‘ಉಸಿರುಗಟ್ಟಿದಂತಿದೆ’: ಬ್ಯಾಂಕಿಂಗ್‌ ಕೆಲಸ ಟೀಕಿಸಿ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಲು ಬ್ಯಾಂಕ್‌ ಉದ್ಯೋಗಿ ನಿರ್ಧಾರ

Date:

ತಮ್ಮ ಕೆಲಸವು ಮನಸ್ಸಿನ ಶಾಂತಿಯನ್ನು ಕಸಿದುಕೊಂಡಿದೆ. ಪ್ರತಿಯಾಗಿ, ಹಲವಾರು ಆರೋಗ್ಯ ಸಮಸ್ಯೆಗಳನ್ನು ನೀಡಿದೆ ಎಂದು ಸರ್ಕಾರಿ ಬ್ಯಾಂಕ್‌ ನೌಕರರೊಬ್ಬರು ತಮ್ಮ ಉದ್ಯೋಗವನ್ನು ಟೀಕಿಸಿದ್ದಾರೆ. ತಮ್ಮ ನೌಕರಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ತಮ್ಮ ಉದ್ಯೋಗದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, “ನನ್ನ ನೌಕರಿಯಿಂದ ನನಗೆ ಸಾಮಾನ್ಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ದೇಶದ ದೂರದ ಪ್ರದೇಶಗಳಿಗೆ ಕಡಿಮೆ ಅವಧಿಯಲ್ಲಿಯೇ ವರ್ಗಾವಣೆ ಮಾಡಲಾಗುತ್ತಿದೆ. ದಿನದ 12 ಗಂಟೆಗಳ ಕಾಲ ಫೋನ್‌ ಕರೆಯಲ್ಲಿ ಅಧಿಕಾರಿಗಳೊಂದಿಗೆ ಲಭ್ಯವಿರಬೇಕು. ಭಾನುವಾರವೂ ಸಹ ಕೆಲಸ ಇರುತ್ತದೆ” ಎಂದು ಹೇಳಿಕೊಂಡಿದ್ದಾರೆ.

“ಸರ್ಕಾರಿ ಬ್ಯಾಂಕಿನಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಆದರೆ, ನನಗೆ ಈ ನೌಕರಿಯು ಉಸಿರುಗಟ್ಟಿದಂತಿದೆ. ಇನ್ನು ಮುಂದೆಯೂ ನಾನು ಈ ಕೆಲಸವನ್ನು ಮಾಡಲು ಸಾಧ್ಯವಿಲ್ಲ” ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಜಿಎಸ್‌ಟಿ 2.0 | ವಸ್ತುಗಳ ಬೆಲೆಯೇ 50% ಕಡಿತ; ತಪ್ಪು ಲೆಕ್ಕ ಹೇಳಿ ಪೇಚಿಗೆ ಸಿಲುಕಿದ ಬಿಜೆಪಿ ಸಂಸದ

“ನಾನು ಅಖಿಲ ಭಾರತ ಮಟ್ಟದ ಮೂರು ಸುತ್ತುಗಳ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಉದ್ಯೋಗ ಪಡೆದುಕೊಂಡೆ. ಈ ಕೆಲಸವು ಉತ್ತರ ಭಾರತ ಭಾಗದಲ್ಲಿ ಸುರಕ್ಷಿತ ಮತ್ತು ಪ್ರತಿಷ್ಠಿತವೆಂದು ಪರಿಗಣಿಸಲಾಗುತ್ತದೆ. ಪಿಎಸ್‌ಯು ಬ್ಯಾಂಕ್ ಕೆಲಸವು ಸ್ಥಿರತೆಯ ಜೀವನ, ಯೋಗ್ಯವಾದ ಮನೆ, ಕಾರು, ಸ್ಥಿರ ಸಂಬಳ ಹಾಗೂ ಸಮಾಜದಲ್ಲಿ ಒಂದು ನಿರ್ದಿಷ್ಟ ಗೌರವವನ್ನು ನೀಡುತ್ತದೆ. ಆದರೆ, ಈ ಕೆಲಸವು ನನಗೆ ಶಾಂತಿಯನ್ನು ನೀಡುತ್ತಿಲ್ಲ” ಎಂದಿದ್ದಾರೆ.

“ಕೆಲಸದ ಒತ್ತಡದಿಂದಾಗಿ ಅಧಿಕ ರಕ್ತದೊತ್ತಡ, ಥೈರಾಯ್ಡ್‌ ಸಮಸ್ಯೆ ಹಾಗೂ ಕೊಲೆಸ್ಟ್ರಾಲ್ ಪ್ರಮಾಣ ಏರಿಕೆ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.

“ಈ ಕೆಲಸದಲ್ಲಿ ಹಲವಾರು ಸಮಸ್ಯೆಗಳಿವೆ. ಮೊದಲನೆಯದಾಗಿ, ದೇಶದ ದೂರದ ಭಾಗಗಳಿಗೆ ಕಡಿಮೆ ಸಮಯದಲ್ಲಿ ವರ್ಗಾವಣೆ ಮಾಡಲಾಗುತ್ತದೆ. ಜೊತೆಗೆ, ಸಾರ್ವಜನಿಕರಿಗೆ ನಿಷ್ಪ್ರಯೋಜಕ ವಿಮಾ ಸೌಲಭ್ಯಗಳನ್ನು ಮಾರಾಟ ಮಾಡುವಂತೆ ಪ್ರತಿ ತಿಂಗಳಿಗೂ ಟಾರ್ಗೆಟ್‌ ಕೊಡಲಾಗುತ್ತದೆ. ಗುರಿಯನ್ನು ತಲುಪಲು ಭಾನುವಾರವೂ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ಮೇಲಧಿಕಾರಿಗಳೊಂದಿಗೆ ಫೋನ್‌ನಲ್ಲಿ ಲಭ್ಯವಿರಬೇಕಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...