IPL 2026 | ಇಂದು ಮೆಗಾ ಹರಾಜು; ಮಾರ್ಚ್‌ 26ರಿಂದ ಮೇ 31ರವರೆಗೆ ಪಂದ್ಯಾವಳಿ!

Date:

ಇಂಡಿಯನ್ ಪ್ರೀಮಿಯರ್ ಲೀಗ್ (IPL)-2026ರ ಟೂರ್ನಿಯು ಮಾರ್ಚ್ 26 (ಗುರುವಾರ) ರಂದು ಪ್ರಾರಂಭವಾಗಲಿದ್ದು, ಮೇ 31 (ಭಾನುವಾರ) ರಂದು ಮುಕ್ತಾಯಗೊಳ್ಳಲಿದೆ ಎಂದು ಕ್ರಿಕ್‌ಬಝ್ ವರದಿ ಮಾಡಿದೆ. ಸೋಮವಾರ ಸಂಜೆ ಅಬುಧಾಬಿಯಲ್ಲಿ ನಡೆದ ಫ್ರಾಂಚೈಸಿ ಪ್ರತಿನಿಧಿಗಳು ಮತ್ತು ಐಪಿಎಲ್ ಅಧಿಕಾರಿಗಳ ನಡುವಿನ ಸಭೆಯಲ್ಲಿ ಟೂರ್ನಿಯ ದಿನಾಂಕವನ್ನು ಅಂತಿಮಗೊಳಿಸಲಾಗಿದೆ. ಅಂತೆಯೇ, ಇಂದು (ಡಿ.16) ಫ್ರಾಂಚೈಸಿಗಳು ತಮ್ಮ ತಂಡಗಳಿಗೆ ಆಟಗಾರರನ್ನು ಆಯ್ದುಕೊಳ್ಳಲು ಮೆಗಾ ಹರಾಜು ಕೂಡ ಅಬುಧಾಬಿಯಲ್ಲಿ ನಡೆಯಲಿದೆ.

ಮಂಗಳವಾರ ಹರಾಜು ಪ್ರಕ್ರಿಯೆ ಆರಂಭವಾಗುವುದಕ್ಕೂ ಮೊದಲು, ಐಪಿಎಲ್ ಸಿಇಒ ಹೇಮಾಂಗ್ ಅಮೀನ್ ಅವರು ಬ್ರೀಫಿಂಗ್‌ ನಡೆಸಿದ್ದಾರೆ. ಈ ವೇಳೆ ಐಪಿಎಲ್‌ ಟೂರ್ನಿಯ ದಿನಾಂಕಗಳನ್ನು ತಿಳಿಸಿದ್ದಾರೆ. ಆದಾಗ್ಯೂ, ಕಳೆದ ಬಾರಿ ಟ್ರೋಫಿಯನ್ನು ಗೆದ್ದಿದ್ದ ಆರ್‌ಸಿಬಿಯ ತವರು ಬೆಂಗಳೂರಿನಲ್ಲಿ ಆರಂಭಿಕ ಪಂದ್ಯ ನಡೆಯುವುದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಐಪಿಎಲ್-2025ರ ಟ್ರೋಫಿಯನ್ನು ಆರ್‌ಸಿಬಿ ಗೆದ್ದ ಬಳಿಕ, 2025ರ ಜೂನ್‌ 4ರಂದು ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಈ ವೇಳೆ, ಭೀಕರ ಕಾಲ್ತುಳಿತ ಸಂಭವಿಸಿ, ಕನಿಷ್ಠ 11 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಆ ದುರಂತ ಘಟನೆಯಿಂದಾಗಿ, ಅಂದಿನಿಂದ ಈವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ವೇಡಿಯಂನಲ್ಲಿ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಅನುಮತಿ ನಿರಾಕರಿಸುತ್ತಲೇ ಬಂದಿದೆ. ಆದ್ದರಿಂದ, ಮಹಿಳಾ ವಿಶ್ವಕಪ್ ಪಂದ್ಯಗಳನ್ನೂ ಕೂಡ ಬಿಸಿಸಿಐ ಬೆಂಗಳೂರಿನಿಂದ ಬೇರೆಡೆಗೆ ಸ್ಥಳಾಂತರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಇತ್ತೀಚೆಗೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರದಿಂದ ಷರತ್ತುಬದ್ಧ ಅನುಮತಿ ಪಡೆದಿದೆ. ಆದರೆ, ಸುರಕ್ಷತೆ ಮತ್ತು ಭದ್ರತೆ ವಿಚಾರದಲ್ಲಿ ಅತೀ ಹೆಚ್ಚು ಗಮನ ಕೊಡುವ ಅಗತ್ಯವಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ 2026ರ ಆರಂಭಿಕ ಪಂದ್ಯ ನಡೆಯುವ ಸಾಧ್ಯತೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಅಧಿಕಾರಿಯೊಬ್ಬರು, “ನಾವು ಚರ್ಚೆ ನಡೆಸುತ್ತಿದ್ದೇವೆ. ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾರ್ವಜನಿಕವಾಗಿ ಆಶಾವಾದ ವ್ಯಕ್ತಪಡಿಸಿದ್ದಾರೆ. ಸರ್ಕಾರ ಐಪಿಎಲ್ ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಸಕಾರಾತ್ಮಕವಾಗಿದೆ. ಆತಂಕಗಳನ್ನು ಪರಿಹರಿಸಲು ಕೆಎಸ್‌ಸಿಎ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವಂತೆ ಶಿವಕುಮಾರ್ ಇತ್ತೀಚೆಗೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಆರೆಸ್ಸೆಸ್- ಬಿಜೆಪಿಯ ಮುಸ್ಲಿಮ್ ದ್ವೇಷದ ರೂಪಕ ‘ಬುಲ್ಡೋಜರ್ ಅನ್ಯಾಯ’ ಕರ್ನಾಟಕಕ್ಕೆ ಕಾಲಿಡುವುದೇ?

