PSLV-C62 ಮೂಲಕ 14 ಉಪಗ್ರಹಗಳ ಯಶಸ್ವಿ ಉಡಾವಣೆ ಮಾಡಿದ ISRO

Date:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. 2026ರಲ್ಲಿ ಇಸ್ರೋದ ಮೊದಲ ಉಡಾವಣೆ ಇದಾಗಿದೆ.

ಸೋಮವಾರ ಬೆಳಿಗ್ಗೆ 10.18ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ನಡೆದಿದ್ದು, ಇದು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ (PSLV) ಸರಣಿಯ 64ನೇ ಹಾಗೂ PSLV-DL ಆವೃತ್ತಿಯ 5ನೇ ರಾಕೆಟ್ ಇದಾಗಿದೆ.

PSLV-C62 ರಾಕೆಟ್ 260 ಟನ್ ನಷ್ಟು ತೂಕ ಹೊಂದಿದೆ. DRDOನ ಕಡಲ ಕಣ್ಗಾವಲು ಮತ್ತು ಭೂ ವೀಕ್ಷಣಾ ಅಗತ್ಯಗಳಿಗಾಗಿ ಅಭಿವೃದ್ಧಿಪಡಿಸಲಾದ ಪ್ರಾಥಮಿಕ EOS-N1 ಉಪಗ್ರಹವನ್ನು ಹೊತ್ತೊಯ್ದಿದೆ.

ಇಸ್ರೊ ಅಂಗಸಂಸ್ಥೆಯಾದ ನ್ಯೂಸ್ಪೇಸ್ ಇಂಡಿಯಾ ಲಿಮಿಡೆಟ್ ನೇತೃತ್ವದಲ್ಲಿ ದೇಶೀಯ ಹಾಗೂ ವಿದೇಶದ 14 ಉಪಗ್ರಹಗಳನ್ನು 17 ನಿಮಿಷಗಳ ಪ್ರಯಾಣದ ನಂತರ, ಸುಮಾರು 511 ಕಿ,ಮೀ ಎತ್ತರದಲ್ಲಿ ಕಕ್ಷೆಗೆ ಸೇರಿಸುವ ನಿರೀಕ್ಷೆಯಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...