ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

Date:

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡದೆ, ಅವರನ್ನು ಬಲಗೈ ಸಮುದಾಯಗಳೊಂದಿಗೆ ಸೇರಿಸಿ, ಮೀಸಲಾತಿ ನೀಡಲಾಗಿದೆ. ಇದರಿಂದಾಗಿ, ಅಲೆಮಾರಿ ಸಮುದಾಯಗಳು ಮತ್ತೆ ವಂಚಿತವಾಗುತ್ತವೆ ಎಂದು ಒಳಮೀಸಲಾತಿ ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ. ಅಲೆಮಾರಿ ಸುಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದ್ದಾರೆ. ತಮ್ಮ ಹಕ್ಕೋತ್ತಾಯವನ್ನು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ಗಮನಕ್ಕೆ ತರುವ ಉದ್ದೇಶದಿಂದ ‘ದೆಹಲಿ ಚಲೋ’ ಹೋರಾಟ ನಡೆಸುತ್ತಿದ್ದು, ಪ್ರತಿಭಟನಾಕಾರರು ದೆಹಲಿಯ ಜಂತರ್‌ ಮಂತರ್‌ನಲ್ಲಿ ಅಕ್ಟೋಬರ್ 2ರಿಂದ ಪ್ರತಿಭಟನೆ ಆರಂಭಿಸಿದ್ದಾರೆ.

ಅಲೆಮಾರಿ ಸಮುದಾಯಗಳ ನೂರಾರು ಜನರು ಹಾಗೂ ಒಳಮೀಸಲಾತಿ ಹೋರಾಟಗಾರರು ಕರ್ನಾಟಕದಿಂದ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ನ ಉನ್ನತ ನಾಯಕರನ್ನು ಭೇಟಿ ಮಾಡಿ, ತಮ್ಮ ಹಕ್ಕೊತ್ತಾಯವನ್ನು ಅವರ ಗಮನಕ್ಕೆ ತರಲು ಮುಂದಾಗಿದ್ದಾರೆ. ‘ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿ ನೀಡುವಂತೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರಕ್ಕೆ ನಿರ್ದೇಶನ ನೀಡುಬೇಕು’ ಎಂದು ಒತ್ತಾಯಿಸಲಿದ್ದಾರೆ.

“ಒಳಮೀಸಲಾತಿ ಜಾರಿಗಾಗಿ ಕರ್ನಾಟಕ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾಯಮೂರ್ತಿ ಡಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ಆರೋಗವು, ವರ್ಗ 1: ಅತ್ಯಂತ ಹಿಂದುಳಿದ ಅಲೆಮಾರಿ ಜಾತಿಗಳು – 1% ಮೀಸಲಾತಿ, ವರ್ಗ 2: ಹೆಚ್ಚು ಹಿಂದುಳಿದ ಮಾದಿಗರು ಮತ್ತು ಸಂಬಂಧಿತ ಜಾತಿಗಳು – 6% ಮೀಸಲಾತಿ, ವರ್ಗ 3: ಹಿಂದುಳಿದ ಹೊಲಯರು ಮತ್ತು ಸಂಬಂಧಿತ ಜಾತಿಗಳು – 5% ಮೀಸಲಾತಿ, ವರ್ಗ 4: ಕಡಿಮೆ ಹಿಂದುಳಿದ ಲಂಬಾಣಿ, ಭೋವಿ, ಕೊರಚ ಹಾಗೂ ಸಂಬಂಧಿತ ಜಾತಿಗಳು – 4% ಮೀಸಲಾತಿ, ವರ್ಗ 5: ತಮ್ಮನ್ನು AK, AD ಹಾಗೂ AA ಎಂದು ಗುರುತಿಸಿಕೊಳ್ಳುವ ಇತರ ಜಾತಿಗಳು – 1% ಮೀಸಲಾತಿ ಹಂಚಿಕೆ ಮಾಡಬೇಕೆಂದು ಶಿಫಾರಸು ಮಾಡಿತ್ತು. ಆದರೆ, ಸರ್ಕಾರವು ಕೆಲವು ಸಂಪುಟ ಸಚಿವರ ಒತ್ತಡಕ್ಕೆ ಮಣಿದು, ಪ್ರಬಲ ರಾಜಕೀಯ ಲಾಬಿಗಳ ಬೇಡಿಕೆಗಳನ್ನು ಪೂರೈಸುವ ಆತುರದಲ್ಲಿ, ದಲಿತ ಅಲೆಮಾರಿ ಸಮುದಾಯವನ್ನು ಬಲಿಯ ಕುರಿಯನ್ನಾಗಿ ಮಾಡಲಾಗಿದೆ. ಹೆಚ್ಚು ಹಿಂದುಳಿದ ಅಲೆಮಾರಿ ಸಮುದಾಯಗಳನ್ನು ಕಡಿಮೆ ಹಿಂದುಳಿದ ಸಮುದಾಯಗಳೊಂದಿಗೆ ವಿಲೀನಗೊಳಿಸಲಾಗಿದೆ. ಇದು ರಾಜಕೀಯ ಅಪರಾಧ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಜಾತಿ ಸಮೀಕ್ಷೆಗೆ ವಿರೋಧ: OBCಗಳನ್ನು ವಂಚಿಸುವ ತಂತ್ರ

“ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ, ಅಲೆಮಾರಿ ಸಮುದಾಯಗಳಿಗೆ ಘನತೆಯ ಜೀವನ ನಡೆಸಲು ಒಂದು ನೆಲೆಯೂ ಸಿಕ್ಕಿಲ್ಲ. ಇಂದಿಗೂ, ನಮ್ಮ ಹೆಚ್ಚಿನ ಜನರು ಬೀದಿ ನಾಯಿಗಳ ಪಕ್ಕದಲ್ಲಿ ರಸ್ತೆಬದಿಯ ತಾತ್ಕಾಲಿಕ ಡೇರೆಗಳಲ್ಲಿ ವಾಸಿಸುತ್ತಿದ್ದಾರೆ. ಸಮಾಜ ನಮ್ಮನ್ನು ಸ್ವೀಕರಿಸಿಲ್ಲ; ನಮ್ಮನ್ನು ಬೀದಿ ದನಗಳಂತೆ ಸ್ಥಳದಿಂದ ಸ್ಥಳಕ್ಕೆ ಓಡಿಸಲಾಗುತ್ತಿದೆ. ನಮ್ಮ ಸಮುದಾಯದಿಂದ ನಮಗೆ ಯಾವುದೇ ರಾಜಕಾರಣಿ ಇಲ್ಲ, ಉನ್ನತ ಅಧಿಕಾರಿ ಇಲ್ಲ, ಪದವೀಧರರು ಇಲ್ಲ. ಕರ್ನಾಟಕದ ಪ್ರತಿಯೊಬ್ಬ ಚಿಂತಕ ವ್ಯಕ್ತಿಗೂ ಅಲೆಮಾರಿಗಳು ಅತ್ಯಂತ ವಂಚಿತ ಮತ್ತು ಅಂಚಿನಲ್ಲಿರುವ ಸಮುದಾಯ ಎಂಬುದು ತಿಳಿದಿದೆ. ಆದ್ದರಿಂದ, ರಾಜ್ಯಾದ್ಯಂತ ಜನರು ಸರ್ಕಾರದ ನಿರ್ಧಾರವನ್ನು ಖಂಡಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್‌ ಹೈಕಮಾಂಡ್‌ ಮಧ್ಯಪ್ರವೇಶಿಸಿದರೆ, ಅಲೆಮಾರಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬಹುದು. ಅವರ ಸಮಸ್ಯೆಯನ್ನು ಮಾನವೀಯ ಆಧಾರದ ಮೇಲೆ ಕಾಂಗ್ರೆಸ್‌ ಅರ್ಥಮಾಡಿಕೊಳ್ಳುತ್ತದೆ ಮತ್ತು ಪರಿಹರಿಸುತ್ತದೆ ಎಂಬ ವಿಶ್ವಾಸದಿಂದ ದೆಹಲಿಗೆ ಬಂದಿದ್ದೇವೆ. ನೀವು ನಮ್ಮನ್ನು ಭೇಟಿ ಮಾಡುವವರೆಗೂ ಕಾಯಲು ನಾವು ಸಿದ್ಧರಿದ್ದೇವೆ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...