ಭಾರತೀಯ ಮೂಲದ ಸಬೀಹ್ ಖಾನ್ ಆ್ಯಪಲ್ ಕಂಪನಿಯ ಸಿಒಒ ಆಗಿ ನೇಮಕ

Date:

ದುಬಾರಿ ಬೆಲೆಯ ಮೊಬೈಲ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಆ್ಯಪಲ್ ಕಂಪನಿಯು ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ (ಸಿಒಒ) ಭಾರತ ಮೂಲದ ಸಬೀಹ್ ಖಾನ್ (58) ಅವರನ್ನು ನೇಮಕ ಮಾಡಿದೆ.

ಕಳೆದ 30 ವರ್ಷಗಳಿಂದ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಖಾನ್ ಅವರು ಪ್ರಸ್ತುತ ಕಾರ್ಯನಿರ್ವಹಣಾ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿದ್ದಾರೆ. ಈ ತಿಂಗಳ ಕೊನೆಯಲ್ಲಿ ನಿವೃತ್ತಿಯಾಗಲಿರುವ ಸಿಒಒ ಜೆಫ್ ವಿಲಿಯಮ್ಸ್ ಅವರ ಜಾಗಕ್ಕೆ ಖಾನ್ ನೇಮಕಗೊಳ್ಳುತ್ತಿದ್ದಾರೆ.

1966ರಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಜನಿಸಿದ್ದ ಖಾನ್, ತಮ್ಮ ಶಾಲಾ ಶಿಕ್ಷಣವನ್ನು ಸಿಂಗಪುರದಲ್ಲಿ ಪೂರೈಸಿದ್ದರು. ನಂತರ ಅಮೆರಿಕದಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಉನ್ನತ ಪದವಿ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

3 ದಶಕಗಳ ಕಾಲ ಆ್ಯಪಲ್‌ನಲ್ಲಿ ಸೇವೆ ಸಲ್ಲಿಸಿರುವ ಖಾನ್, 2019ರಲ್ಲಿ ಕಾರ್ಯನಿರ್ವಹಣಾ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು.

ಕಳೆದ ಆರು ವರ್ಷಗಳಿಂದ ಖಾನ್ ಅವರು ಆ್ಯಪಲ್ ಉತ್ಪನ್ನಗಳ ಜಾಗತಿಕ ಪೂರೈಕೆ ಸರಪಳಿ, ಯೋಜನೆ, ಸಂಗ್ರಹಣೆ, ಉತ್ಪಾದನೆ, ಲಾಜಿಸ್ಟಿಕ್ ಮತ್ತು ಉತ್ಪನ್ನ ಪೂರೈಕೆಯ ಮೇಲ್ವಿಚಾರಣೆ ನಡೆಸುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...