ಭಾರತದಲ್ಲಿ ತೆವಳುತ್ತಿರುವ ಮೂಲಸೌಕರ್ಯ ಯೋಜನೆಗಳಿಗೆ ಬಾಂದ್ರಾ ಕಾಲ್ತುಳಿತ ತಾಜಾ ನಿದರ್ಶನ: ರಾಹುಲ್ ಗಾಂಧಿ

Date:

ಭಾರತದಲ್ಲಿ ತೆವಳುತ್ತಿರುವ ಮೂಲಸೌಕರ್ಯ ಯೋಜನೆಗಳಿಗೆ ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣ ತಾಜಾ ನಿದರ್ಶನ ಎಂದು ಭಾನುವಾರ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಯೋಜನೆಗಳಿಗೆ ನೆರವೇರಿಸುವ ಶಿಲಾನ್ಯಾಸವು ಸಾರ್ವಜನಿಕರ ಹಿತಾಸಕ್ತಿಯಿಂದ ಕೂಡಿದ್ದರೆ, ಉದ್ಘಾಟನೆಗಳು ಹಾಗೂ ಪ್ರಚಾರಗಳು ಸ್ವೀಕಾರಾರ್ಹವಾಗುತ್ತವೆ. ನಿರ್ವಹಣೆಯ ಕೊರತೆ ಹಾಗೂ ಸಾರ್ವಜನಿಕ ಆಸ್ತಿಗಳು, ಸೇತುವೆಗಳು, ಅಂಕಣಗಳು ಹಾಗೂ ಪ್ರತಿಮೆಗಳು ಟೇಪನ್ನು ಕತ್ತರಿಸಿದ ನಂತರ ತೆವಳತೊಡಗುವುದರಿಂದ, ಜನರು ತಮ್ಮ ಜೀವ ಕಳೆದುಕೊಳ್ಳುವಂತಾಗುವುದು ತೀವ್ರ ಕಳವಳಕಾರಿ ಸಂಗತಿ” ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಜೂನ್ ತಿಂಗಳಲ್ಲಿ ಬಾಲಾಸೋರ್ ಬಳಿ ನಡೆದಿದ್ದ ರೈಲು ಅಪಘಾತದಲ್ಲಿ 300 ಮಂದಿ ತಮ್ಮ ಜೀವ ಕಳೆದುಕೊಂಡಿದ್ದರು. ಸಂತ್ರಸ್ತರಿಗೆ ಪರಿಹಾರ ನೀಡುವ ಬದಲು, ಅವರೆಲ್ಲ ಸುದೀರ್ಘ ಕಾಲದ ಕಾನೂನು ಹೋರಾಟದಲ್ಲಿ ಸಿಲುಕಿಕೊಳ್ಳುವಂತೆ ಬಿಜೆಪಿ ಸರಕಾರ ಮಾಡಿದೆ ಎಂದೂ ಅವರು ಆರೋಪಿಸಿದ್ದಾರೆ.

ಭಾನುವಾರ ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಗೋರಖ್ ಪುರ್‌ಗೆ ತೆರಳುತ್ತಿದ್ದ ರೈಲಿಗೆ ಹತ್ತಲು ಪ್ರಯಾಣಿಕರು ಮುಂದಾದಾಗ, ನೂಕುನುಗ್ಗಲುಂಟಾಗಿ ನಡೆದ ಕಾಲ್ತುಳಿತ ಘಟನೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ನಾಗರಿಕ ಹಾಗೂ ವಿಪತ್ತು ನಿಯಂತ್ರಣ ಅಧಿಕಾರಿಗಳು ತಿಳಿಸಿದ್ದಾರೆ.ಆದರೆ, ಈ ಘಟನೆಯಲ್ಲಿ ಇಬ್ಬರು ಮಾತ್ರ ಗಾಯಗೊಂಡಿದ್ದಾರೆ ಎಂದು ಪಶ್ಚಿಮ ರೈಲ್ವೆ ವಲಯವು ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...