ಮೌಲ್ಯಮಾಪನ ಪರೀಕ್ಷೆ ಅನುತ್ತೀರ್ಣ: ಮೈಸೂರು ಇನ್ಫೋಸಿಸ್‌ ಕ್ಯಾಂಪಸ್‌ನ 700 ಟ್ರೈನಿಗಳು ವಜಾ

Date:

ಮೌಲ್ಯಮಾಪನ ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡ ತನ್ನ ಮೈಸೂರು ಕ್ಯಾಂಪಸ್ ನ 700 ಟ್ರೈನಿಗಳನ್ನು ವಜಾಗೊಳಿಸಲು ಇನ್ಫೋಸಿಸ್ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ 700 ಅಭ್ಯರ್ಥಿಗಳು ಕಳೆದ ನಾಲ್ಕು ತಿಂಗಳುಗಳಿಂದ ತರಬೇತಿಯಲ್ಲಿದ್ದರು. ಬಹುತೇಕರು 2022ರ ಇಂಜಿನಿಯರಿಂಗ್‌ ಪದವೀಧರರಾಗಿದ್ದು, 3 ರಿಂದ 3.5 ಲಕ್ಷ ಪ್ಯಾಕೇಜ್‌ ನೀಡಿ ನೇಮಕ ಮಾಡಿಕೊಳ್ಳಲಾಗಿತ್ತು.

2024ರ ಅಕ್ಟೋಬರ್‌ನಲ್ಲಿ ಹೀಗೆ ನೇಮಕ ಮಾಡಿಕೊಂಡವರಲ್ಲಿ ಅರ್ಧದಷ್ಟು ಜನರನ್ನು ಕೆಲಸದಿಂದ ತೆಗೆದು ಹಾಕಲು ಕಂಪನಿ ಹೊರಟಿದೆ. ಇವರನ್ನೆಲ್ಲ ಸುಮಾರು ಎರಡೂವರೆ ವರ್ಷಗಳ ಕಾಲ ಕಾಯುವಂತೆ ಮಾಡಿ ನಂತರ ಇನ್ಫೋಸಿಸ್‌ ನೇಮಕ ಮಾಡಿಕೊಂಡಿತ್ತು.

ಟ್ರೇನಿಗಳ ವಜಾ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇನ್ಫೋಸಿಸ್‌, “ನಮ್ಮ ಸಂಸ್ಥೆಯಲ್ಲಿ ಕಠಿಣ ನೇಮಕಾತಿ ಪ್ರಕ್ರಿಯೆಯನ್ನು ಹೊಂದಿದ್ದೇವೆ. ನಮ್ಮ ಮೈಸೂರು ಕ್ಯಾಂಪಸ್‌ನಲ್ಲಿ ಪ್ರಾಥಮಿಕ ತರಬೇತಿ ಪಡೆದ ನಂತರ ಎಲ್ಲ ಹೊಸಬರು ಆಂತರಿಕ ಮೌಲ್ಯಮಾಪನಗಳಲ್ಲಿ ಉತ್ತೀರ್ಣರಾಗಬೇಕು. ಹೊಸಬರಿಗೆ ಇದರಲ್ಲಿ ಉತ್ತೀರ್ಣರಾಗಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ. ಇದರಲ್ಲಿ ವಿಫಲವಾದಲ್ಲಿ ಅವರು ಸಂಸ್ಥೆಯೊಂದಿಗೆ ಮುಂದುವರಿಯಲು ಸಾಧ್ಯವಿಲ್ಲ. ಅವರ ಜೊತೆಗಿನ ಒಪ್ಪಂದದಲ್ಲಿಯೂ ಇದನ್ನು ಉಲ್ಲೇಖಿಸಲಾಗಿರುತ್ತದೆ. ಈ ಪ್ರಕ್ರಿಯೆ ಎರಡು ದಶಕಗಳಿಂದಲೂ ಚಾಲ್ತಿಯಲ್ಲಿದೆ. ನಮ್ಮ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಪ್ರತಿಭೆಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಈ ವ್ಯವಸ್ಥೆಯನ್ನು ಹೊಂದಿದ್ದೇವೆ,” ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ‘ಇದು ಅನ್ಯಾಯ. ಪರೀಕ್ಷೆಗಳು ತುಂಬಾ ಕಠಿಣವಾಗಿದ್ದವು ಮತ್ತು ನಮ್ಮನ್ನು ಅನುತ್ತೀರ್ಣ ಮಾಡಲೆಂದೇ ಹೀಗೆ ಮಾಡಲಾಗಿತ್ತು. ನಮ್ಮ ಭವಿಷ್ಯಕ್ಕೆ ಕತ್ತಲು ಕವಿದಿದ್ದು, ತರಬೇತಿ ಪಡೆದ ಅನೇಕರು ದಿಕ್ಕು ಕಾಣದಾಗಿದ್ದಾರೆ’ ಎಂದು ಉದ್ಯೋಗ ಕಳೆದುಕೊಂಡವರು ನೋವು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌; ಜನಪರ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರ ನಡೆ ಸರ್ವಥಾ ಸರಿಯಲ್ಲ

