14 ವರ್ಷಗಳ ಹಿಂದೆ ಇಬ್ಬರು ಕೈದಿಗಳ ಹತ್ಯೆ: ಜೈಲರ್, 6 ಕಾನ್‌ಸ್ಟೆಬಲ್‌ಗಳಿಗೆ ಜೀವಾವಧಿ ಶಿಕ್ಷೆ

Date:

14 ವರ್ಷಗಳ ಹಿಂದೆ ಜೈಲಿನಲ್ಲಿ ನಡೆದಿದ್ದ ಘಟನೆಯಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಜೈಲಿನ ಅಂದಿನ ಜೈಲರ್ ಮತ್ತು ಆರು ಮಂದಿ ಕಾನ್ಸ್‌ಸ್ಟೆಬಲ್‌ಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

2010ರ ಮಾರ್ಚ್‌ನಲ್ಲಿ, ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಒರೈ ಜೈಲಿನಲ್ಲಿ ಘರ್ಷಣೆ ನಡೆದಿತ್ತು. ಘರ್ಷಣೆಯಲ್ಲಿ ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿಯ ಸಹಚರರು ಎನ್ನಲಾಗಿದ್ದ, ವಿಚಾರಣಾ ಕೈದಿಗಳಾದ ಪ್ರಿನ್ಸ್ ಅಹ್ಮದ್ ಮತ್ತು ನಜೀರ್ ಖಾನ್ ಕೊಲೆಯಾಗಿದ್ದರು. ಅಲ್ಲದೆ, 13 ಇತರರು ಗಾಯಗೊಂಡಿದ್ದರು. ಅವರನ್ನು ಒರೈ ಜೈಲಿನ ಆಗಿನ ಜೈಲರ್, ಆರು ಕಾನ್‌ಸ್ಟೆಬಲ್‌ಗಳು ಮತ್ತು ಏಳು ಜೈಲು ಕೈದಿಗಳನ್ನು ಕೊಲೆಗೈದಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿರುವ ಜಲೌನ್‌ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಲಲ್ಲು ಸಿಂಗ್‌ ಅವರು ಎಲ್ಲ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ (14 ವರ್ಷ ಜೈಲು) ಮತ್ತು ತಲಾ 1 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒರೈ ಜೈಲಿನಲ್ಲಿ ಜೈಲು ಅಧಿಕಾರಿಗಳು ಕೈದಿಗಳಿಂದ ಹಣ ಸುಲಿಗೆ ಮಾಡುತ್ತಿದ್ದಾರೆ. ಅವರಿಗೆ ಹಣ ನೀಡಲು ಸಾಧ್ಯವಾಗದಿದ್ದ ಕಾರಣಕ್ಕೆ ನನ್ನ ಮಗನನ್ನು ಜೈಲರ್ ಮತ್ತು ಇತರ ಜೈಲು ಅಧಿಕಾರಿಗಳು ಕೊಂದಿದ್ದಾರೆ ಎಂದು ಆರೋಪಿಸಿ ನಜೀರ್ ಅವರ ತಂದೆ ಅಯೂಬ್ ಖಾನ್ ದೂರು ದಾಖಲಿಸಿದ್ದರು” ಎಂದು ಪ್ರಾಸಿಕ್ಯೂಷನ್ ಇಲಾಖೆಯ ಅಧಿಕಾರಿ ತಳಿಸಿದ್ದಾರೆ.

ಜೈಲಿನಲ್ಲಿ ನಡೆಯುತ್ತಿದ್ದ ಅವ್ಯವಹಾರಗಳ ವಿರುದ್ಧ ಪ್ರತಿಭಟಿಸಿದ್ದಕ್ಕೆ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಗಾಯಗೊಂಡಿದ್ದ ಕೈದಿಗಳು ಆರೋಪಿಸಿದ್ದಾರೆ.

ಅಯೂಬ್ ಖಾನ್ ಅವರ ದೂರಿನ ಆಧಾರದ ಮೇಲೆ, ಜೈಲು ಅಧಿಕಾರಿಗಳು ಮತ್ತು ಕೆಲವು ಕೈದಿಗಳ ವಿರುದ್ಧ 302 (ಕೊಲೆ) ಮತ್ತು 384 (ಸುಲಿಗೆ) ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾದ ಒರೈ ಜೈಲಿನ ಅಂದಿನ ಜೈಲು ಸೂಪರಿಂಟೆಂಡೆಂಟ್ ಅವಿನಾಶ್ ಗೌತಮ್ ಮತ್ತು ಉಪ ಜೈಲರ್ ಜಿ ಮಿಶ್ರಾ ಅವರು ಅಲಹಾಬಾದ್ ಹೈಕೋರ್ಟ್‌ನಿಂದ ತಮ್ಮ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ತಂದಿದ್ದರು.

ಶಿಕ್ಷೆಗೊಳಗಾಗಿರುವರನ್ನು ಆಗಿನ ಜೈಲರ್ ನಾಥು ಸಿಂಗ್; ಕಾನ್‌ಸ್ಟೆಬಲ್‌ಗಳಾದ ರಾಮಮನೋರತ್, ರಾಮ್ ಶರಣ್, ರಾಜ್‌ಕುಮಾರ್, ನಿಪೇಂದ್ರ, ಅನಿಲ್ ಶರ್ಮಾ ಮತ್ತು ಶಶಿಕಾಂತ್ ತಿವಾರಿ. ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕೈದಿಗಳನ್ನು ಸುಧಾರ್ ಸಿಂಗ್, ಸತ್ಯಭಾನ್, ರಾಜಾ ಭಯ್ಯಾ, ರಾಜು ತೀತ್ರಾ, ರಾಮನಾರಾಯಣ್, ಅಖಿಲೇಶ್ ಮತ್ತು ಮುನ್ನಾ ಕೇವತ್ ಎಂದು ಗುರುತಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...