ಚಂದ್ರಯಾನ-3ರ ಉಡಾವಣೆ ‘ಕೌಂಟ್‌ಡೌನ್’ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ನಿಧನ

Date:

ಭಾರತದಲ್ಲಿ ರಾಕೇಟ್‌ ಉಡಾವಣೆಗಳ ಸಮಯದ ‘ಕೌಂಟ್‌ಡೌನ್‌’ಗೆ ಧ್ವನಿಯಾಗಿದ್ದ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ಎನ್ ವಲರಮತಿ ನಿಧನರಾಗಿದ್ದಾರೆ.

ತಮಿಳುನಾಡಿನ ಅರಿಯಲೂರು ಮೂಲದ ವಲರ್ಮತಿ ಅವರು ಶನಿವಾರ ಸಂಜೆ ಹೃದಯಾಘಾತದಿಂದ ಚೆನ್ನೈನಲ್ಲಿ ಸಾವನ್ನಪ್ಪಿದ್ದಾರೆ. ಜುಲೈ 14ರಂದು ಉಡಾವಣೆಯಾದ ಯಶಸ್ವಿ ಚಂದ್ರಯಾನ-3 ಅವರ ಕಡೆಯ ಸಂತಸದ ಕ್ಷಣ ಮತ್ತು ಸಾಧನೆಯಾಗಿದೆ.

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ವಿಜ್ಞಾನಿ ವಲರ್ಮತಿ ಅವರು ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಭಾನುವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಇಸ್ರೋದ ಮಾಜಿ ನಿರ್ದೇಶಕ ಡಾ.ಪಿ.ವಿ ವೆಂಕಟಕೃಷ್ಣನ್, “ಶ್ರೀಹರಿಕೋಟಾದಿಂದ ಉಡಾವಣೆಯಾಗುವ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕ್ಷಣಗಣನೆಗೆ ವಲರಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3 ಆಕೆಯ ಅಂತಿಮ ಕ್ಷಣಗಣನೆಯ ಧ್ವನಿಯಾಗಿತ್ತು. ಅನಿರೀಕ್ಷಿತ ನಿಧನ. ತುಂಬಾ ದುಃಖವಾಗುತ್ತಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

2059ರ ಜುಲೈ 31ರಂದು ಜನಿಸಿದ ವಲರ್ಮತಿ ಅವರು 1984ರಲ್ಲಿ ಇಸ್ರೋಗೆ ಸೇರಿದ್ದರು. ಹಲವಾರು ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದರು. ಅವರು RISAT-1ರ ಯೋಜನಾ ನಿರ್ದೇಶಕರಾಗಿದ್ದರು. ಭಾರತದಲ್ಲಿ ಸ್ಥಳೀಯವಾಗಿ ಮೊದಲಿಗೆ ಅಭಿವೃದ್ಧಿಪಡಿಸಿದ ರಾಡಾರ್ ಇಮೇಜಿಂಗ್ ಉಪಗ್ರಹ (RIS) ಮತ್ತು ದೇಶದ ಎರಡನೇ ಅಂತಹ ಉಪಗ್ರಹಗಳ ನಿರ್ಮಾಣದಲ್ಲಿ ಅವರು ಪಾತ್ರ ವಹಿಸಿದ್ದರು.

2012ರ ಏಪ್ರಿಲ್‌ನಲ್ಲಿ RISAT-1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...