ಮಾನ್ಸೂನ್ ಸಾಮಾನ್ಯ, ಕರಾವಳಿ ಕರ್ನಾಟಕದಲ್ಲಿ ಅಧಿಕ ಮಳೆ: ಖಾಸಗಿ ಹವಾಮಾನ ಸಂಸ್ಥೆ ಮುನ್ಸೂಚನೆ

Date:

2025ರಲ್ಲಿ ದೇಶದಲ್ಲಿ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ತಿಳಿಸಿದೆ. ಜೂನ್-ಸೆಪ್ಟೆಂಬರ್ ಅವಧಿಯಲ್ಲಿ 868.6 ಮಿಮೀ ಸರಾಸರಿ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ. ಈ ವರ್ಷದ ಮಾನ್ಸೂನ್‌ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇನ್ನೂ ತನ್ನ ಮುನ್ಸೂಚನೆಯನ್ನು ಬಿಡುಗಡೆ ಮಾಡಿಲ್ಲ.

ಶೇಕಡ 96ರಿಂದ ಶೇಕಡ 106ರವರೆಗೆ ಪ್ರಮಾಣಿತ ವ್ಯಾಪ್ತಿಯಲ್ಲಿ ಸಾಮಾನ್ಯ ಮಾನ್ಸೂನ್ ನಿರೀಕ್ಷೆಯಿದೆ. ದೇಶದ ಶೇಕಡ 20ರಷ್ಟು ಪ್ರದೇಶದಲ್ಲಿ ಮಾತ್ರ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಉಳಿದ ಶೇಕಡ 80ರಷ್ಟು ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಹೇಳಿದೆ.

ಇದನ್ನು ಓದಿದ್ದೀರಾ? ಮುಂದಿನ ಐದು ದಿನ ತಾಪಮಾನ ಇಳಿಕೆ, ಚಳಿ ಹೆಚ್ಚಳ : ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕೇರಳ, ಕರಾವಳಿ ಕರ್ನಾಟಕ ಮತ್ತು ಗೋವಾ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚುವರಿ ಮಳೆಯಾಗುವ ಸಾಧ್ಯತೆಯಿದೆ. ಇದು ಅನುಕೂಲಕರ ಮಳೆ ಎಂದು ಸ್ಕೈಮೆಟ್‌ ಮುನ್ಸೂಚನೆ ನೀಡಿದೆ.

ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶವನ್ನು ಒಳಗೊಂಡಿರುವ ಕೇಂದ್ರ ಮಾನ್ಸೂನ್ ವಲಯದಲ್ಲಿಯೂ ಸಾಕಷ್ಟು ಮಳೆಯಾಗುವ ನಿರೀಕ್ಷೆಯಿದೆ. ಆದರೆ ಈಶಾನ್ಯ ಪ್ರದೇಶ ಮತ್ತು ಉತ್ತರ ಭಾರತದ ಗುಡ್ಡಗಾಡು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

ಸ್ಕೈಮೆಟ್‌ನ ಮಾಸಿಕ ಮುನ್ಸೂಚನೆಯ ಪ್ರಕಾರ, ಜೂನ್‌ನಲ್ಲಿ ಶೇಕಡ 96, ಜುಲೈನಲ್ಲಿ ಶೇಕಡ 102, ಆಗಸ್ಟ್‌ನಲ್ಲಿ ಶೇಕಡ 108 ಮತ್ತು ಸೆಪ್ಟೆಂಬರ್‌ನಲ್ಲಿ ಶೇಕಡ 104ರಷ್ಟು ಮಳೆಯಾಗುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...