ಅರಬ್ಬಿ ಸಮುದ್ರದಲ್ಲಿ ಭಾರತೀಯ ನೌಕಾಪಡೆ ಹಡಗು ಅಪಹರಿಸುವ ಯತ್ನ ವಿಫಲ

Date:

ಅರಬ್ಬಿ ಸಮುದ್ರದಲ್ಲಿ ಸೊಮಾಲಿಯಾ ಕರಾವಳಿಯತ್ತ ಸಾಗುತ್ತಿದ್ದ ಭಾರತೀಯ ನೌಕಾಪಡೆ ಹಡಗನ್ನು ಅಪಹರಿಸುವ ಯತ್ನವನ್ನು ನೌಕಾಪಡೆಯ ತಕ್ಷಣದ ಪ್ರತಿಕ್ರಿಯೆಯಿಂದ ವಿಫಲಗೊಳಿಸಲಾಗಿದೆ.

ಶುಕ್ರವಾರ ಮುಂಜಾನೆ ಸೊಮಾಲಿಯಾ ಕರಾವಳಿಯತ್ತ ಸರಕು ಸಾಗಣೆ ಹೊತ್ತ ಭಾರತೀಯ ನೌಕಾಪಡೆಯ ಮಾಲ್ಟೀಸ್‌ ಹಡಗು ಸಾಗುತ್ತಿದ್ದಾಗ ಹಡಗಿನಲ್ಲಿ ಸೇರಿಕೊಂಡಿದ್ದ ಅಪಹರಣಕಾರರು ಹಡಗನ್ನು ಅಪಹರಿಸಲು ಹೊಂಚು ಹಾಕುತ್ತಿದ್ದರು. ತಕ್ಷಣವೇ ಭಾರತೀಯ ನೌಕಾಪಡೆಯ ಸಿಬ್ಬಂದಿ ಪ್ರತಿರೋಧ ವ್ಯಕ್ತಪಡಿಸಿ ಅಪಹರಣವನ್ನು ತಡೆದಿದ್ದಾರೆ. ಅಲ್ಲದೆ ಮಾಲ್ಟೀಸ್‌ ಹಡಗಿನ ಮೇಲೆ ನಿಗಾ ವಹಿಸಿದ್ದು, ಹೆಚ್ಚಿನ ಭದ್ರತೆ ವಹಿಸಲಾಗಿದೆ.

“ಮಾಲ್ಟೀಸ್‌ ಹಡಗು 18 ಸಿಬ್ಬಂದಿಯೊಂದಿಗೆ ತೆರಳುತ್ತಿದ್ದಾಗ ಡಿಸೆಂಬರ್‌ 14 ರಂದು ಇಂಗ್ಲೆಂಡ್‌ ಮೂಲದ ಯುಕೆಎಂಟಿಒ ನೌಕಾ ಸಂಸ್ಥೆ 6 ಅಪರಿಚಿತರು ಹಡಗಿನಲ್ಲಿರುವ ಬಗ್ಗೆ ಸಂದೇಶ ರವಾನಿಸಿತ್ತು. ಮಾಹಿತಿ ಪಡೆದ ನೌಕಾಪಡೆಯ ಸಿಬ್ಬಂದಿ ಅಪಹರಣ ಯತ್ನವನ್ನು ವಿಫಲಗೊಳಿಸಿದ್ದಾರೆ” ಎಂದು ಭಾರತೀಯ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಟ್ಟು ಅಂಗವೈಕಲ್ಯವಲ್ಲ; ಸ್ಮೃತಿ ಇರಾನಿ ಹೇಳಿಕೆ ಯಾರನ್ನು ಮೆಚ್ಚಿಸಲು?

“ಭಾರತೀಯ ನೌಕಾಪಡೆಯು ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಪಾಲುದಾರರು ಮತ್ತು ಸ್ನೇಹಪರ ವಿದೇಶಿ ರಾಷ್ಟ್ರಗಳೊಂದಿಗೆ ವ್ಯಾಪಾರಿ ಹಡಗುಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ,” ನೌಕಾಪಡೆ ತಿಳಿಸಿದೆ.

ಭಾರತೀಯ ನೌಕಾಪಡೆಯ ವಿಮಾನವು ಹಡಗಿನ ಚಲನೆಯನ್ನು ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದೆ. ಈಗ ಹಡಗು ಸೋಮಾಲಿಯಾದ ಕರಾವಳಿಯತ್ತ ಸಾಗುತ್ತಿದೆ. ಎಂವಿ ರೆಯುನ್ ಎಂಬ ಹಡಗು ಗುರುವಾರ ಮಾಲ್ಟಾ ಮೇಲೆ ದಾಳಿ ನಡೆಸಿತ್ತು, ಸಿಬ್ಬಂದಿ ಹಡಗಿನ ನಿಯಂತ್ರಣ ಕಡೆದುಕೊಂಡಿದ್ದರು ಎಂದು ಯುಕೆ ಮೆರೈನ್ ಟ್ರೇಡ್ ಆಪರೇಷನ್ಸ್ ತಿಳಿಸಿದೆ.

ಹಿಂದೂ ಮಹಾಸಾಗರದಲ್ಲಿ 2017 ರಿಂದ ಸೊಮಾಲಿ ಕಡಲ್ಗಳ್ಳರು ಹಲವಾರು ದೇಶಗಳ ಹಡಗುಗಳನ್ನು ಅಪಹರಿಸಲು ಪ್ರಯತ್ನಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...