ಹಿಜ್ಬುಲ್ಲಾ ಜೊತೆ ಕದನ ವಿರಾಮ ಘೋಷಿಸಿದ ಇಸ್ರೇಲ್, 13 ತಿಂಗಳ ಯುದ್ಧಕ್ಕೆ ಬ್ರೇಕ್

Date:

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ನಡೆಯುತ್ತಿರುವ ಯುದ್ಧವು ಈಗ ಕೊನೆಗೊಳ್ಳುತ್ತದೆ. ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್ ಮಂಗಳವಾರ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಜೊತೆ ಕದನ ವಿರಾಮಕ್ಕೆ ತನ್ನ ಒಪ್ಪಂದವನ್ನು ಘೋಷಿಸಿದೆ. ನ.27ರಿಂದಲೇ ಕದನ ವಿರಾಮ ಜಾರಿಯಾಗುವ ಸಾಧ್ಯತೆ ಇದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಇಸ್ರೇಲಿ ಭದ್ರತಾ ಕ್ಯಾಬಿನೆಟ್ ಲೆಬನಾನ್‌ನಲ್ಲಿ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಿದ್ದಾರೆ.

ಇಸ್ರೇಲ್ ಜನರನ್ನು ಉದ್ದೇಶಿಸಿ ಮಾತನಾಡಿದ ನೆತನ್ಯಾಹು, “ನಾವು ಮಧ್ಯಪ್ರಾಚ್ಯದ ಮುಖವನ್ನು ಬದಲಾಯಿಸುತ್ತಿದ್ದೇವೆ. ಉತ್ತಮ ಒಪ್ಪಂದವು ಕಾರ್ಯಗತಗೊಳಿಸಬಹುದಾದವುಗಳಲ್ಲಿ ಒಂದಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕ ರೂಪಿಸಿದ ಯೋಜನೆಯಂತೆ ಹಿಬ್ಬುಲ್ಲಾ ಸಂಘಟನೆಯೊಂದಿಗೆ ಕದನವಿರಾಮ ಘೋಷಿಸುವ ಸಂಬಂಧ ಇಸ್ರೇಲ್‌ನ ಸಂಪುಟವು ಮಂಗಳವಾರ ಒಪ್ಪಿಗೆ ನೀಡುವ ಸಂಭವವಿದೆ. ಈ ಮೂಲಕ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಇಸ್ರೇಲ್-ಹಿಜ್ಜುಲ್ಲಾ ಯುದ್ಧವು ಅಂತ್ಯಗೊಳ್ಳುವ ಸಾಧ್ಯತೆ ಇದೆ.

ಕದನವಿರಾಮ ಘೋಷಣೆಯಾದರೆ ಅದನ್ನು ಜಾರಿಗೊಳಿಸಲು 60 ದಿನಗಳವರೆಗೆ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಹಿಬ್ಬುಲ್ಲಾದ ಹಿಡಿತದಲ್ಲಿರುವ ಲೆಬನಾನ್‌ನ ದಕ್ಷಿಣ ಭಾಗದಲ್ಲಿ ನಿಯೋಜನೆಗೊಂಡಿರುವ ಸೇನೆಯನ್ನು ಇಸ್ರೇಲ್ ವಾಪಸ್ ಕರೆಸಿಕೊಳ್ಳಬೇಕು. ಜೊತೆಗೆ, ಈ ಪ್ರದೇಶದಲ್ಲಿ ಲೆಬನಾನ್ ತನ್ನ ಸೈನ್ಯ ನಿಯೋಜನೆಗೊಳ್ಳಬೇಕು. ಜೊತೆಗೆ, ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯೂ ಇರಲಿದೆ ಎನ್ನಲಾಗಿದೆ.

ಕದನವಿರಾಮ ಕುರಿತು ನಿಗಾ ಇರಿಸಲು ಅಮೆರಿಕ ಅಧ್ಯಕ್ಷತೆಯ ಅಂತರರಾಷ್ಟ್ರೀಯ ಸಮಿತಿಯೊಂದನ್ನು ರಚಿಸಲಾಗುತ್ತದೆ ಎಂದು ಹೇಳಲಾಗಿದೆ. ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಯುದ್ಧದಲ್ಲಿ ಇಸ್ರೇಲ್ ದಾಳಿಗೆ ಲೆಬನಾನ್‌ 3,750 ಮಂದಿ ಮೃತಪಟ್ಟಿದ್ದಾರೆ ಹಾಗೂ 10 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...