ಕೌತುಕದ ಸುದ್ದಿ | ‘ಟ್ರಾನ್ಸ್‌ಫಾರ್ಮರ್‌’ಗೂ ಪೂಜೆ ಸಲ್ಲಿಸುತ್ತಿರುವ ಗ್ರಾಮಸ್ಥರು

Date:

ಹಳ್ಳಿಯೊಂದರ ಗ್ರಾಮಸ್ಥರು ವಿದ್ಯುತ್‌ ‘ಟ್ರಾನ್ಸ್‌ಫಾರ್ಮರ್‌’ಗೆ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ರೂಡಿಸಿಕೊಂಡಿದ್ದಾರೆ. ಗ್ರಾಮಸ್ಥರು ಟ್ರಾನ್ಸ್‌ಫಾರ್ಮರ್‌ಗೆ ಪೂಜೆ ಸಲ್ಲಿಸುವ ಆಸಕ್ತಿಕರ ಬೆಳವಣಿಗೆಯು ಮಧ್ಯಪ್ರದೇಶದ ಭಿಂಡ್‌ ಪ್ರದೇಶದ ಗಾಂಧಿ ನಗರದಲ್ಲಿ ರೂಡಿಯಲ್ಲಿದೆ.

ಸುಮಾರು 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಹಳೆಯ ಟ್ರಾನ್ಸ್‌ಫಾರ್ಮರ್‌ ಇತ್ತೀಚೆಗೆ ಸುಟ್ಟುಹೋಗಿತ್ತು. ಬಳಿಕ, ಹೊಸ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಅನ್ನು ಅಳವಡಿಸಲಾಗಿದೆ. ಬಳಿಕ, ಟ್ರಾನ್ಸ್‌ಫಾರ್ಮರ್‌ಅನ್ನು ಗ್ರಾಮಸ್ಥರು ದೇವರಂತೆ ಪೂಜಿಸಿದ್ದಾರೆ. ಅದನ್ನು ದೈವೀಕರಿಸಿದ್ದಾರೆ.

ಗಾಂಧಿ ನಗರಕ್ಕೆ 15 ವರ್ಷಗಳ ಹಿಂದೆ ವಿದ್ಯುತ್‌ ಸಂಪರ್ಕವೇ ಇರಲಿಲ್ಲ. ಬುಡ್ಡಿಯ ದೀಪದ ಬೆಳಕಲ್ಲಿ ಗ್ರಾಮಸ್ಥರು ಸಂಜೆ-ರಾತ್ರಿ ದೂಡುತ್ತಿದ್ದರು. ಆ ಗ್ರಾಮಕ್ಕೆ 15 ವರ್ಷಗಳ ಹಿಂದೆ ವಿದ್ಯುತ್‌ ಸಂಪರ್ಕ ದೊರೆಯಿತು. ಈ 15 ವರ್ಷಗಳ ಕಾಲ ಒಂದೇ ಟ್ರಾನ್ಸ್‌ಫಾರ್ಮರ್‌ ಕಾರ್ಯನಿವರ್ಹಿಸಿತ್ತು. ಗ್ರಾಮಕ್ಕೆ ಬೆಳಕು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

15 ವರ್ಷಗಳ ಕಾಲ ನಿರಂತರವಾಗಿ ಗ್ರಾಮಕ್ಕೆ ವಿದ್ಯುತ್‌ ಪೂರೈಸಲು ನೆರವಾದ ಟ್ರಾನ್ಸ್‌ಫಾರ್ಮರ್‌ ಮೇಲೆ ಗ್ರಾಮಸ್ಥರು ಅಪಾರ ಪ್ರೀತಿ ಹೊಂದಿದ್ದಾರೆ. ಟ್ರಾನ್ಸ್‌ಫಾರ್ಮರ್‌ ಸುಟ್ಟುಹೋದ ಬಳಿಕ, ಹೊಸ ಟ್ರಾನ್ಸ್‌ಫಾರ್ಮರ್‌ ಅಳವಡಿಸಲಾಗಿದೆ. ಹೊಸ ಟ್ರಾನ್ಸ್‌ಫಾರ್ಮರ್‌ಗೆ ಆರತಿ ಮಾಡಿ, ಪೂಜೆ ಸಲ್ಲಿಸಿ, ಸಿಹಿತಿಂಡಿ ಹಂಚಿದ್ದಾರೆ. ಅದು ಧೀರ್ಘಕಾಲದವರೆಗೆ ಕಾರ್ಯನಿರ್ವಹಿಸುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಹಳೆಯ ಟ್ರಾನ್ಸ್‌ಫಾರ್ಮರ್‌ ಸುಟ್ಟುಹೋಗಿ ಬಹಳ ದಿನಗಳ ಕಳೆದಿದ್ದವು. ವಿದ್ಯುತ್ ಕಂಪನಿಗೆ ಮಾಹಿತಿ ನೀಡಿದರೂ, ಅವರು ಹೊಸ ಟ್ರಾನ್ಸ್‌ಫಾರ್ಮರ್‌ ತರಲಿಲ್ಲ. ಗ್ರಾಮಸ್ಥರು ವಿದ್ಯುತ್‌ ಇಲ್ಲದೆ ಬೇಸಿಗೆಯ ದಿನಗಳಲ್ಲಿ ಕಷ್ಟಪಟ್ಟಿದ್ದಾರೆ. ಶಾಸಕರ ಗಮನಕ್ಕೆ ತಂದ ಬಳಿಕ, ಗ್ರಾಮಕ್ಕೆ ಹೊಸ ಟ್ರಾನ್ಸ್‌ಫಾರ್ಮರ್‌ ಬಂದಿದೆ ನಮಗೆ ವಿದ್ಯುತ್‌ ಕಂಪನಿಯ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ ಎಂದು ಗ್ರಾಮದ ಮುಖಂಡರರೊಬ್ಬರು ಹೇಳಿದ್ದಾರೆ.

ವಿದ್ಯುತ್ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಹೊಂದಿದ್ದಾರೆ. ಯಾವುದೇ ಟ್ರಾನ್ಸ್‌ಫಾರ್ಮರ್ ಕೆಟ್ಟುಹೋದರೆ, ಅದನ್ನು ಬದಲಾಯಿಸಲು 10 ರಿಂದ 15 ದಿನಗಳು ಬೇಕಾಗುತ್ತದೆ. ಅದಕ್ಕಾಗಿ ಕಚೇರಿಗಳಿಗೆ ಅಲೆದಾಡಬೇಕು. ಆದ್ದರಿಂದ, ಹೊಸ ಟ್ರಾನ್ಸ್‌ಫಾರ್ಮರ್ ಹಲವು ವರ್ಷಗಳ ಕಾಲ ಬಾಳಿಕೆ ಬರುವಂತೆ ಪೂಜೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...