ಜೈಪುರ – ಮುಂಬೈ ರೈಲಿನಲ್ಲಿ ನಾಲ್ವರನ್ನು ಕೊಂದಿದ್ದ ಆರ್‌ಪಿಎಫ್‌ ಕಾನ್‌ಸ್ಟೆಬಲ್ ಸೇವೆಯಿಂದ ವಜಾ

Date:

ಕಳೆದ ತಿಂಗಳು ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್‌) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಚೌಧರಿ ಎಂಬಾತನನ್ನು ಸೇವೆಯಿಂದ ವಜಾ ಗೊಳಿಸಲಾಗಿದೆ.

ಮುಂಬೈ ಸೆಂಟ್ರಲ್‌ನ ಆರ್‌ಪಿಎಫ್ ಹಿರಿಯ ವಿಭಾಗೀಯ ಭದ್ರತಾ ಆಯುಕ್ತರು ಚೌಧರಿಯನ್ನು ವಜಾ ಗೊಳಿಸುವ ಆದೇಶವನ್ನು ಆಗಸ್ಟ್ 14 ರಂದು ಹೊರಡಿಸಿದ್ದಾರೆ. ಅಧಿಕಾರಿಯ ಪ್ರಕಾರ, ಚೌಧರಿ ಈ ಹಿಂದೆ ಕನಿಷ್ಠ ಮೂರು ಶಿಸ್ತು-ಸಂಬಂಧಿತ ಘಟನೆಗಳಲ್ಲಿ ಭಾಗಿಯಾಗಿದ್ದ

ಆರೋಪಿ ಚೇತನ್ ಸಿಂಗ್ ಜುಲೈ 31ರಂದು ತನ್ನ ಹಿರಿಯ ಅಧಿಕಾರಿ, ಎಎಸ್‌ಐ ಟಿಕಾರಾಂ ಮೀನಾ ಮತ್ತು ಇತರ ಮೂವರು ಮುಸ್ಲಿಂ ಪ್ರಯಾಣಿಕರನ್ನು ಮುಂಬೈ ಹೊರ ವಲಯದ ಪಾಲ್ಘರ್ ರೈಲು ನಿಲ್ದಾಣದ ಸಮೀಪ ಜೈಪುರ – ಮುಂಬೈ ಎಕ್ಸ್‌ಪ್ರೆಸ್‌ನ ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚೀನಾದೊಂದಿಗೆ ಮೋದಿ ಸರ್ಕಾರ ರಾಜಿ ಮಾಡಿಕೊಂಡಿದೆಯೇ: ಗಡಿ ವಿವಾದಕ್ಕೆ ಕಾಂಗ್ರೆಸ್ ಪ್ರಶ್ನೆ

ರೈಲಿನ ಬೇರೆ ಬೇರೆ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಹುಸೇನ್, ಭಾನ್‌ಪುರ್‌ವಾಲಾ, ಸಯ್ಯದ್ ಸಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ. ಕನಿಷ್ಠ ಮೂರು ಶಿಸ್ತು ಕ್ರಮ ಸಂಬಂಧಿತ ಘಟನೆಗಳಲ್ಲಿ ಆರೋಪಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಚೌಧರಿ ನ್ಯಾಯಾಂಗ ಬಂ ಧನದಲ್ಲಿದ್ದು, ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ.

ಬುರ್ಖಾಧಾರಿ ಮಹಿಳೆಗೆ ‘ಜೈ ಮಾತಾ ದಿ’ ಎನ್ನುವಂತೆ ಒತ್ತಾಯ

ಜುಲೈ 31ರಂದು ಜೈಪುರ್-ಮುಂಬೈ ಸೆಂಟ್ರಲ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ಮಂದಿ ಪ್ರಯಾಣಿಕರನ್ನು ಗುಂಡಿಟ್ಟು ಹತ್ಯೆಗೈದ ಆರೋಪ ಎದುರಿಸುತ್ತಿರುವ ರೈಲ್ವೆ ರಕ್ಷಣಾ ದಳದ ಪೊಲೀಸ್ ಪೇದೆ ಚೇತನ್ ಸಿಂಗ್ ಚೌಧರಿ, ಬುರ್ಖಾಧಾರಿ ಮಹಿಳಾ ಪ್ರಯಾಣಿಕರೊಬ್ಬರನ್ನು ಬೆದರಿಸಿ, “ಜೈ ಮಾತಾ ದಿ” ಎಂದು ಪಠಿಸುವಂತೆಯೂ ಒತ್ತಾಯಸಿದ್ದ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪೊಲೀಸ್ ಮೂಲಗಳ ಪ್ರಕಾರ, ಈ ಪ್ರಕರಣದ ತನಿಖೆ ನಡೆಸುತ್ತಿರುವ ಬೊರಿವಿಲಿ ಸರ್ಕಾರಿ ರೈಲ್ವೆ ಪೊಲೀಸರು ಸದರಿ ಮಹಿಳೆಯನ್ನು ಪತ್ತೆ ಹಚ್ಚಿದ್ದು, ಆಕೆಯನ್ನು ಪ್ರಮುಖ ಸಾಕ್ಷಿಯನ್ನಾಗಿಸಿದ್ದಾರೆ. ಪೊಲೀಸರು ಆಕೆಯ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ. ಈ ಘಟನೆಯು ರೈಲಿನಲ್ಲಿನ ಸಿಸಿಟಿವಿ ಕ್ಯಾಮೆರಾಗಳಲ್ಲೂ ಸೆರೆಯಾಗಿದೆ.

ಈ ಘಟನೆ ಕಂಡು ಆಘಾತಗೊಂಡ ಪ್ರಯಾಣಿಕರು ರೈಲಿನ ಚೈನನ್ನು ಎಳೆದಿದ್ದರಿಂದ ಮೀರಾ ರಸ್ತೆ ನಿಲ್ದಾಣದ ಬಳಿ ರೈಲು ನಿಲುಗಡೆಯಾಗಿತ್ತು. ಆಗ ಘಟನಾ ಸ್ಥಳದಿಂದ ಪಾರಾಗಲು ಚೌಧರಿ ಯತ್ನಿಸುವಾಗ ಆತನನ್ನು ಶಸ್ತ್ರಾಸ್ತ ಸಮೇತ ಸೆರೆ ಹಿಡಿಯಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...