ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ; 180 ದೇಶಗಳ ಪೈಕಿ ಭಾರತಕ್ಕೆ 161ನೇ ಸ್ಥಾನ!

Date:

  • ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ಬಿಡುಗಡೆ
  • ‘ರಿಪೋರ್ಟರ್ಸ್ ವಿದೌಟ್‌ ಬಾರ್ಡರ್ಸ್‌’ ಸಂಸ್ಥೆಯಿಂದ ಪ್ರಕಟ

‘ರಿಪೋರ್ಟರ್ಸ್ ವಿದೌಟ್‌ ಬಾರ್ಡರ್ಸ್‌’ ಸಂಸ್ಥೆ ಪ್ರಕಟಿಸಿರುವ ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ಆಘಾತಕಾರಿ ಅಂಕಿ- ಅಂಶವನ್ನು ಬಹಿರಂಗಪಡಿಸಿದೆ. ಈ ಸೂಚ್ಯಂಕದಲ್ಲಿ ಭಾರತ 161ನೇ ಸ್ಥಾನಕ್ಕೆ ಕುಸಿದಿದೆ.

ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ಪಟ್ಟಿಯಲ್ಲಿ ಕಳೆದ ಬಾರಿಗಿಂತ 11 ಸ್ಥಾನಗಳ ಕುಸಿತ ಕಂಡಿರುವ ಭಾರತ, ನೆರೆಯ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕಿಂತ ಕೆಳಗಿನ ಶ್ರೇಯಾಂಕ ಪಡೆದಿದೆ.

180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ, ಕಳೆದ ಬಾರಿ 150ನೇ ಮತ್ತು ಅದಕ್ಕೂ ಮೊದಲಿನ ಪಟ್ಟಿಯಲ್ಲಿ 142ನೇ  ಸ್ಥಾನದಲ್ಲಿತ್ತು. ಆ ಮೂಲಕ ದೇಶದಲ್ಲಿ ಪತ್ರಕರ್ತರು ಅತಿ ಕೆಟ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂಬುದು ಬಹಿರಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ (95), ಪಾಕಿಸ್ತಾನ (150), ಅಫ್ಘಾನಿಸ್ತಾನ (152), ಶ್ರೀಲಂಕಾ 135ನೇ ಶ್ರೇಯಾಂಕ ಹೊಂದಿದೆ.  ಬಾಂಗ್ಲಾದೇಶ 163ನೇ ಮತ್ತು ಚೀನಾ 179ನೇ ಸ್ಥಾನದಲ್ಲಿದೆ ಎಂದು ಸಂಸ್ಥೆಯು ಮಂಗಳವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ ನಾರ್ವೆ, ಐರ್ಲೆಂಡ್ ಮತ್ತು ಡೆನ್ಮಾರ್ಕ್ ಉತ್ತಮ ಪತ್ರಿಕಾ ಸ್ವಾತಂತ್ರ್ಯ ಹೊಂದಿರುವ ಮೊದಲ ಮೂರು ರಾಷ್ಟ್ರಗಳಾಗಿವೆ.

ರಾಜಕೀಯ, ಆರ್ಥಿಕ, ಶಾಸಕಾಂಗ, ಸಾಮಾಜಿಕ ಹಾಗೂ ಭದ್ರತೆ ಸೇರಿದಂತೆ ಐದು ಅಂಶಗಳ ಆಧಾರದ ಮೇಲೆ ‘ರಿಪೋರ್ಟರ್ಸ್ ವಿದೌಟ್‌ ಬಾರ್ಡರ್ಸ್‌’ ಸಂಸ್ಥೆ ಪತ್ರಿಕಾ ಸ್ವಾತಂತ್ರ್ಯ ಸಂಬಂಧಿಸಿ ಮೌಲ್ಯಮಾಪನ ಮಾಡುತ್ತದೆ.

ಈ ಎಲ್ಲಾ ಐದು ಅಂಶಗಳಲ್ಲಿ ಭಾರತದ ಪರಿಸ್ಥಿತಿಯು ವರ್ಷದಿಂದ ವರ್ಷಕ್ಕೆ ಹದಗೆಡುತ್ತಿದೆ ಎಂದು ವರದಿ ಹೇಳಿದೆ. ರಾಜಕೀಯ ಅಂಶ 145 ರಿಂದ 169 ಮತ್ತು ಶಾಸಕಾಂಗ ಅಂಶ 120 ರಿಂದ 144 ಅಂದರೆ ಒಟ್ಟು 24 ಸ್ಥಾನಗಳಲ್ಲಿ ಕುಸಿತ ಕಂಡಿದೆ.

ಈ ಸುದ್ದಿ ಓದಿದ್ದೀರಾ?: ದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

2023ರ ಜನವರಿಯಿಂದ ಏಪ್ರಿಲ್‌ ತಿಂಗಳ ಅಂತ್ಯದ ಅವಧಿಯಲ್ಲಿ ಭಾರತದಲ್ಲಿ ಓರ್ವ ಪತ್ರಕರ್ತನ ಕೊಲೆಯಾಗಿದ್ದು, 10 ಮಂದಿ ಬಂಧನಕ್ಕೊಳಗಾಗಿದ್ದಾರೆ ಎಂದು ವರದಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...