ಭಾರತೀಯ ಬ್ಯಾಂಕುಗಳು ಬಾಕಿಗಿಂತ ದುಪ್ಪಟ್ಟು ಹಣ ವಸೂಲಿ ಮಾಡಿವೆ: ವಿಜಯ್ ಮಲ್ಯ

Date:

ಭಾರತೀಯ ಬ್ಯಾಂಕುಗಳು 14,131.6 ಕೋಟಿ ರೂ. ಮೌಲ್ಯದ ನನ್ನ ಆಸ್ತಿಗಳನ್ನು ವಸೂಲಿ ಮಾಡಿವೆ. ತಾನು ಬ್ಯಾಂಕುಗಳಿಗೆ ಬಾಕಿಯಿದ್ದ ಮೊತ್ತಕ್ಕಿಂತ ದುಪ್ಪಟ್ಟು ವಸೂಲಿ ಮಾಡಲಾಗಿದೆ ಎಂದು ದೇಶ ಬಿಟ್ಟು ಪರಾರಿಯಾಗಿರುವ ಆರ್ಥಿಕ ಅಪರಾಧಿ, ಮದ್ಯದ ದೊರೆ ವಿಜಯ್ ಮಲ್ಯ ಹೇಳಿಕೊಂಡಿದ್ದಾರೆ.

ಹಣಕಾಸು ಸಚಿವಾಲಯದ 2024-25ರ ವಾರ್ಷಿಕ ವರದಿಯಲ್ಲಿ ಜಾರಿ ನಿರ್ದೇಶನಾಲಯವು ಉದ್ದೇಶಪೂರ್ವಕವಾಗಿ ಮಾಡಿದ ಮರುಪಾವತಿಯ ವಿವರಗಳನ್ನು ಉಲ್ಲೇಖಿಸಿರುವ ಮಲ್ಯ 6,203 ಕೋಟಿ ರೂ.ಗಳಿಗೆ ಬದಲಾಗಿ ಬ್ಯಾಂಕುಗಳು ಈಗಾಗಲೇ 14,131.8 ಕೋಟಿ ರೂ.ಗಳನ್ನು ವಸೂಲಿ ಮಾಡಿವೆ ಎಂದಿದ್ದಾರೆ.

ಇದನ್ನು ಓದಿದ್ದೀರಾ? WPL 2024 | ಆರ್‌ಸಿಬಿ ಕಪ್ ಗೆಲ್ಲುತ್ತಿದ್ದಂತೆಯೇ ಪ್ರತ್ಯಕ್ಷವಾದ ವಿಜಯ್ ಮಲ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂತಿಮವಾಗಿ 6,203 ಕೋಟಿ ರೂಪಾಯಿ ವಸೂಲಿ ಮಾಡಬೇಕಾಗಿತ್ತು. ಆದರೆ 14,131.8 ಕೋಟಿ ರೂ. ವಸೂಲಿಯನ್ನು ಒಪ್ಪಿಕೊಂಡಿದ್ದೇನೆ. ಇದು ನನ್ನ ಯುಕೆ ದಿವಾಳಿತನ ರದ್ದತಿ ಅರ್ಜಿಯಲ್ಲಿ ಉಲ್ಲೇಖಿಸಲಾಗುತ್ತದೆ. ಇಲ್ಲಿನ ಕೋರ್ಟ್‌ಗಳು ಏನು ಹೇಳುತ್ತದೆ ಎಂಬ ಆಶ್ಚರ್ಯ ನನಗಿದೆ” ಎಂದು ಎಕ್ಸ್ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಮಲ್ಯ ಮತ್ತು ಇತರ 10 ಜನರು ಸೇರಿದಂತೆ ಪರಾರಿಯಾದ ಆರ್ಥಿಕ ಅಪರಾಧಿಗಳ ವಿವರಗಳನ್ನು ಹಂಚಿಕೊಂಡ ವರದಿಯನ್ನು ಉಲ್ಲೇಖಿಸಲಾಗಿದೆ. ಈ ವರದಿಯು 36 ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಒಟ್ಟು 44 ಹಸ್ತಾಂತರ ವಿನಂತಿಗಳನ್ನು ವಿವಿಧ ದೇಶಗಳಿಗೆ ಕಳುಹಿಸಲಾಗಿದೆ ಎಂದು ಹೇಳಿದೆ.

ಸಚಿವಾಲಯದ ವಾರ್ಷಿಕ ವರದಿಯ ಪ್ರಕಾರ, ವಿಜಯ್ ಮಲ್ಯ ಪ್ರಕರಣದಲ್ಲಿ 14,131.6 ಕೋಟಿ ರೂ. ಮೌಲ್ಯದ ಮುಟ್ಟುಗೋಲು ಹಾಕಿಕೊಂಡ ಆಸ್ತಿಯ ಸಂಪೂರ್ಣ ಮೊತ್ತವನ್ನು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ನೀಡಲಾಗಿದೆ.

2016ರ ಮಾರ್ಚ್‌ನಲ್ಲಿ ಯುಕೆಗೆ ಪಲಾಯನವಾದ ಮಲ್ಯ ಒಡೆತನ ಕಿಂಗ್‌ಫಿಷರ್ ಏರ್‌ಲೈನ್ಸ್ (ಕೆಎಫ್‌ಎ) ಹಲವು ಬ್ಯಾಂಕುಗಳಿಗೆ 9,000 ಕೋಟಿ ರೂ.ಗಳ ಸಾಲ ಮರುಪಾವತಿ ಬಾಕಿ ಉಳಿಸಿತ್ತು. ಬ್ಯಾಂಕುಗಳಿಗೆ ಸಾಲ ಮರುಪಾವತಿಸದೆ ಮಲ್ಯ ಪರಾರಿಯಾಗಿದ್ದರು. ಆದರೆ ವಾರ್ಷಿಕ ಶೇಕಡ 11.5 ಬಡ್ಡಿದರದಲ್ಲಿ 6,203 ಕೋಟಿ ರೂ.ಗಳನ್ನು ವಸೂಲಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬೆಂಗಳೂರಿನ ಡಿಆರ್‌ಟಿ ಪೀಠ 2017ರಲ್ಲಿ ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟಕ್ಕೆ ಆದೇಶಿಸಿತ್ತು.

ಈ ನಡುವೆ ಇಂದಿಗೂ ಭಾರತವು ಯುಕೆಯಿಂದ ಮಲ್ಯ ಅವರನ್ನು ಹಸ್ತಾಂತರಿಸಲು ಪ್ರಯತ್ನಿಸುತ್ತಿದೆ. ಇನ್ನು ತಾನು ಶೇಕಡ 100ರಷ್ಟು ಸಾಲ ಮರುಪಾವತಿಗೆ ಸಿದ್ಧನಾಗಿದ್ದೆ. ಆದರೆ ಬ್ಯಾಂಕುಗಳು ಮತ್ತು ಸರ್ಕಾರ ಬೇಡ ಎಂದಿದೆ ಎಂದು ಮಲ್ಯ ಇತ್ತೀಚೆಗೆ ಹೇಳಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...