ಪಹಲ್ಗಾಮ್‌ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

Date:

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಭಯೋತ್ಪಾದಕರು ನಡೆಸಿದ ಹೇಯ, ನೀಚ ಕೃತ್ಯಕ್ಕೆ ಭಾರತ ಪ್ರತೀಕಾರ ತೀರಿಸಿಕೊಳ್ಳಲಿದೆ. ದಾಳಿ ನಡೆಸಿದ ಭಯೋತ್ಪಾದಕರನ್ನು ಸುಮ್ಮನೆ ಬಿಡುವುದಿಲ್ಲ. ದಾಳಿಯಲ್ಲಿ ಭಾಗಿಯಾದ ಪ್ರತಿಯೊಬ್ಬನನ್ನು ಹುಡುಕಿ ಹೊಡೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೋಡೋಫಾ ಉಪೇಂದ್ರನಾಥ ಬ್ರಹ್ಮ ಅವರ ರಸ್ತೆಯನ್ನು ಲೋಕಾರ್ಪಣೆ ಮಾಡಿ ಪ್ರತಿಮೆಯನ್ನು ಅನಾವರಣಗೊಳಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, “ಪಹಲ್ಗಾಮ್‌ನಲ್ಲಿ ನಾಗರಿಕರನ್ನು ಕೊಂದ ಪ್ರತಿಯೊಬ್ಬ ಉಗ್ರನನ್ನೂ ಶಿಕ್ಷಿಸಲಾಗುವುದು. ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಿದೆ” ಎಂದು ತಿಳಿಸಿದರು.

ಪಹಲ್ಗಾಮ್ ದಾಳಿಯ ಬಗ್ಗೆ ಇದು ಅಮಿತದ ಶಾ ಅವರ ಮೊದಲ ಸಾರ್ವಜನಿಕ ಹೇಳಿಕೆಯಾಗಿದೆ. “140 ಕೋಟಿ ಭಾರತೀಯರು ಮಾತ್ರವಲ್ಲದೆ ಇಡೀ ಜಗತ್ತು ಭಯೋತ್ಪಾದನೆಯ ವಿರುದ್ದದ ಹೋರಾಟದಲ್ಲಿ ಭಾರತದೊಂದಿಗೆ ನಿಂತಿದೆ. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಭಯೋತ್ಪಾದನೆಯಲ್ಲಿ ತೊಡಗಿರುವವರನ್ನು ಖಂಡಿತವಾಗಿಯೂ ಶಿಕ್ಷಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಪಂಚಾಯತ್ ರಾಜ್ ದಿನದ ಸಂದರ್ಭದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು 13000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ಮಾಡಿದ್ದರು. ಇದಾದ ನಂತರ ತಮ್ಮ ಭಾಷಣದಲ್ಲಿ ಪಹಲ್ಗಾಮ್ ದಾಳಿಯ ಕುರಿತು ಪ್ರತಿಕ್ರಿಯಿಸಿ, “ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಕೊಂದ ಕ್ರೂರತೆಯಿಂದ ಇಡೀ ರಾಷ್ಟ್ರವು ದುಃಖಿತವಾಗಿದೆ; ಕೋಟ್ಯಂತರ ನಾಗರಿಕರು ದುಃಖಿತರಾಗಿದ್ದಾರೆ. ಇಡೀ ದೇಶವು ಎಲ್ಲಾ ಸಂತ್ರಸ್ತ ಕುಟುಂಬಗಳ ದುಃಖದಲ್ಲಿ ಜೊತೆಗಿದೆ. ಚಿಕಿತ್ಸೆ ಪಡೆಯುತ್ತಿರುವ ಕುಟುಂಬ ಸದಸ್ಯರು ಬೇಗನೆ ಗುಣಮುಖರಾಗುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...