ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ: ರಾಮ್‌ದೇವ್‌ಗೆ ಸುಪ್ರೀಂ ತರಾಟೆ

Date:

ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರಂತರವಾಗಿ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟಿಸಿರುವ ರಾಮ್‌ದೇವ್ ಅವರನ್ನು ಈಗ ಸುಪ್ರೀಂ ಪ್ರಶ್ನಿಸಿದೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ನಡೆಸಿದೆ. ಈ ವಿಚಾರಣೆಯ ಸಂದರ್ಭದಲ್ಲಿ ಪತಂಜಲಿ ಆಯುರ್ವೇದ್, “67 ಪತ್ರಿಕೆಗಳಲ್ಲಿ ಕ್ಷಮೆಯಾಚನೆಯನ್ನು ಪ್ರಕಟಿಸಲಾಗಿದೆ. ನ್ಯಾಯಾಲಯದ ಬಗ್ಗೆ ನನಗೆ ಗೌರವವಿದೆ. ತಪ್ಪುಗಳು ಪುನರಾವರ್ತನೆ ಆಗಲ್ಲ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ನೀವು ಅಷ್ಟೊಂದು ಮುಗ್ಧರೇನಲ್ಲ; ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ತಪರಾಕಿ

ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌, “ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ” ಎಂದು ಪ್ರಶ್ನಿಸಿದೆ.

“ನೀವು ದಿನಪತ್ರಿಕೆಯಲ್ಲಿ ನೀಡಿದ ಕ್ಷಮಾಪಣೆಯನ್ನು ಕತ್ತರಿಸಿ ನೀವೇ ಇಟ್ಟುಕೊಳ್ಳಿ. ಅದನ್ನು ದೊಡ್ಡದಾಗಿಸಿ ಫೋಟೊಕಾಪಿ ಮಾಡಿಕೊಳ್ಳಿ. ಅದು ನಮ್ಮನ್ನು ಮೆಚ್ಚಿಸಲಾರದು. ನಾನು ಜಾಹೀರಾತಿನ ನಿಜವಾದ ಗಾತ್ರವನ್ನು ನೋಡಲು ಬಯಸುತ್ತೇನೆ” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಹೇಳಿದ್ದಾರೆ.


ಇದನ್ನು ಓದಿದ್ದೀರಾ?  ಪತಂಜಲಿ ಜಾಹೀರಾತು ವಿವಾದ | ರಾಮ್‌ದೇವ್ ವಿರುದ್ಧ ಸುಪ್ರೀಂ ವಾಗ್ದಾಳಿ, ಕ್ಷಮಾಪಣೆ ತಿರಸ್ಕರಿಸಿದ ಕೋರ್ಟ್

“ನಮ್ಮ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಹೇಳಿಕೆ ನೀಡಿದ ನಂತರವೂ ಜಾಹೀರಾತುಗಳನ್ನು ಪ್ರಕಟಿಸಿ ಮತ್ತು ಪತ್ರಿಕಾಗೋಷ್ಠಿ ನಡೆಸಿದ ತಪ್ಪಿಗೆ ಪತಂಜಲಿ ಕ್ಷಮೆಯಾಚಿಸಿದೆ. ಜಾಹೀರಾತಿಗೆ 10 ಲಕ್ಷ ರೂಪಾಯಿ ವೆಚ್ಚವಾಗಿದೆ” ಎಂದು ಪತಂಜಲಿ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿಕೊಂಡಿದೆ.

ಬಾಬಾ ರಾಮದೇವ್ ಮತ್ತು ಅವರ ಪಾಲುದಾರ ಆಚಾರ್ಯ ಬಾಲಕೃಷ್ಣ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿದ್ದರು. ಈ ಪ್ರಕರಣದ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...