಥೆ ಜಾರಿಯಲ್ಲಿತ್ತು. ಎರಡು ದೇಶಗಳ ಜನರು ವ್ಯವಹಾರ ಸಂಬಂಧ ಗುರುತಿನ ಚೀಟಿ ತೋರಿಸಿ ಗಡಿ ದಾಟಬೇಕಿತ್ತು. ಇದು ಒಂದು ವರ್ಷದವರೆಗೂ ಮಾನ್ಯವಾಗಿತ್ತು. ಹಾಗೆ ಬಂದ ಎರಡೂ ದೇಶಗಳ ನಾಗರಿಕರು ಒಂದು ಭೇಟಿಯಲ್ಲಿ ಎರಡು ವಾರಗಳ ಕಾಲ ಉಳಿದುಕೊಳ್ಳಬಹುದಿತ್ತು.

ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆ ಮಣಿಪುರ ಸರ್ಕಾರ 2020ರಲ್ಲಿ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಗೊಳಿಸಿತ್ತು. ಫೆ.6 ರಂದು ಮಯನ್ಮಾರ್ ಗಡಿಗೆ ಹೊಂದಿಕೊಂಡ 1643 ಕಿ.ಮೀ ಪ್ರದೇಶದಲ್ಲಿ ತಂತಿ ಬೇಲಿ ಹಾಕುವುದಾಗಿ ಅಮಿತ್ ಶಾ ಘೋಷಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...