ತರಬೇತಿ ಪಡೆದವರು ಮೊಬೈಲ್ ಫೋನ್‌ಗಳನ್ನು ಒಯ್ಯುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಕಂಪನಿಯು ಬೌನ್ಸರ್‌ಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿತ್ತು ಎನ್ನಲಾಗಿದೆ. ಆದರೆ, ಇನ್ಫೋಸಿಸ್‌ ಇದನ್ನು ನಿರಾಕರಿಸಿದ್ದು, ಸಂಜೆ 6 ಗಂಟೆಯೊಳಗೆ ಆವರಣವನ್ನು ಖಾಲಿ ಮಾಡುವಂತೆ ಟ್ರೇನಿಗಳಿಗೆ ಸೂಚಿಸಿದೆ ಎಂದು ಹೇಳಲಾಗಿದೆ.

ಇನ್ಫೋಸಿಸ್‌ ಕ್ರಮದ ವಿರುದ್ಧ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಅಧಿಕೃತ ದೂರು ಸಲ್ಲಿಸುತ್ತಿರುವುದಾಗಿ ನಾಸೆಂಟ್‌ ಇನ್ಫೋರ್ಮೇಷನ್‌ ಟೆಕ್ನಾಲಜಿ ಎಂಪ್ಲಾಯೀಸ್‌ ಸೆನೆಟ್‌ (ಎನ್‌ಐಟಿಇಎಸ್) ಹೇಳಿದೆ. ಇನ್ಫೋಸಿಸ್ ವಿರುದ್ಧ ತಕ್ಷಣದ ಮಧ್ಯಸ್ಥಿಕೆ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸುತ್ತಿರುವುದಾಗಿ ಸಂಸ್ಥೆ ತಿಳಿಸಿದೆ.

“ಈ ಕಾರ್ಪೊರೇಟ್ ಶೋಷಣೆಯನ್ನು ಮುಂದುವರಿಯಲು ಬಿಡುವುದಿಲ್ಲ. ಭಾರತೀಯ ಐಟಿ ಕಾರ್ಮಿಕರ ಹಕ್ಕುಗಳು ಮತ್ತು ಘನತೆಯನ್ನು ಎತ್ತಿಹಿಡಿಯಲು ಸರ್ಕಾರವು ತ್ವರಿತ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ,” ಎಂದು ಎನ್‌ಐಟಿಇಎಸ್‌ನ ಹರ್ಪ್ರೀತ್ ಸಿಂಗ್ ಸಲುಜಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದು ಕೈಗಾರಿಕಾ ವ್ಯಜ್ಯ ಕಾಯ್ದೆ 1947ರ ಉಲ್ಲಂಘನೆಯಾಗಿದ್ದು, ಐಟಿ ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಎನ್‌ಐಟಿಇಎಸ್ ಸರ್ಕಾರದ ಮಧ್ಯಸ್ಥಿಕೆಯನ್ನು ಕೋರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...