ಮರಗಳನ್ನು ಕಡಿಯುವುದರ ವಿರುದ್ಧ ಫತ್ವಾ ಹೊರಡಿಸಿದ ಇಸ್ಲಾಮಿಕ್ ಸೆಮಿನರಿ

Date:

ಮರಗಳನ್ನು ಕಡಿಯುವುದರ ಮತ್ತು ಬೆಳೆಗಳನ್ನು ಸುಡುವುದರ ವಿರುದ್ಧ ಇಸ್ಲಾಮಿಕ್ ಸೆಮಿನರಿಯೊಂದು ಫತ್ವಾ (ಇಸ್ಲಾಂನಲ್ಲಿ ಅರ್ಹ ಕಾನೂನು ವಿದ್ವಾಂಸರು ಅಥವಾ ಮುಫ್ತಿ ನೀಡಿದ ಇಸ್ಲಾಮಿಕ್ ಕಾನೂನಿನ ಒಂದು ಅಂಶದ ಮೇಲೆ ಔಪಚಾರಿಕ ತೀರ್ಪು) ಹೊರಡಿಸಿದೆ.

ಲಕ್ನೋದ ಇಸ್ಲಾಮಿಕ್ ಸೆಮಿನರಿಯು ಜಾಗತಿಕ ತಾಪಮಾನ ಏರಿಕೆಯನ್ನು ತಡೆಯುವ ಭಾಗವಾಗಿ ಮರಗಳನ್ನು ಕಡಿಯಬೇಡಿ ಮತ್ತು ಬೆಳೆಗಳನ್ನು ಸುಡಬೇಡಿ ಎಂದು ಫತ್ವಾ ಹೊರಡಿಸಿದೆ.

ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾದ (ಐಸಿಐ) ಮೊಹಮ್ಮದ್ ತಾರಿಕ್ ಖಾನ್ ಎಂಬಾತ ತಾಪಮಾನದ ಕುರಿತು ಸ್ಪಷ್ಟೀಕರಣ ಕೇಳಿದ್ದು ಇದಕ್ಕೆ ಪ್ರತಿಕ್ರಿಯೆ ನೀಡಿದ ಇಸ್ಲಾಮಿಕ್ ಸೆಮಿನರಿ ಈ ಸಲಹೆಯಾಗಿ ಈ ಫತ್ವಾ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ಸೃಷ್ಟಿಗೆ ಫತ್ವಾ ಬಂದಿದೆ: ಬಿ ಕೆ ಹರಿಪ್ರಸಾದ್‌ ಆರೋಪ

“ಕುರಾನ್‌ನ ಪ್ರಕಾರ, ಹಸಿರನ್ನು ರಕ್ಷಿಸುವುದು, ನೀರನ್ನು ಉಳಿಸುವುದು ಮತ್ತು ವ್ಯರ್ಥ ಮಾಡುವುದನ್ನು ತಪ್ಪಿಸುವುದು ಮುಸ್ಲಿಮರ ಧಾರ್ಮಿಕ ಕರ್ತವ್ಯವಾಗಿದೆ. ಪ್ರತಿಯೊಬ್ಬ ಮುಸ್ಲಿಮರು ಹಸಿರು ಮರಗಳನ್ನು ಕಡಿಯಬಾರದು ಮತ್ತು ಬೆಳೆಗಳಿಗೆ ಬೆಂಕಿ ಹಾಕದಂತೆ ನೋಡಿಕೊಳ್ಳಬೇಕು” ಎಂದು ಐಸಿಐನ ಅಧ್ಯಕ್ಷ ಮೌಲಾನಾ ಖಾಲಿದ್ ರಶೀದ್ ಫರಂಗಿ ಮಹಾಲಿ ಹೇಳಿದರು.

ವೀಡಿಯೊ ಸಂದೇಶದಲ್ಲಿ, ಮೌಲಾನಾ ಖಾಲಿದ್ ರಶೀದ್ ಜನರು ಹೆಚ್ಚು ಸಸಿಗಳನ್ನು ನೆಡಬೇಕು ಮತ್ತು ಮರಗಳನ್ನು ಕಡಿಯುವುದನ್ನು ತಪ್ಪಿಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಖೆಡ್ಡಾಕ್ಕೆ ಬೀಳಬೇಡಿ, ನುಡಿ ನೋಡಬೇಡಿ – ನಡೆ ನೋಡಿ: ದೇವನೂರ ಮಹಾದೇವ

“ಸರ್ವಶಕ್ತನ ಪ್ರಕಾರ, ಮನುಷ್ಯರು ಮತ್ತು ಪ್ರಾಣಿಗಳು ಸೇರಿದಂತೆ ಎಲ್ಲಾ ಜೀವಿಗಳಿಗೆ ಅನುಕೂಲವಾಗುವ ಸಸಿಗಳನ್ನು ನೆಡುವವರಿಗೆ ಪ್ರತಿಫಲವಿದೆ. ಕೊಳಗಳು, ಕಾಲುವೆಗಳು, ನದಿಗಳು ಮತ್ತು ಸಮುದ್ರಗಳನ್ನು ಕಲುಷಿತಗೊಳಿಸದಂತೆ ಉಳಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿ” ಎಂದು ತಿಳಿಸಿದ್ದಾರೆ.

“ಇಸ್ಲಾಂನಲ್ಲಿ ಮರಗಳನ್ನು ಕಡಿಯುವುದು ಪಾಪವಾಗಿದೆ. ಯುದ್ಧದ ಸಂದರ್ಭದಲ್ಲಿಯೂ ಮರ, ಗಿಡಗಳನ್ನು ನಾಶ ಮಾಡುವಂತಿಲ್ಲ, ಸುಡುವಂತಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...