ಮೂರು ದಿನಗಳ ಹಿಂದೆ ಇಂಡೋನೇಷ್ಯಾದಲ್ಲಿ ಇಸ್ಲಾಮಿಕ್ ಸನಿವಾಸ ಶಾಲಾ ಕಟ್ಟಡ ಕುಸಿದಿತ್ತು. ಅಂದಿನಿಂದ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಾವಿನ ಸಂಖ್ಯೆಯ 61ಕ್ಕೆ ಏರಿಕೆಯಾಗಿದೆ. ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಮೃತದೇಹಗಳು ಸಿಲುಕಿರಬಹುದು ಎಂದು ಹೇಳಲಾಗಿದೆ.
ಸನಿವಾಸ ಶಾಲೆಯ ಪ್ರಾರ್ಥನಾ ಮಂದಿರದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸುವ ವೇಳೆ, ಆ ಕಟ್ಟಡ ಕುಸಿದು ಬಿದ್ದಿತ್ತು. ಹಲವಾರು ವಿದ್ಯಾರ್ಥಿಗಳು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಎಲ್ಲರೂ 12 ರಿಂದ 19 ವರ್ಷದೊಳಗಿನ ಮಕ್ಕಳು ಎಂದು ತಿಳಿದುಬಂದಿದೆ.
ಸುಮಾರು 99 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು, ಅವರೆಲ್ಲರಿಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದವರಿಗೆ ಚಿಕಿತ್ಸೆ ಮುಂದುವರೆದಿದೆ.
ಸುಮಾರು 100 ವರ್ಷಗಳಿಗೂ ಹಳೆದಯಾಗದ ಕಟ್ಟವನ್ನು ಇತ್ತೀಚೆಗೆ ಅಕ್ರವಾಗಿ ವಿಸ್ತರಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಶಿಥಿಲಗೊಂಡಿದ್ದ ಕಟ್ಟಡವನ್ನು ಕೆಡವಿ, ಹೊಸ ಕಟ್ಟಡ ನಿರ್ಮಾಣ ಮಾಡದೇ, ಹಳೆಯ ಕಟ್ಟಡವನ್ನೇ ವಿಸ್ತರಿಸಿದ್ದರಿಂದ ಘಟನೆ ಸಂಭವಿಸಿದೆ ಎಂದು ದೂರಲಾಗಿದೆ.




