ಭಾರತೀಯ ನ್ಯಾಯಾಂಗವು ಬುಲ್ಡೋಜರ್ ನಿಯಮದಿಂದ ನಿಯಂತ್ರಿಸಲ್ಪಡುವುದಿಲ್ಲ: ಸಿಜೆಐ ಗವಾಯಿ

Date:

ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು, ‘ಬುಲ್ಡೋಜರ್ ನಿಯಮ’ದಿಂದ ಅಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.

ಮಾರಿಷಸ್‌ನಲ್ಲಿ ನ್ಯಾಯಶಾಸ್ತ್ರಜ್ಞ ಸರ್ ಮೌರಿಸ್ ರೌಲ್ಟ್‌ ಅವರ ಸ್ಮರಣಾರ್ಥ ನಡೆದ ‘ಬೃಹತ್ ಪ್ರಜಾಪ್ರಭುತ್ವದಲ್ಲಿ ಕಾನೂನಿನ ಆಳ್ವಿಕೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಬುಲ್ಡೋಜರ್ ನ್ಯಾಯ’ವನ್ನು ಸಮ್ಮತಿಸುವುದಿಲ್ಲ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪುನರುಚ್ಛರಿಸಿದರು. ಆ ವಿಚಾರವನ್ನು ಅವರು ಒತ್ತಿ ಹೇಳಿದರು.

2024ರ ನವೆಂಬರ್‌ನಲ್ಲಿ ‘ಬುಲ್ಡೋಜರ್ ನ್ಯಾಯ’ ಪ್ರಕರಣದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌, “ಯಾವುದೇ ಪ್ರಕರಣಗಳಲ್ಲಿನ ಆರೋಪಿಗಳ ಮನೆಗಳನ್ನು ಕೆಡವುವುದು ಕಾನೂನು ಪ್ರಕ್ರಿಯೆಗಳನ್ನು ಬದಿಗೊತ್ತುತ್ತವೆ. ಕಾನೂನಿನ ನಿಯಮವನ್ನು ಉಲ್ಲಂಘಿಸುತ್ತವೆ. ಸಂವಿಧಾನದ ಆರ್ಟಿಕಲ್ 21ರ ಅಡಿಯಲ್ಲಿ ಆಶ್ರಯ ಪಡೆಯುವ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ” ಎಂದು ಹೇಳಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಯಾಂಗವು ನ್ಯಾಯಾಧೀಶ, ತೀರ್ಪುಗಾರ ಮತ್ತು ಮರಣದಂಡನೆಕಾರನ ಪಾತ್ರಗಳನ್ನು ಏಕಕಾಲದಲ್ಲಿ ವಹಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಗವಾಯಿ ಹೇಳಿದರು. ಸಂವಿಧಾನದ ಪ್ರತಿಯೊಂದು ಅಂಶವನ್ನು ತಿದ್ದುಪಡಿ ಮಾಡಲು ಸಂಸತ್ತಿನ ಅಧಿಕಾರವನ್ನು ಕಡಿತಗೊಳಿಸಿದ 1973ರ ಕೇಶವಾನಂದ ಭಾರತಿ ತೀರ್ಪು ಸೇರಿದಂತೆ ಸುಪ್ರೀಂ ಕೋರ್ಟ್‌ನ ವಿವಿಧ ಹೆಗ್ಗುರುತು ತೀರ್ಪುಗಳನ್ನು ಸಿಜೆಐ ಉಲ್ಲೇಖಿಸಿದರು.

ಈ ಲೇಖನ ಓದಿದ್ದೀರಾ?: ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

“ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ನಂತರದ ಕಳೆದ 75 ವರ್ಷಗಳಲ್ಲಿ, ಕಾನೂನು ನಿಯಮದ ಪರಿಕಲ್ಪನೆಯು ಕಾನೂನು ಪಠ್ಯಗಳನ್ನು ಮೀರಿ ವಿಕಸನಗೊಂಡಿದೆ. ಸಾಮಾಜಿಕ, ರಾಜಕೀಯ ಹಾಗೂ ಸಾಂವಿಧಾನಿಕ ಚರ್ಚೆಯನ್ನು ಸಮಾನವಾಗಿ ವ್ಯಾಪಿಸಿದೆ” ಎಂದು ಹೇಳಿದರು.

ಸಾಮಾಜಿಕ ಕ್ಷೇತ್ರದಲ್ಲಿ, ಐತಿಹಾಸಿಕ ಅನ್ಯಾಯಗಳನ್ನು ಸರಿಪಡಿಸಲು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಕಾನೂನು ನಿಯಮದ ಭಾಷೆಯೇ ದಬ್ಬಾಳಿಕೆಯ ವಿರುದ್ಧ ಜನರು ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಕಾರಣವಾಗಿದೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...