ಕೇರಳ | ಮೆದುಳು ತಿನ್ನುವ ಅಮೀಬಾದಿಂದ 5 ವರ್ಷದ ಬಾಲಕಿ ಸಾವು

Date:

ಕಲುಷಿತ ನೀರಿನಲ್ಲಿ ಕಂಡು ಬರುವ ಅಪರೂಪವಾಗಿ ಮನುಷ್ಯರ ಮೆದುಳಿಗೆ ಹಾನಿಗೊಳಿಸುವ ಅಮೀಬಾ ದಿಂದ 5 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಇಂದು ನಡೆದಿದೆ.

ಮಲಪ್ಪುರಂ ಜಿಲ್ಲೆಯ ಮುನ್ನಿಯೂರ್‌ ಪಂಚಾಯತ್‌ ವ್ಯಾಪ್ತಿಯ ಕಲ್ಲಿಕೋಟೆ ವೈದ್ಯಕೀಯ ಕಾಲೇಜಿನ ಆರೋಗ್ಯ ಕೇಂದ್ರದಲ್ಲಿ ವಾರದ ಹಿಂದೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 5 ವರ್ಷದ ಬಾಲಕಿ ಸೋಮವಾರ(ಮೇ.20) ಮೃತಪಟ್ಟಿದ್ದಳು.

ವೈದ್ಯಕೀಯ ಪರಿಣಿತರ ಪ್ರಕಾರ ಈ ಬಾಲಕಿ ಮೆದುಳಿಗೆ ಹಾನಿಗೊಳಿಸುವ ಪರಾವಲಂಬಿಯಲ್ಲದ ಜೀವಂತ ಅಮೀಬಾ ಬ್ಯಾಕ್ಟೀರಿಯಾ ಕಲುಷಿತ ನೀರಿನಿಂದ ಮೂಗಿನೊಳಗೆ ಪ್ರವೇಶಿಸಿ ಬಾಲಕಿಯ ಮೆದುಳನ್ನು ಹಾನಿಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಬಾಲಕಿ ಮೇ. 1 ಹಾಗೂ ಮೇ 10 ರಂದು ತನ್ನ ಮನೆಯ ಹತ್ತಿರದ ಕೊಳದಲ್ಲಿ ಆಟವಾಡಿದ್ದಾಳೆ. ನಂತರದಲ್ಲಿ ಜ್ವರ, ತಲೆನೋವು, ವಾಂತಿ ಮುಂತಾದ ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಕೋವ್ಯಾಕ್ಸಿನ್ ಲಸಿಕೆ ಪಡೆದ ವರ್ಷದ ನಂತರ ಶೇ.30 ಮಂದಿಗೆ ಆರೋಗ್ಯ ಸಮಸ್ಯೆಗಳು

ಆಸ್ಪತ್ರೆಗೆ ದಾಖಲಿಸಿದ ನಂತರ ಬಾಲಕಿಯನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಬಾಲಕಿ ಆಟವಾಡಿದ ಕೊಳದಲ್ಲಿಯೇ ಇತರ ಕೆಲವು ಮಕ್ಕಳು ಆಟವಾಡಿದ್ದಾರೆ, ಇವರನ್ನು ಕೂಡ ಆರೋಗ್ಯ ತಪಾಸಣೆಯಲ್ಲಿ ಇಡಲಾಗಿತ್ತು. ತದ ನಂತರ ಮೆದುಳಿಗೆ ಹಾನಿಗೊಳಿಸುವ ಯಾವುದೇ ರೋಗಗಳು ಕಂಡುಬರದ ಕಾರಣ ಆಸ್ಪತ್ರೆಯಿಂದ ಈ ಮಕ್ಕಳನ್ನು ಬಿಡುಗಡೆಗೊಳಿಸಲಾಗಿದೆ.

ಮೆದುಳಿಗೆ ಹಾನಿಗೊಳಿಸುವ ಜೀವಂತ ಅಮೀಬಾ ರೋಗವು ಅಲಪ್ಪುಳ ಜಿಲ್ಲೆಯಲ್ಲಿ 2017 ಹಾಗೂ 2023 ರಲ್ಲಿ ವರದಿಯಾಗಿದ್ದವು.

ಜ್ವರ, ತಲೆನೋವು, ವಾಂತಿ ಹಾಗೂ ಸೀನುವಿಕೆ ಈ ರೋಗದ ಪ್ರಮುಖ ಲಕ್ಷಣವಾಗಿದೆ. ಜೀವಂತವಿರುವ ಅಮೀಬಾ ಬ್ಯಾಕ್ಟೀರಿಯಾ ಮೂಗಿನ ಮೂಲದ ದೇಹವನ್ನು ಪ್ರವೇಶಿಸಿ ಮೆದುಳನ್ನು ತಿನ್ನುತ್ತವೆ. ತುರ್ತು ವೈದ್ಯಕೀಯ ಚಿಕಿತ್ಸೆ ಹೊರತುಪಡಿಸಿ ಬಹುತೇಕ ಸಂದರ್ಭಗಳಲ್ಲಿ ಅಮೀಬಾ ಮೆದುಳು ಪ್ರವೇಶಿಸಿದ ನಂತರ ಸಾವಿನ ಸಾಧ್ಯತೆ ಹೆಚ್ಚಿರುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...