ಜನಸಂಘವು ಕರ್ಪೂರಿ ಠಾಕೂರ್‌ ಸರ್ಕಾರ ಉರುಳಿಸಿ ಅವರಿಗೆ ಅವಮಾನ ಮಾಡಿರಲಿಲ್ಲವೇ; ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Date:

ಸಮಾಜವಾದಿ ನಾಯಕ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಹಳೆಯ ವಿಷಯಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಪ್ರಶ್ನೆಗಳನ್ನು ಕೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ರಾಷ್ಟ್ರೀಯ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, “1979ರ ಏಪ್ರಿಲ್‌ನಲ್ಲಿ ಜನಸಂಘವು ಕರ್ಪೂರಿ ಠಾಕೂರ್ ಅವರ ಬಿಹಾರ ಸರ್ಕಾರವನ್ನು ಉರುಳಿಸಿರುವುದು ಸತ್ಯ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

“ಆಗ ಕರ್ಪೂರಿ ಠಾಕೂರ್ ಅವರನ್ನು ಆರ್‌ಎಸ್‌ಎಸ್‌ ಮತ್ತು ಜನಸಂಘದ ನಾಯಕರು ಅತ್ಯಂತ ಕೆಟ್ಟದಾಗಿ ನಿಂದಿಸಿದ್ದರು ಎಂಬುದು ಸತ್ಯವಲ್ಲವೇ? ಎಂದು ಜೈರಾಮ್ ರಮೇಶ್ ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನದಡಿಯಲ್ಲಿ ಬಿಹಾರದ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಒಬಿಸಿಗಳು ಮತ್ತು ಇಬಿಸಿಗಳಿಗೆ ಶೇಕಡ 65ರಷ್ಟು ಮೀಸಲಾತಿ ಒದಗಿಸುವ ಕಾನೂನಿಗೆ ರಕ್ಷಣೆ ನೀಡಲು ಪ್ರಧಾನಿ ಮತ್ತು ರಾಜ್ಯದಲ್ಲಿನ ಅವರ ‘ಟ್ರಬಲ್ ಇಂಜಿನ್ ಸರ್ಕಾರ’ ಏನೂ ಮಾಡಿಲ್ಲ ಎಂಬುದು ಸತ್ಯವಲ್ಲವೇ? ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪಥಸಂಚಲನ ಪಾಲಿಟಿಕ್ಸ್‌ | ಕಲಬುರಗಿಯಲ್ಲಿ ನಡೆಯುವುದೇ RSS-DSS ನೇರ ಹಣಾಹಣಿ?

“ಏಪ್ರಿಲ್ 28, 2024ರಂದು ಪ್ರಧಾನ ಮಂತ್ರಿಯವರು ಜಾತಿ ಗಣತಿಗಾಗಿ ಒತ್ತಾಯಿಸಿದವರನ್ನು ‘ನಗರ ನಕ್ಸಲರು’ ಎಂದಿರುವುದು ಸತ್ಯವಲ್ಲವೇ?, ಸಂಸತ್ತಿನಲ್ಲಿ (ಜುಲೈ 20, 2021) ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ (ಸೆಪ್ಟೆಂಬರ್ 21, 2021) ಅವರ ಸರ್ಕಾರವು ಜಾತಿ ಗಣತಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿತಲ್ಲವೇ? ಎಂದಿದ್ದಾರೆ.

“ಭಾರತದ ಸಂವಿಧಾನದಡಿಯಲ್ಲಿ ಬಿಹಾರದ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಒಬಿಸಿಗಳು ಮತ್ತು ಇಬಿಸಿಗಳಿಗೆ ಶೇಕಡ 65ರಷ್ಟು ಮೀಸಲಾತಿ ಕಾನೂನಿಗೆ ರಕ್ಷಣೆ ನೀಡಲು ಪ್ರಧಾನಿ ಮೋದಿ ಮತ್ತು ಬಿಹಾರದ ಅವರ ‘ಟ್ರಬಲ್ ಇಂಜಿನ್ ಸರ್ಕಾರ’ ಏನೂ ಮಾಡಿಲ್ಲ ಎಂಬುದು ಸತ್ಯವಲ್ಲವೇ. ಕಾಂಗ್ರೆಸ್ ಸರ್ಕಾರ ಸೆಪ್ಟೆಂಬರ್ 1994ರಲ್ಲೇ ತಮಿಳುನಾಡಿನಲ್ಲಿ ಇದೇ ರೀತಿಯ ಕಾನೂನಿಗೆ ರಕ್ಷಣೆ ಒದಗಿಸಿದೆ” ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...