ಐಪಿಎಲ್‌ 2024 | ‘200+ ಸಾಧ್ಯವಿತ್ತು’: ಆರ್‌ಸಿಬಿಯನ್ನು ಟ್ರೋಲ್‌ ಮಾಡಿತಾ ಆರ್‌ಆರ್‌?

Date:

ಐಪಿಎಲ್‌-2024ರ ಟೂರ್ನಿಯಲ್ಲಿ ಶನಿವಾರ ನಡೆದ ರಾಜಸ್ಥಾನ ರಾಯಲ್ಸ್‌ (ಆರ್‌ಆರ್‌) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 113 ರನ್ ಗಳಿಸಿದರು. ಆದರೂ, ಆರ್‌ಆರ್‌ ಎದುರು ಆರ್‌ಸಿಬಿ ಮಂಡಿಯೂರಿ ಸೋಲುಂಡಿತು. ಶನಿವಾರದ ಪಂದ್ಯದಲ್ಲಿ ಉಭಯ ತಂಡಗಳು ಒಂದೊಂದು ಶತಕಗಳನ್ನು ಗಳಿಸಿದವು. ಕೊಹ್ಲಿ 113ರನ್‌ ಗಳಿಸಿದರೆ,  ಆರ್‌ಆರ್‌ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ 100 ರನ್‌ಗಳನ್ನು ಗಳಿಸಿದರು. ಇದೆಲ್ಲದರ ನಡುವೆ, ಮೊದಲು ಇನ್ನಿಂಗ್ಸ್‌ ಶುರು ಮಾಡಿದ ಆರ್‌ಸಿಬಿ 200+ ರನ್‌ಗಳನ್ನು ಗಳಿಸಬಹುದೆಂದು ಭಾವಿಸಿದ್ದಾಗಿ ಆರ್‌ಆರ್‌ ಹೇಳಿದೆ. ಆದರೆ, ಆರ್‌ಸಿಬಿ ಕೇವಲ 183 ರನ್‌ಗಳನ್ನು ಮಾತ್ರವೇ ಕಲೆ ಹಾಕಿತು.

ಸಾಮಾಜಿಕ ಜಾಲತಾಣದಲ್ಲಿ ರನ್‌ಗಳ ಬಗ್ಗೆ ಪೋಸ್ಟ್‌ ಮಾಡಿರುವ ಆರ್‌ಆರ್‌, “200+ ರನ್‌ಗಳು ಸಾಧ್ಯವಿರುವ ದಿನದಲ್ಲಿ 184 ರನ್‌ಗಳು ಆರಾಮದಾಯ” ಎಂದಿದೆ. ಅದೂ, ಆರ್‌ಆರ್‌ ಬ್ಯಾಟಿಂಗ್‌ ಆರಂಭಿಸುವ ಮುನ್ನವೇ ಈ ಪೋಸ್ಟ್‌ ಹಾಕಲಾಗಿದೆ. ಆ ಮೂಲಕ ಆರ್‌ಸಿಬಿಯನ್ನು ಆರ್‌ಆರ್‌ ಟ್ರೋಲ್ ಮಾಡಲು ಯತ್ನಿಸಿದೆ ಎಂದು ಹಲವರು ಭಾವಿಸಿದ್ದಾರೆ.

 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂದ್ಯದ ನಂತರ ಮಾತನಾಡಿದ ಕೊಹ್ಲಿ, “ಪಿಚ್ ಸಮತಟ್ಟಾಗಿರುವ ಇರುವಂತೆ ಕಾಣುತ್ತದೆ. ಆದರೆ, ಅದು ಆ ರೀತಿಯಲ್ಲಿಲ್ಲ. ಆದ್ದರಿಂದ, ಬ್ಯಾಟಿಂಗ್‌ ವೇಗವನ್ನು ಹೆಚ್ಚಿಸಲು ಕಷ್ಟವಾಯಿತು” ಎಂದಿದ್ದಾರೆ.

“ಪಿಚ್‌ನಲ್ಲಿ ಚೆಂಡಿನ ವೇಗ ಬಹಳ ಬೇಗನೆ ಬದಲಾಗುತ್ತದೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಮ್ಮ ಗುರಿ ಆರಂಭದಲ್ಲಿ 190, 195 ಆಗಿತ್ತು. ಆದರೆ, ಪಿಚ್‌ನಲ್ಲಿ ಅದು ನಿಧಾನವಾಯಿತು. ಆದರೂ, 180-185 ರನ್‌ಗಳನ್ನು ನಾವು ಕಲೆಹಾಕಿದ್ದೇವೆ. ಇದು ಈ ಪಿಚ್‌ನಲ್ಲಿ ಅತ್ಯಂತ ಪರಿಣಾಮಕಾರಿ ಮೊತ್ತವೆಂದು ನಾನು ಭಾವಿಸುತ್ತೇನೆ” ಎಂದು ಕೊಹ್ಲಿ ಹೇಳಿದ್ದಾರೆ.

ಆರ್‌ಸಿಬಿ ವಿರುದ್ಧ ಗೆಲುವು ಸಾಧಿಸಿದ ಆರ್‌ಆರ್‌ ತಂಡವು ಐಪಿಎಲ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...