ಇನ್ನು, ಮಂಗಳವಾರ (ಡಿ.6) ಅಬುಧಾಬಿಯ ಎತಿಹಾದ್ ಅರೆನಾದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಹರಾಜಿನ ಮುನ್ನಾದಿನದಂದು ಹರಾಜು ಪಟ್ಟಿಗೆ ಬಂಗಾಳದ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್, ನ್ಯೂಜಿಲೆಂಡ್ ವೇಗಿ ಬೆನ್ ಸಿಯರ್ಸ್ ಮತ್ತು ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಎಥಾನ್ ಬಾಷ್ ಸೇರಿದಂತೆ 19 ಹೆಸರುಗಳನ್ನು ಸೇರಿಸುವ ಮೂಲಕ ಬಿಸಿಸಿಐ ಆಟಗಾರರ ಪೂರ್ಣಪಟ್ಟಿಯನ್ನು ಅಂತಿಮಗೊಳಿಸಿದೆ.

2026ರ ಐಪಿಎಲ್‌ಗೆ ಎಲ್ಲ ತಂಡಗಳು ಸೇರಿ 77 ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಇದರಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 13 ಸ್ಥಾನಗಳನ್ನು ಖಾಲಿ ಹೊಂದಿದ್ದು, ಅತಿ ಹೆಚ್ಚು ಆಟಗಾರರನ್ನು ಖರೀದಿಸಬೇಕಿರುವ ತಂಡವಾಗಿದೆ. ಸನ್‌ರೈಸರ್ಸ್ ಹೈದರಾಬಾದ್ 10 ಆಟಗಾರರನ್ನು ಖರೀದಿಸಲಿದೆ. ಆಟಗಾರರ ಆರಂಭಿಕ ಪಟ್ಟಿಯಲ್ಲಿ 1,355 ಹೆಸರುಗಳಲ್ಲಿದ್ದವು. ಅವುಗಳಲ್ಲಿ 359 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಇದರಲ್ಲಿ, 244 ಭಾರತೀಯರು ಮತ್ತು 115 ವಿದೇಶಿ ಆಟಗಾರರಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...