ಲಿಂಗ ಪರಿವರ್ತನೆ ಮಾಡಿಸಿಕೊಂಡ ಐಆರ್‌ಎಸ್‌ ಅಧಿಕಾರಿ

Date:

ಎಲ್ಲ ಅಧಿಕೃತ ದಾಖಲೆಗಳಲ್ಲಿ ತನ್ನ ಹೆಸರು ಮತ್ತು ಲಿಂಗವನ್ನು ಬದಲಾಯಿಸಲು ಹಿರಿಯ ಭಾರತೀಯ ಕಂದಾಯ ಸೇವೆ (IRS) ಅಧಿಕಾರಿ ಸಲ್ಲಿಸಿದ್ದ ಮನವಿಯನ್ನು ಹಣಕಾಸು ಸಚಿವಾಲಯವು ಅನುಮತಿಸಿದೆ. ಇಂತಹದೊಂದು ಬೆಳವಣಿಗೆ ಭಾರತೀಯ ನಾಗರಿಕ ಸೇವೆಗಳಲ್ಲಿ ಮೊದಲ ಬಾರಿಗೆ ಸಂಭವಿಸಿದ್ದು, ಇದೊಂದು ಐತಿಹಾಸಿಕ ನಿರ್ಧಾರ ಎಂದು ಹೇಳಲಾಗಿದೆ.

ಹೈದರಾಬಾದ್‌ನ ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ (CESTAT) ಪ್ರಾದೇಶಿಕ ಪೀಠದ ಜಂಟಿ ಆಯುಕ್ತರಾಗಿರುವ ಮಹಿಳಾ ಐಆರ್‌ಎಸ್‌ ಅಧಿಕಾರಿ ಎಂ ಅನುಸೂಯಾ ಅವರು ಲಿಂಗ ಪರಿವರ್ತನೆ ಮಾಡಿಸಿಕೊಂಡು ತಮ್ಮ ಹೆಸರನ್ನು ಎಂ ಅನುಕಾಂತಿರ್ ಸೂರ್ಯ ಎಂದು ಬದಲಿಸಿಕೊಂಡಿದ್ದಾರೆ.

ಸರ್ಕಾರವು ಅವರ ದಾಖಲೆಗಳಲ್ಲಿ ಅವರ ಹೆಸರು ಮತ್ತು ಲಿಂಗವನ್ನು ತಿದ್ದುಪಡಿ ಮಾಡಿಕೊಂಡಿದೆ. ಇದೀಗ, ಅವರು ಪುರಷ ನಾಗರಿಕ ಸೇವಾ ಅಧಿಕಾರಿಯಾಗಿದ್ದಾರೆ. ಭಾರತದ ನಾಗರಿಕ ಸೇವೆಗಳ ಇತಿಹಾಸದಲ್ಲಿ ಲಿಂಗ ಪರಿವರ್ತನೆ ಮಾಡಿಸಿಕೊಂಡ ಮೊದಲ ಅಧಿಕಾರಿ ಎನಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2013ನೇ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ಎಂ ಅನುಸೂಯ ಅವರು ಪ್ರಸ್ತುತ ಹೈದರಾಬಾದ್‌ನ ಸಿಇಎಸ್‌ಟಿಎಟಿಯಲ್ಲಿ ಜಂಟಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಪುರುಷನಾಗಿ ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದು, ಅವರ ಹೆಸರನ್ನು ಎಂ ಅನುಕಾಂತಿರ್ ಸೂರ್ಯ ಎಂದು ಬದಲಿಸಿಕೊಂಡಿದ್ದಾರೆ” ಎಂದು ಕೇಂದ್ರ ಹಣಕಾಸು ಸಚಿವಾಲಯವು ತನ್ನ ಆದೇಶದಲ್ಲಿ ಹೇಳಿದೆ.

 

“ಅನುಸೂಯ ಅವರ ಮನವಿಯನ್ನು ಪುರಸ್ಕರಿಸಲಾಗಿದೆ. ಇನ್ನು ಮುಂದೆ ಎಲ್ಲ ದಾಖಲೆಗಳಲ್ಲಿ ಅವರ ಹೆಸರನ್ನು ಎಂ ಅನುಕಾಂತಿರ್ ಸೂರ್ಯ ಎಂದು ಬದಲಿಸಲಾಗುತ್ತಿದೆ” ಎಂದು ಸಿಇಎಸ್‌ಟಿಎಟಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...