RAW ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ಪರಾಗ್ ಜೈನ್ ನೇಮಕ

Date:

ಆಪರೇಷನ್ ಸಿಂಧೂರ್ ಸಮಯದಲ್ಲಿ ಗುಪ್ತಚರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ದೇಶದ ಬಾಹ್ಯ ಗುಪ್ತಚರ ಸಂಸ್ಥೆ ‘ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್’ಗೆ (RAW) ಹೊಸ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲಗಾಂನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪ್ರತಿದಾಳಿ ನಡೆಸಿತ್ತು. ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಉಲ್ಬಣಗಳು ಸುಮಾರು 20 ದಿನಗಳ ಕಾಲ ದಾಳಿ-ಪ್ರತಿದಾಳಿಗಳು ನಡೆಸಿದ್ದವು. ಅಂತಿಮವಾಗಿ, ಮೇ 10ರಂದು ಕದನ ವಿರಾಮ ಘೋಷಿಸಲಾಗಿದೆ. (ಕದನ ವಿರಾಮ ಘೋಷಣೆಯ ಕೀರ್ತಿಯನ್ನು ಟ್ರಂಪ್‌ ಪಡೆಯುತ್ತಿದ್ದಾರೆ.)

ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಜೈನ್ ಪ್ರಮುಖ ಪಾತ್ರ ವಹಿಸಿದ್ದರು. ಜೈನ್ ಅವರು ಪ್ರಸ್ತುತ RAWನಲ್ಲಿ ವಾಯುಯಾನ ಸಂಶೋಧನಾ ಕೇಂದ್ರ (ಎಆರ್‌ಸಿ) ಮುಖ್ಯಸ್ಥರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ, RAW ಮುಖ್ಯಸ್ಥರಾಗಿರುವ ರವಿ ಸಿನ್ಹಾ ಅವರು ಜೂನ್ 30ರಂದು ನಿವೃತ್ತರಾಗಲಿದ್ದಾರೆ. RAWನಲ್ಲಿ ರವಿ ನಂತರದ ಅತ್ಯಂತ ಹಿರಿಯ ಅಧಿಕಾರಿ ಜೈನ್‌ ಅವರೇ ಆಗಿದ್ದಾರೆ. ಹೀಗಾಗಿ, ಅವರನ್ನು RAW ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ರೈತರೊಂದಿಗೆ ಸಿಎಂ ಸಭೆ ಜು. 4ಕ್ಕೆ ಏಕೆ, ಭೂದಾಹಿಗಳ ಮಸಲತ್ತೇನು?

ಪಂಜಾಬ್ ಕೇಡರ್‌ನ 1989ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿರುವ ಜೈನ್‌ ಅವರು, RAWನಲ್ಲಿ ಸುಮಾರು 20 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಜೈನ್ ಅವರು ಪಂಜಾಬ್‌ನಲ್ಲಿ ಸೇವೆ ಸಲ್ಲಿಸಿದ್ದ ಸಮಯದಲ್ಲಿ, ಭಯೋತ್ಪಾದನೆ ವಿರುದ್ಧ ಗಮನಾರ್ಹ ಕಾರ್ಯಾಚರಣೆಗಳನ್ನು ನಡೆಸಿದ್ದರು. ಅಲ್ಲಿ ಅವರು ವಿವಿಧ ಜಿಲ್ಲೆಗಳಲ್ಲಿ ಎಸ್‌ಎಸ್‌ಪಿ ಮತ್ತು ಪೊಲೀಸ್ ಉಪ ಇನ್ಸ್‌ಪೆಕ್ಟರ್ ಜನರಲ್‌ ಆಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಶ್ರೀಲಂಕಾ ಮತ್ತು ಕೆನಡಾದಲ್ಲಿ ಭಾರತೀಯ ರಾಯಭಾರ ಕಚೇರಿಗಳಲ್ಲಿಯೂ ಜೈನ್ ಸೇವೆ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...