ಇಂಡಿಗೋ ವಿಮಾನ ಹಾರಾಟದಲ್ಲಿ ಮುಂದುವರಿದ ವ್ಯತ್ಯಯ: ಷೇರು ಶೇ.3ಕ್ಕಿಂತ ಅಧಿಕ ಕುಸಿತ

Date:

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಮಾತೃ ಸಂಸ್ಥೆಯಾದ ಇಂಟರ್‌ಗ್ಲೋಬ್ ಏವಿಯೇಷನ್ ​​ಲಿಮಿಟೆಡ್‌ನ ಷೇರುಗಳು ಡಿಸೆಂಬರ್ 11ರ ಗುರುವಾರ ಮತ್ತೆ ಶೇಕಡ 3ಕ್ಕಿಂತ ಅಧಿಕ ಕುಸಿತ ಕಂಡಿದೆ. ಕಳೆದ ಹಲವು ದಿನಗಳಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಮುಂದುವರಿದಿದ್ದು ಇದು ಷೇರು ಮಾರುಕಟ್ಟೆಯಲ್ಲಿ ಋಣಾತ್ಮಕ ಪರಿಣಾಮ ಬೀರಿದೆ.

ಕಳೆದ ಕೆಲವು ದಿನಗಳಿಂದ ಸಿಬ್ಬಂದಿ ಕೊರತೆ ಕಾರಣದಿಂದಾಗಿ ಇಂಡಿಗೋದ ಹಲವು ವಿಮಾನಗಳ ಹಾರಾಟ ರದ್ದಾದ ಕಾರಣದಿಂದಾಗಿ ಲಕ್ಷಾಂತರ ಪ್ರಯಾಣಿಕರು ಪರದಾಡುವಂತಾಗಿದೆ. ಸದ್ಯ ಇಂಡಿಗೋ ವಿಮಾನ ಮಾರ್ಗವನ್ನೂ ಕಡಿತಗೊಳಿಸಲಾಗಿದೆ. ಇದರಿಂದಾಗಿ ಭಾರೀ ಆರ್ಥಿಕ ಸಂಕಷ್ಟಕ್ಕೆ ಇಂಡಿಗೋ ಒಳಗಾಗಿದೆ. ಇವೆಲ್ಲವುದರ ನಡುವೆ ವಿಮಾನಯಾನ ಸಂಸ್ಥೆಯು ಪ್ರಸ್ತುತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಹಣಕಾಸು ಮಾರ್ಗದರ್ಶನವನ್ನು ಕಡಿತಗೊಳಿಸಿದೆ.

ಇದನ್ನು ಓದಿದ್ದೀರಾ? 10 ಗಂಟೆ ಇಂಡಿಗೋ ವಿಮಾನ ವಿಳಂಬ: ಪೈಲಟ್ ಮೇಲೆ ಹಲ್ಲೆಗೈದ ಪ್ರಯಾಣಿಕ; ವಿಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯವನ್ನು ಅಳೆಯಲು ಬಳಸುವ ಪ್ರಮುಖ ಮೆಟ್ರಿಕ್ ಆದ ಸರಾಸರಿ ಸೀಟ್ ಕಿಲೋಮೀಟರ್ (ASK) ಬದಲಾವಣೆ ಕಾರಣದಿಂದಾಗಿ ಇಂಡಿಗೋ ಈ ಬದಲಾವಣೆ ಮಾಡಿಕೊಂಡಿದೆ ಎಂದು ಹೇಳಲಾಗಿದೆ. ಈ ಹಂತದಲ್ಲಿ ಒಟ್ಟಾರೆ ಆರ್ಥಿಕ ಪರಿಷ್ಕರಣೆ ಮಾಡುವುದಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

“ಸುಮಾರು 4,500 ವಿಮಾನಗಳ ರದ್ದತಿಯಿಂದಾಗಿ ಆದಾಯ ನಷ್ಟವಾಗಿದೆ. ಕಾರ್ಯಾಚರಣೆಯ ಅಡಚಣೆಯಾದರೂ ನಾವು ಪ್ರಯಾಣಿಕರ ಬೆಂಬಲ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸಿದ್ದೇವೆ. ಇದಕ್ಕಾಗಿ ಹೆಚ್ಚುವರಿ ವೆಚ್ಚಗಳನ್ನು ಭರಿಸಲಾಗುತ್ತಿದೆ” ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.

ಇಂಡಿಗೋ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ (ಡಿಜಿಸಿಎ) ಪರಿಷ್ಕೃತ ವಿಮಾನ ವೇಳಾಪಟ್ಟಿಯನ್ನು ಸಲ್ಲಿಸಿದೆ. ಪ್ರಯಾಣಿಕರ ಕುಂದುಕೊರತೆಗಳ ಪರಿಹಾರಕ್ಕಾಗಿ ಜಾಗರೂಕವಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದೂ ಹೇಳಿಕೊಂಡಿದೆ.

ಈ ಎಲ್ಲ ಬೆಳವಣಿಗೆ ನಡುವೆ ಇಂಡಿಗೋ ಷೇರುಗಳು ಗುರುವಾರ ಶೇ. 3.2ರಷ್ಟು ಕುಸಿತ ಕಂಡು ₹4,650ರಲ್ಲಿ ವಹಿವಾಟು ನಡೆಸುತ್ತಿವೆ. ಬುಧವಾರವೂ ಶೇ.3ರಷ್ಟು ಕುಸಿದಿದೆ. ಕಳೆದ ಒಂದು ತಿಂಗಳಿನಿಂದ ಷೇರುಗಳು ಶೇ.20ರಷ್ಟು ಇಳಿದಿದೆ. 2025ರಲ್ಲಿ ಕಂಡ ಎಲ್ಲ ಲಾಭಗಳನ್ನು ಈ ವರ್ಷದ ಅಂತ್ಯದೊಳಗೆ ಇಂಡಿಗೋ ಕಳೆದುಕೊಳ್ಳುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...