ಒಳಮೀಸಲಾತಿ | ದೆಹಲಿಯಲ್ಲಿ ಮುಂದುವರೆದಿದೆ ಕರ್ನಾಟಕ ಅಲೆಮಾರಿ ಸಮುದಾಯಗಳ ಪ್ರತಿಭಟನೆ

Date:

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡಬೇಕೆಂದು ಡಾ. ನಾಗಮೋಹನ್ ದಾಸ್ ಅವರು ಶಿಫಾರಸು ಮಾಡಿದ್ದರು. ಆದರೂ, ಶಿಫಾರಸುಗಳಿಗೆ ವ್ಯತಿರಿಕ್ತವಾಗಿ ಕರ್ನಾಟಕ ಸರ್ಕಾರ ನಡೆದುಕೊಂಡಿದ್ದು, ಅಲೆಮಾರಿ ಸಮುದಾಯಗಳನ್ನು ಬಲಗೈ ಸಮುದಾಯಗಳ ಜೊತೆ ಸೇರಿಸಿ ಅನ್ಯಾಯ ಮಾಡಿದೆ. ನ್ಯಾಯಕ್ಕಾಗಿ ದೆಹಲಿವರೆಗೆ ತೆರಳಿರುವ ಅಲೆಮಾರಿ ಸಮುದಾಯಗಳ ಜನರು ಮತ್ತು ಹೋರಾಟಗಾರರು ಹೋರಾಟ ಮುಂದುವರೆಸಿದ್ದಾರೆ.

ಕರ್ನಾಟಕದಲ್ಲಿನ ಕಾಂಗ್ರೆಸ್‌ ಸರ್ಕಾರ ಎಸಗಿರುವ ಅನ್ಯಾಯವನ್ನು ಕಾಂಗ್ರೆಸ್‌ ಹೈಕಮಾಂಡ್‌ ಗಮನಕ್ಕೆ ತರಲು ಮತ್ತು ಸಮಸ್ಯೆಯನ್ನು ಪರಿಹರಿಸುವಂತೆ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಸೂಚಿಸುವಂತೆ ಒತ್ತಾಯಿಸಲು ನೂರಾರು ಜನರು ಕರ್ನಾಟಕದಿಂದ ದೆಹಲಿಗೆ ತೆರಳಿದ್ದಾರೆ. ಕಳೆದ 11 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಅಳಲನ್ನು ಆಧ್ಯತೆಯಾಗಿ ಪರಿಗಣಿಸುವಂತೆ ಗಮನ ಸೆಳೆಯಲು ದೆಹಲಿಯಲ್ಲಿರುವ ಕಾಂಗ್ರೆಸ್‌ ಪ್ರಧಾನ ಕಚೇರಿಯ ಆವರಣದಲ್ಲೇ ಧರಣಿ ಕೂರಲು ಮುಂದಾಗಿದ್ದರು. ಆದರೆ, ಕಾಂಗ್ರೆಸ್‌ ನಾಯಕರು ನೀಡಿದ ಭರವಸೆಗೆ ಒಪ್ಪಿ, ಪ್ರತಿಭಟನೆಯನ್ನು ದೆಹಲಿಯ ಅಂಬೇಡ್ಕರ್ ಭವನದ ಬಳಿ ಮುಂದುವರೆಸಿದ್ದಾರೆ.

ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಮುಖಂಡರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, “ಕಳೆದ 10 ದಿನಗಳಲ್ಲಿ AICC ಮುಖಂಡರ ಜೊತೆ ಚರ್ಚೆಗಳು ನಡೆದಿವೆ. ಎಲ್ಲರೂ ಅನ್ಯಾಯವಾಗಿರುವುದು ನಿಜವೆಂದು ಒಪ್ಪಿಕೊಂಡಿದ್ದಾರೆ. ಆದರೆ, ಪರಿಹಾರ ಮಾರ್ಗ ಮಾತ್ರ ರಾಹುಲ್ ಗಾಂಧಿ ಅವರು ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಮರುಳಿದ ನಂತರವೇ ಸಾಧ್ಯವೆಂದು ಹೇಳಿದ್ದಾರೆ. ಪರಿಣಾಮವಾಗಿ, ಕಳೆದ 10 ದಿನದಿಂದ ಇಡೀ ನಿಯೋಗ ದೆಹಲಿಯಲ್ಲೇ ಕಾಯುತ್ತಿದೆ. ರಾಹುಲ್ ಗಾಂಧಿ ಅವರು ಮರುಳಿದ ಕೂಡಲೇ ಭೇಟಿಗೆ ವ್ಯವಸ್ಥೆ ಮಾಡಬೇಕು, ಮತ್ತೂ ತಡಮಾಡಬಾರದು ಎಂಬ ಕಾರಣಕ್ಕಾಗಿ ಧರಣಿ ನಡೆಸಲು ಅಲೆಮಾರಿ ಹೋರಾಟದ ಪ್ರತಿನಿಧಿಗಳು ಶನಿವಾರ AICC ಆಫೀಸಿಗೆ ಹೋಗಿದ್ದರು. ಅಷ್ಟರಲ್ಲಿ ಕರೆ ಮಾಡಿದ AICC ಪ್ರತಿನಿಧಿಗಳು ರಾಹುಲ್ ಗಾಂಧಿ ಅವರು ಬಂದೊಡನೆ ಇದನ್ನೂ ಪ್ರಮುಖ ಆಧ್ಯತೆಗಳ ವಿಚಾರಗಳಲ್ಲಿ ಒಂದಾಗಿ ಭೇಟಿಗೆ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದರಿಂದ ಧರಣಿಯ ಯೋಜನೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಅಂಬೇಡ್ಕರ್ ಭವನದಲ್ಲಿ ಧರಣಿ ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಅಲೆಮಾರಿಗಳ ಆರ್ತನಾದಕ್ಕೆ ಹೃದಯ ತೆರೆಯಲಿ ದೆಹಲಿ

ಒಳಮೀಸಲಾತಿ ವರ್ಗೀಕರಣದ ವೇಳೆ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡಬೇಕಿತ್ತು. 49 ಅಲೆಮಾರಿ ಸಮುದಾಯಗಳನ್ನು ಅತ್ಯಂತ ಹಿಂದುಳಿದ, ಅಸ್ಪೃಷ್ಯ, ಕೆಟಗರಿ Aನಲ್ಲಿ ಸೇರಿಸಬೇಕಿತ್ತು. ಆದರೆ, ಕರ್ನಾಟಕ ಸರ್ಕಾರವು, ಈ ಸಮುದಾಯಗಳನ್ನು ಸಾಪೇಕ್ಷವಾಗಿ ಮುಂದುವರೆದ, ಸ್ಪ್ರಷ್ಯ ಸಮುದಾಯಗಳೊಂದಿಗೆ ಕೆಟಗರಿ Dನಲ್ಲಿ ಸೇರಿಸಿದೆ. ಇದರಿಂದಾಗಿ, ಅಲೆಮಾರಿಗಳಿಗೆ ಒಳ ಮೀಸಲಾತಿಯಲ್ಲಿಯೂ ಅವಕಾಶಗಳು ದೊರೆಯದಂತಾಗಿದೆ. ಅಕ್ಷಶಃ ಮೀಸಲಾತಿಯನ್ನು ನಿರಾಕಸಿದಂತಾಗಿದೆ ಎಂದು ಸಮುದಾಯದ ಜನರು ಮತ್ತು ಹೋರಾಟಗಾರರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...