ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

Date:

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ ಸುದರ್ಶನ್ ರೆಡ್ಡಿ ಅವರು ಗುರುವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಪ್ರದರ್ಶನವಾಗಿ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆ ವೇಳೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್‌, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಹಲವು ಪ್ರಮುಖರು ಹಾಜರಿದ್ದರು. ಈ ಮೂಲಕ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಲು ಸಿದ್ಧವಾಗಿವೆ ಎಂಬ ಸಂದೇಶವನ್ನು ಸಾರಿದವು.

ಬುಧವಾರ, ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸಿ ಪಿ ರಾಧಾಕೃಷ್ಣನ್‌ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? 2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಹಾಗೂ ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಒಟ್ಟು 781 ಸದಸ್ಯರಿರುವ ಉಭಯ ಸದನಗಳಲ್ಲಿ ಬಹುಮತಕ್ಕೆ 391 ಸದಸ್ಯರ ಬೆಂಬಲ ಅಗತ್ಯವಾಗಿದೆ.

ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಯು ಸೆಪ್ಟೆಂಬರ್ 9, 2025ರಂದು ನಡೆಯಲಿದೆ. ಇಂಡಿಯಾ ಮೈತ್ರಿಕೂಟವು ಸುದರ್ಶನ್ ರೆಡ್ಡಿ ಅವರನ್ನು ಕಣಕ್ಕಿಳಿಸುವ ಮೂಲಕ ತನ್ನ ಒಗ್ಗಟ್ಟನ್ನು ತೋರಿಸಿದರೆ, ಚುನಾವಣೆಯ ಫಲಿತಾಂಶಕ್ಕಾಗಿ ಎಲ್ಲರ ಕಣ್ಣು ಸೆಪ್ಟೆಂಬರ್ 9ರತ್ತ ತಿರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...