ಸತತ ಮೂರನೇ ವರ್ಷ ದೇಶದಲ್ಲಿ ಜೂನ್ ಮಳೆ ಪ್ರಮಾಣ ಶೇಕಡ 11ರಷ್ಟು ಕಡಿಮೆ

Date:

ಸತತ ಮೂರನೇ ವರ್ಷ ದೇಶದಲ್ಲಿ ಜೂನ್ ತಿಂಗಳ ಮಳೆಯ ಪ್ರಮಾಣವು ಸರಾಸರಿಗಿಂತ ಕಡಿಮೆಯಾಗಿದೆ. 2020ರಿಂದ ಜೂನ್ ಮಳೆ ಪ್ರಮಾಣ ಇಳಿಕೆಯಾಗುತ್ತಿದೆ. ನಿಖರವಾಗಿ ಒಂದು ತಿಂಗಳ ಹಿಂದೆ ಮಾನ್ಸೂನ್ ಆರಂಭವಾಗಿದ್ದು ಭಾರತದಲ್ಲಿ ಒಟ್ಟಾಗಿ 147.2 ಮಿಮೀ ಮಳೆ ಸುರಿದಿದೆ. ಇದು ಸಾಮಾನ್ಯಕ್ಕಿಂತ ಶೇಕಡ 11ರಷ್ಟು ಕಡಿಮೆಯಾಗಿದೆ.

ಇದು ಆರಂಭದ ತಿಂಗಳಾಗಿರುವ ಕಾರಣ ಮಾನ್ಸೂನ್ ಇಡೀ ಭಾರತದಲ್ಲಿರದು ಮತ್ತು ಸ್ವಲ್ಪ ಮಳೆಯ ಕೊರತೆ ಸಾಮಾನ್ಯವಾಗಿದೆ. ಜೂನ್ ಮಳೆಯು ದೇಶದ ಒಟ್ಟು ನೈಋತ್ಯ ಮಾನ್ಸೂನ್ ಕಾಲೋಚಿತ ಮಳೆ 880 ಮಿಲಿ ಮೀಟರ್‌ನ (1971-2020 ಡೇಟಾ) ಶೇಕಡ 15ರಷ್ಟಿದೆ.

ಈ ಸೀಸನ್‌ನಲ್ಲಿ ನೈಋತ್ಯ ಮಾನ್ಸೂನ್ ಮೇ 30ರಂದು ಕೇರಳವನ್ನು ತಲುಪಿದೆ. ಅದಾದ ಬಳಿಕ ಮಹಾರಾಷ್ಟ್ರದವರೆಗೂ ಆವರಿಸಿದೆ. ಮಹಾರಾಷ್ಟ್ರದಲ್ಲಿ ಜೂನ್ 9ರ ಸುಮಾರಿಗೆ ಮಾನ್ಸೂನ್ ಆರಂಭವಾಗಿದೆ. ಅದಾದ ಬಳಿಕ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಮಾನ್ಸೂನ್ ಆರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಉಳಿದಂತೆ ಹಲವಾರು ರಾಜ್ಯಗಳಲ್ಲಿ ಜೂನ್ ತಿಂಗಳಲ್ಲಿಯೂ ಭಾರೀ ತಾಪಮಾನ ಏರಿಕೆಯಾಗಿದೆ. ಬಿಸಿ ಗಾಳಿ, ತಾಪಮಾನ ಏರಿಕೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ?  ದೆಹಲಿ| ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ: 7 ಮಂದಿ ಸಾವು; ಆರೆಂಜ್ ಅಲರ್ಟ್ ಘೋಷಣೆ

ಜೂನ್‌ನಲ್ಲಿ, 17 ರಾಜ್ಯಗಳಿಂದ ಮಳೆಯ ಕೊರತೆಯಾಗಿದೆ. ಆದರೆ 19 ರಾಜ್ಯಗಳಲ್ಲಿ ಸಾಮಾನ್ಯ ಅಥವಾ ಹೆಚ್ಚಿನ ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳು ತಿಳಿಸಿವೆ.

ಮುಂದಿನ ಎರಡು ಮೂರು ದಿನಗಳಲ್ಲಿ, ಮಾನ್ಸೂನ್ ತನ್ನ ಸಾಮಾನ್ಯ ದಿನವಾದ ಜುಲೈ 15ರಂದು ಇಡೀ ದೇಶದಲ್ಲಿ ಆವರಿಸುವ ಸಾಧ್ಯತೆಯಿದೆ.

ಇನ್ನು ಭಾರೀ ತಾಪಮಾನ ಏರಿಕೆಯಿಂದ ಜನರು ತತ್ತರಿಸಿದ್ದ ದೆಹಲಿಯಲ್ಲಿ ಭಾರೀ ಮಳೆಯಾಗಿದೆ. ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬಿಹಾರ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಜುಲೈ 3 ಮತ್ತು 4ರಂದು ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಐಎಂಡಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...